ರಾಜ್ಯ

ಸರ್ಕಾರ ಈಗ ಇಂಗು ತಿಂದ ಮಂಗನಂತಾಗಿದೆ: ಹೆಚ್.ಡಿ. ಕುಮಾರಸ್ವಾಮಿ ಟೀಕೆ

Sumana Upadhyaya

ಬೆಂಗಳೂರು: ಆರಂಭಿಕ ಹಂತದಲ್ಲೇ ಕೋವಿಡ್-19 ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಇದರಿಂದ ಕೊರೋನಾ ಸೋಂಕು ಪೀಡಿತರು ಬೆಡ್ ಗಳಿಲ್ಲದೆ, ಚಿಕಿತ್ಸೆ ಇಲ್ಲದೆ ಮನೆಯಲ್ಲೇ ನರಳಿ ಸಾಯುತ್ತಿದ್ದಾರೆ. ಕಳೆದ ಮೂರು ತಿಂಗಳಿಂದ ಮುಖ್ಯಮಂತ್ರಿ ಸೇರಿದಂತೆ ಸಚಿವರು ಮಾತಿನ ಮಂಟಪ ಕಟ್ಟುವುದರಲ್ಲಿ ಕಾಲ ಕಳೆಯುತ್ತಿದ್ದಾರೆ ಎಂದು ಟೀಕಾ ಪ್ರಹಾರ ನಡೆಸಿದ್ದಾರೆ.

ಸರ್ಕಾರ ಈಗ ಇಂಗು ತಿಂದ ಮಂಗನಂತಾಗಿದ್ದು, ಸೋಂಕಿತರ ಸಂಖ್ಯೆಯ ಗಣನೀಯ ಏರಿಕೆಯನ್ನು ತಡೆಯಲು ಪೇಚಾಡುತ್ತಿದೆ. ನೆರೆಯ ಕೇರಳ ಸರ್ಕಾರ ಕೊರೋನ ತಡೆಗೆ ಕೈಗೊಂಡ ಕ್ರಮಗಳ 'ಸಿದ್ದ' ಮಾದರಿ ಕಣ್ಣೆದುರಿಗಿದೆ. ರಾಜ್ಯದ ಸಚಿವರಲ್ಲಿ ಸಮನ್ವಯವಿಲ್ಲ, ಒಬ್ಬೊಬ್ಬರದು ಒಂದೊಂದು ನಿಲುವು. ಇವರ ತಿಕ್ಕಾಟದಲ್ಲಿ ರಾಜ್ಯದ ಜನತೆ ಹೈರಾಣಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

SCROLL FOR NEXT