ರಾಜ್ಯ

ಹಾಸನದಲ್ಲಿ ಕೊರೊನಾಗೆ ಮತ್ತೊಬ್ಬರು ಸಾವು; ಮೃತರ ಸಂಖ್ಯೆ 6ಕ್ಕೆ ಏರಿಕೆ

Shilpa D

ಹಾಸನ: ಜಿಲ್ಲೆಯಲ್ಲಿ ಮತ್ತೊಬ್ಬರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಸಕಲೇಶಪುರ ತಾಲ್ಲೂಕಿನ 75 ವರ್ಷದ ಮಹಿಳೆ ಕಳೆದ ರಾತ್ರಿ ಕೊನೆಯುಸಿರೆಳೆದಿದ್ದಾರೆ. 

ತೀವ್ರ ಉಸಿರಾಟದ ತೊಂದರೆ ಹಾಗೂ ರಕ್ತದ ಒತ್ತಡದಿಂದ ಬಳಲುತ್ತಿದ್ದ ಅವರನ್ನು ಹಾಸನದ ಕೋವಿಡ್‌ ಆಸ್ಪತ್ರೆಯ ಐ.ಸಿ.ಯುವಿನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ‌ಫಲಕಾರಿಯಾಗದೆ ಬೆಳಗ್ಗಿನ ಜಾವ 2.50ಕ್ಕೆ ಅಸುನೀಗಿದ್ದಾರೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ ಕೃಷ್ಣಮೂರ್ತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ ಸತೀಶ್ ತಿಳಿಸಿದ್ದಾರೆ.

ಸದ್ಯ ಜಿಲ್ಲೆಯಲ್ಲಿ ಇಷ್ಟರವರೆಗೆ 441 ಪಾಸಿಟಿವ್‌ ಪ್ರಕರಣಗಳು ದೃಢವಾಗಿದೆ. ಈವರೆಗೆ ಜಿಲ್ಲೆಯಲ್ಲಿ 5888 ಸ್ಯಾಂಪಲ್ ಪರೀಕ್ಷೆ‌ ನಡೆಸಲಾಗಿದೆ. ಸದ್ಯ ಜಿಲ್ಲಾಡಳಿತ ಕೂಡ ಕೊರೊನಾ ನಿಯಂತ್ರಣಕ್ಕಾಗಿ ಹರಸಾಹಸ ಪಡುತ್ತಿದೆ. ಎಲ್ಲೆಡೆ ಮುನ್ನೆಚ್ಚರಿಕಾ ಕ್ರಮಕೈಗೊಂಡಿದೆ.
 

SCROLL FOR NEXT