ರಾಜ್ಯ

ಗುಂಡ್ಲುಪೇಟೆ: ಕ್ಷುಲ್ಲಕ ಕಾರಣಕ್ಕೆ ಪ್ರಾರಂಭವಾದ ಜಗಳ ಕೊಲೆಯಲ್ಲಿ ಅಂತ್ಯ. 

ಜಮೀನಿಗೆ ಪೈಪ್ ನೀಡಿದ ವಿಚಾರವಾಗಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾದ ಘಟನೆ ತಾಲೂಕಿನ ಶಿವಪುರ ಗ್ರಾಮದಲ್ಲಿ ನಡೆದಿದೆ.

ಗುಂಡ್ಲುಪೇಟೆ: ಜಮೀನಿಗೆ ಪೈಪ್ ನೀಡಿದ ವಿಚಾರವಾಗಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾದ ಘಟನೆ ತಾಲೂಕಿನ ಶಿವಪುರ ಗ್ರಾಮದಲ್ಲಿ ನಡೆದಿದೆ.

ಇದೇ ಗ್ರಾಮದ ಮಾದೇಶ ಕೊಲೆಗೀಡಾಗಿರುವ ವ್ಯಕ್ತಿ. ಈತನನ್ನು ರಾಜು ಎಂಬಾತ ಕೊಲೆ ಮಾಡಿ ಪೊಲೀಸರಿಗೆ ಶರಣಾಗಿದ್ದಾನೆ. 

ಮಾದೇಶನಿಗೆ ಬೆಳೆಗೆ ನೀರು ಹಾಯಿಸಲು ಸ್ಪ್ರಿಂಕ್ಲರ್ ಪೈಪ್​​ಗಳನ್ನು ರಾಜು ನೀಡಿದ್ದ, ತಿಂಗಳು ಕಳೆದರೂ ಮಾದೇಶ ವಾಪಸ್ ನೀಡಿರಲಿಲ್ಲ. ಈ ವಿಚಾರವಾಗಿ ಇಬ್ಬರ ನಡುವೆ ಗಲಾಟೆಯಾಗಿದೆ. ಕುಪಿತಗೊಂಡ ರಾಜು ತನ್ನಲ್ಲಿದ್ದ ಮಚ್ಚಿನಿಂದ ಹೊಡೆದು ಮಾದೇಶನನ್ನು ಕೊಲೆ ಮಾಡಿದ್ದಾನೆ.ಮಂಗಳವಾರ ಮಧ್ಯ ರಾತ್ರಿಯೇ ಕೊಲೆಯಾಗಿದೆ. ಬೆಳಗ್ಗೆ 10ರ ಸಮಯದಲ್ಲಿ ರಾಜು ಪೊಲೀಸ್​ ಠಾಣೆಗೆ ಬಂದು ಶರಣಾದಾಗ ವಿಷಯ ಬೆಳಕಿಗೆ ಬಂದಿದೆ. 

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

ವರದಿ: ಗುಳಿಪುರ ನಂದೀಶ್

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ಶಿವಮೊಗ್ಗ: 10 ಕಿಲೋ ವ್ಯಾಟ್ FM ಟ್ರಾನ್ಸ್ಮಿಟರ್ ಕೇಂದ್ರ ಉದ್ಘಾಟನೆ! ಆಕಾಶವಾಣಿ, ದೂರದರ್ಶನ ಅಭಿವೃದ್ದಿಗೆ 2,500 ಕೋಟಿ ಹಣ ವೆಚ್ಚ- ಡಾ. ಎಲ್ ಮುರುಗನ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

SCROLL FOR NEXT