ಪರಿಶೀಲನೆ ನಡೆಸುತ್ತಿರುವ ಪೊಲೀಸರು 
ರಾಜ್ಯ

ಬಾಗಲಕೋಟೆ: ನೀರಿಗೆ ವಿಷ ಬೆರೆಸಿ ಮಕ್ಕಳಿಗೆ ಕುಡಿಸಿದ ತಾಯಿ, ಮೂವರು ಮಕ್ಕಳ ಸಾವು, ತಾಯಿ ಸ್ಥಿತಿ ಗಂಭೀರ

ಕಳೆದ ಎರಡು ವರ್ಷಗಳ ಹಿಂದೆ ಪತಿಯನ್ನು ಕಳೆದುಕೊಂಡು ಖಿನ್ನತೆಗೆ ಒಳಗಾಗಿದ್ದ ಮಹಿಳೆಯೊಬ್ಬರು ತನ್ನ ಮೂವರು ಮಕ್ಕಳಿಗೆ ಕುಡಿಯುವ ನೀರಿನಲ್ಲಿ ವಿಷ ಬೆರೆಸಿ ಕುಡಿಸಿದ್ದು, ತಾನು ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದಲ್ಲಿ ನಡೆದಿದೆ

ಬಾಗಲಕೋಟೆ: ಕಳೆದ ಎರಡು ವರ್ಷಗಳ ಹಿಂದೆ ಪತಿಯನ್ನು ಕಳೆದುಕೊಂಡು ಖಿನ್ನತೆಗೆ ಒಳಗಾಗಿದ್ದ ಮಹಿಳೆಯೊಬ್ಬರು ತನ್ನ ಮೂವರು ಮಕ್ಕಳಿಗೆ ಕುಡಿಯುವ ನೀರಿನಲ್ಲಿ ವಿಷ ಬೆರೆಸಿ ಕುಡಿಸಿದ್ದು, ತಾನು ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದಲ್ಲಿ ನಡೆದಿದೆ. ಮಕ್ಕಳು ಮೃತಪಟ್ಟಿದ್ದು, ತಾಯಿ ಸ್ಥಿತಿ ಗಂಭೀರವಾಗಿದೆ.

ಭಾಗ್ಯಶ್ರೀ ಚಿಕ್ಕಯ್ಯ ಮಠದ(೩೨)  ಆತ್ಮಹತ್ಯೆಗೆ ಯತ್ನಿಸಿರುವ ಮಹಿಳೆ. ಶಿವಾನಿ(೧೨), ಶಿವಶಂಕರ (೧೦), ಶಿವಶ್ರೀ (೯) ಮೃತಪಟ್ಟಿರುವ ಮಕ್ಕಳು. ಭಾಗ್ಯಶ್ರೀ  ಬೆಳಗ್ಗೆ ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಹೇಳಿ ಹೋದವರು ಮನೆಗೆ ವಾಪಸ್ ಬಾರದ ಹಿನ್ನೆಲೆಯಲ್ಲಿ ಮನೆಯವರು ಅವರಿಗಾಗಿ ಹುಡುಕಾಟ ನಡೆಸಿದ್ದಾರೆ. 

ಆ ವೇಳೆ ಭಾಗ್ಯಶ್ರೀ ದೇವಸ್ಥಾನದ ಮಾರ್ಗದಲ್ಲಿ ಅಸ್ವಸ್ಥಳಾಗಿ ಬಳಲುತ್ತಿರುವುದು ಕಂಡು ಬಂದರೆ, ಮಕ್ಕಳು ಸ್ಥಳದಲ್ಲೇ ಮೃತಪಟ್ಟಿದ್ದರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವರದಿ: ವಿಠ್ಠಲ ಅರ್ ಬಲಕುಂದಿ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

SCROLL FOR NEXT