ಸಂಗ್ರಹ ಚಿತ್ರ 
ರಾಜ್ಯ

ಎಸ್ಎಸ್ಎಲ್'ಸಿ ಪ್ರಥಮ ಭಾಷೆ ಕನ್ನಡ ಪರೀಕ್ಷೆ ಯಶಸ್ವಿ: ಶೇ.98ರಷ್ಟು ವಿದ್ಯಾರ್ಥಿಗಳು ಹಾಜರ್, ನಾಲ್ವರು ಡಿಬಾರ್

ರಾಜ್ಯದಾದ್ಯಂತ ಗುರುವಾಡ ನಡೆದ ಎಸ್ಎಸ್ಎಲ್'ಸಿ ಪ್ರಥಮ ಭಾಷೆ ಕನ್ನಡ ಪರೀಕ್ಷೆ ಶೇ.98.12ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದು, ಪರೀಕ್ಷೆಯು ಯಶಸ್ವಿಯಾಗಿ ನಡೆದಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಹೇಳಿದ್ದಾರೆ. 

ಬೆಂಗಳೂರು: ರಾಜ್ಯದಾದ್ಯಂತ ಗುರುವಾಡ ನಡೆದ ಎಸ್ಎಸ್ಎಲ್'ಸಿ ಪ್ರಥಮ ಭಾಷೆ ಕನ್ನಡ ಪರೀಕ್ಷೆ ಶೇ.98.12ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದು, ಪರೀಕ್ಷೆಯು ಯಶಸ್ವಿಯಾಗಿ ನಡೆದಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಹೇಳಿದ್ದಾರೆ. 

ಪರೀಕ್ಷೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರೀಕ್ಷೆಯ 6ನೇ ದಿನವಾದ ಗುರುವಾರ ಪ್ರಥಮ ಭಾಷೆ ಕನ್ನಡ, ಹಿಂದಿ, ತೆಲುಗು, ಮರಾಠಿ, ತಮಿಳು, ಉರ್ದು, ಇಂಗ್ಲೀಷ್ ಮತ್ತು ಸಂಸ್ಕೃತ ಪರೀಕ್ಷೆಗಳಿಗೆ ಒಟ್ಟಾರೆ 7,78,618 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ 7,64,006 ಮಂದಿ ಪರೀಕ್ಷೆ ಬರೆದಿದ್ದಾರೆ. 

14,612 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಕಳೆದ ವರ್ಷ ಶೇ.98.93ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದರು ಎಂದು ಮಾಹಿತಿ ನೀಡಿದ್ದಾರೆ. 

ಕಂಟೈನ್ಮೆಂಟ್ ವಲಯದಲ್ಲಿ 3,890 ವಿದ್ಯಾರ್ಥಿಗಳು ಹಾಗೂ ಕೋವಿಡೇತರ ಅನಾರೋಗ್ಯ ಕಾರಣದಿಂದ 670 ವಿದ್ಯಾರ್ಥಿಗಳು ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆದಿದ್ದಾರೆ. ಪರೀಕ್ಷೆ ಅಕ್ರಮದಲ್ಲಿ ಭಾಗಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳನ್ನು ಡಿಬಾರ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ. 

ತುಮಕೂರು, ಮಧುಗಿರಿ, ಬೆಂಗಳೂರು ಗ್ರಾಮಂತರದ 13 ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಸುರಕ್ಷತಾ ಕ್ರಮಗಳನ್ನು ಹಾಗೂ ಭದ್ರತೆಯನ್ನು ಪರಿಶೀಲಿಸಲಾಯಿತು. ಎಲ್ಲಾ ಕೇಂದ್ರಗಳಲ್ಲಿಯೂ ಅಚ್ಚುಕಟ್ಟಾದ ವ್ಯವಸ್ಥೆ ಮಾಡಲಾಗಿತ್ತು ಎಂದಿದ್ದಾರೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ.ಕೆ ಶಿವಕುಮಾರ್ ಸ್ಫೋಟಕ ಆರೋಪ; Video

ಶಾಸಕರ ಲೆಟರ್‌ಹೆಡ್'ನಲ್ಲೇ 'ಸತ್ತಿದ್ದಾರೆ' ಎಂದು ಅರ್ಜಿ: ಯತ್ನಾಳ್ ಸೇರಿ ಮೂವರ ವಿರುದ್ಧ FIR ದಾಖಲು

ಚಿಂತಾಮಣಿಯ Dictator, ನಿನ್ನ ವಿರುದ್ಧ ಸಮರ ನಿರಂತರ: ಎಂಸಿ ಸುಧಾಕರ್ ವಿರುದ್ಧ ಪ್ರದೀಪ್ ಈಶ್ವರ್ ಮತ್ತೆ ಕಿಡಿ

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ, ಕಾರು ಆಪೋಷನ, ಕೂದಲೆಳೆ ಅಂತರದಲ್ಲಿ ಚಾಲಕ ಬಚಾವ್-Video