ಮೀನು ಸ್ವಚ್ಛ ಮಾಡಲು ಹೋದ ಯುವಕ ನೀರುಪಾಲು
ಮೀನು ಸ್ವಚ್ಛ ಮಾಡಲು ಹೋದ ಯುವಕನೋರ್ವ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಮದ್ದೂರು ತಾಲೂಕಿನ ಕೊತ್ತನಹಳ್ಳಿ ಗ್ರಾಮದ ಗುಳ್ಳೆಬೋರನ ಕೆರೆ ಬಳಿ ನಡೆದಿದೆ.
ಮಂಡ್ಯ: ಮೀನು ಸ್ವಚ್ಛ ಮಾಡಲು ಹೋದ ಯುವಕನೋರ್ವ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಮದ್ದೂರು ತಾಲೂಕಿನ ಕೊತ್ತನಹಳ್ಳಿ ಗ್ರಾಮದ ಗುಳ್ಳೆಬೋರನ ಕೆರೆ ಬಳಿ ನಡೆದಿದೆ.
ಚಾಪುರದೊಡ್ಡಿ ಗ್ರಾಮದ ಮಹದೇವ (೨೪) ಮೃತ ಯುವಕ. ಸ್ನೇಹಿತರ ಜೊತೆ ಮೀನುಗಳನ್ನು ಸ್ವಚ್ಛಗೊಳಿಸಲು ತೆರಳಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಗ್ನಿಶಾಮಕ ಸಿಬ್ಬಂದಿ ಮೃತ ದೇಹದ ಶೋಧ ಕಾರ್ಯ ನಡೆಸುತ್ತಿದ್ದಾರೆ..ಈ ಘಟನೆ ಬೆಸಗರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ವರದಿ:ನಾಗಯ್ಯ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.