ರಾಜ್ಯ

ಕೊರೊನಾ ಭೀತಿ: ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆ ಸೀಲ್ ಡೌನ್

Manjula VN

ಬೆಂಗಳೂರು: ಕೋವಿಡ್-19 ವಿರುದ್ಧ ಸಮರ ಸಾರುವ ಮೂಲಕ‌ ಕರ್ತವ್ಯ ನಿರತ ಸಿಲಿಕಾನ್ ಸಿಟಿ ಪೊಲೀಸರಿಗೆ ಕೊರೊನಾ ವೈರಸ್ ಬೆಂಬಿಡದೇ ಕಾಡುತ್ತಿದೆ.

ನಗರದ ಪಶ್ಚಿಮ ವಿಭಾಗದ ಮತ್ತೊಂದು ಪೊಲೀಸ್ ಠಾಣೆಗೆ ಕೊರೊನಾ ವಕ್ಕರಿಸಿದ್ದು, ಇಂದು ಸೀಲ್​ಡೌನ್ ಆಗಲಿದೆ.

ಕೊರೊನಾ ಭೀತಿಯಿಂದ ಇಂದು ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆ ಸೀಲ್‌ಡೌನ್ ಗೆ ಒಳಗಾಗಲಿದೆ.

ಇತ್ತೀಚೆಗೆ ಕೊಲೆ ಪ್ರಕರಣವನ್ನು ಭೇದಿಸಿದ ಪೊಲೀಸರು 9 ಆರೋಪಿಗಳನ್ನು ಬಂಧಿಸಿದ್ದರು. ನಂತರ ಎಲ್ಲಾ ಆರೋಪಿಗಳನ್ನು ಕೋವಿಡ್-19 ಪರೀಕ್ಷೆ ಒಳಪಡಿಸಲಾಗಿತ್ತು. ಇದೀಗ ಈ ಪೈಕಿ ಮೂವರು ಆರೋಪಿಗಳಿಗೆ ಕೊರೊನಾ ಸೋಂಕು ಇರುವುದು ವೈದ್ಯಕೀಯ ಪರೀಕ್ಷೆ ಯಿಂದ ದೃಢಪಟ್ಟಿದೆ. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ಆರೋಪಿಗಳ ಸಂಪರ್ಕದಲ್ಲಿದ್ದ ಪೊಲೀಸರಿಗೆ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. 

ಈಗಾಗಲೇ ಸಿಲಿಕಾನ್ ಸಿಟಿಯ ಪಶ್ಚಿಮ ವಿಭಾಗದಲ್ಲಿ ಡಿಸಿಪಿ ಕಚೇರಿ, ಚಿಕ್ಕಪೇಟೆ ಎಸಿಪಿ ಕಚೇರಿ, ಉಪ್ಪಾರಪೇಟೆ, ಜೆ.ಜೆ.ನಗರ, ಕಾಮಾಕ್ಷಿಪಾಳ್ಯ, ಕೆ.ಪಿ.ಅಗ್ರಹಾರ, ಕೆಂಗೇರಿ, ಸಿಟಿ ಮಾರ್ಕೆಟ್, ಕಲಾಸಿಪಾಳ್ಯ, ಚಾಮರಾಜಪೇಟೆ ಠಾಣೆ ಸೇರಿ 10 ಠಾಣೆಗಳು ಈಗಾಗಲೇ ಸೀಲ್‌ಡೌನ್ ಆಗಿವೆ. 

ಇಂದು ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆ‌ಯನ್ನು ಸೀಲ್‌ಡೌನ್ ಮಾಡಲಾಗುತ್ತದೆ.

SCROLL FOR NEXT