ರಾಜ್ಯ

ಕೊರೋನಾ ಸೋಂಕಿತರ ಅಂತ್ಯಸಂಸ್ಕಾರಕ್ಕೆ ಊರ ಹೊರಗೆ ಎರಡು ಎಕರೆ ಜಮೀನು ಮೀಸಲು: ಬಿ.ಶ್ರೀರಾಮುಲು

Shilpa D

ಬೆಂಗಳೂರು: ಕೊರೋನಾ ಸೋಂಕಿನಿಂದ ಮೃತಪಟ್ಟವರ ಶವಗಳ ಅಂತ್ಯಕ್ರಿಯೆಗೆ ಪ್ರತ್ಯೇಕವಾಗಿ ಗ್ರಾಮದಿಂದ ಹೊರಗೆ ಕನಿಷ್ಠ 2 ಎಕರೆ ಜಮೀನು ಗುರುತಿಸಲು ಶೀಘ್ರದಲ್ಲೇ ಆದೇಶ ಮಾಡುವುದಾಗಿ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು ಸೋಂಕಿತರ ಶವಗಳ ಅಂತ್ಯಕ್ರಿಯೆ ವಿಚಾರವಾಗಿ ದೂರುಗಳು ಬರುತ್ತಿವೆ. ನಗರ ವ್ಯಾಪ್ತಿಯಲ್ಲಿ ಅಂತ್ಯಕ್ರಿಯೆ ಮಾಡುವಾಗ ಅವರಿಗೆ ಬಳಸಿದ ಪೇಪರ್‌ನ ಕಣಗಳು ಗಾಳಿ ಮೂಲಕ ಸುತ್ತಮುತ್ತ ಮನೆಗಳಿಗೆ ಹರಡುತ್ತಿವೆ ಎಂಬ ಆಕ್ಷೇಪಣೆಗಳು ಹೆಚ್ಚಿವೆ. ಪ್ರತ್ಯೇಕ ಜಾಗ ಗುರುತಿಸುವಂತೆ ಆಯಾ ಜಿಲ್ಲಾಡಳಿತಕ್ಕೆ  ಸೂಚಿಸಲಾಗುವುದು ಎಂದು ತಿಳಿಸಿದರು.

ಇನ್ನೂ ಸಾರ್ವಜನಿಕವಾಗಿ ಪಿಪಿಇ ಕಿಟ್ ಬಿಸಾಡುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುವುದು ಎಂದು ಶ್ರೀರಾಮುಲು ತಿಳಿಸಿದ್ದಾರೆ. ಇಂಥ ವಿಷಯಗಳಲ್ಲಿ ನಿರ್ಲಕ್ಷ್ಯ ಮಾಡುವುದರಿಂದ ಸಾಮಾನ್ಯ ಜನರ ಜೀವ ಅಪಾಯದ ಅಂಚಿಗೆ ತಳ್ಳುತ್ತದೆ ಎಂದು ಹೇಳಿದ್ದಾರೆ.

ಜಿಲ್ಲೆಯಲ್ಲಿ ಎರಡು ಮೂರು ದಿನಗಳಲ್ಲಿ ಕೊರೋನಾ ಪರೀಕ್ಷಾ ಲ್ಯಾಬ್ ತೆರೆಯಲಾಗುತ್ತದೆ. ಸುಮಾರು 10 ಸಾವಿರ ಬೆಡ್‍ಗಳ ವ್ಯವಸ್ಥೆ ಮಾಡುವುದರ ಮೂಲಕ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಕೋವಿಡ್-19 ಪರೀಕ್ಷೆಗಳನ್ನು ಹೆಚ್ಚು ಮಾಡಲು ಹಾಗೂ ವರದಿಗಳು ಬೇಗ ಬರಲು ಬೆಂಗಳೂರಿನಲ್ಲಿ ಲ್ಯಾಬ್‍ಗಳು ಸೇರಿದಂತೆ ಪ್ರತಿ ಜಿಲ್ಲೆಯಲ್ಲಿ ಒಂದು ಲ್ಯಾಬ್ ವ್ಯವಸ್ಥೆ ಮಾಡಲಾಗಿದೆ" ಎಂದು ಮಾಹಿತಿ ನೀಡಿದರು.

SCROLL FOR NEXT