ಸಿದ್ದರಾಮಯ್ಯ-ಶ್ರೀರಾಮುಲು 
ರಾಜ್ಯ

ವೈದ್ಯಕೀಯ ಸಲಕರಣೆ ಖರೀದಿ ದಾಖಲೆ ಬಿಡುಗಡೆ ಮಾಡಿ: ಸಿದ್ದರಾಮಯ್ಯ ಆಗ್ರಹಕ್ಕೆ ನಯಾಪೈಸೆ ಅವ್ಯವಹಾರ ಆಗಿಲ್ಲವೆಂದ ಶ್ರೀರಾಮುಲು

ಕೊರೋನಾ ಸೋಂಕು ನಿಯಂತ್ರಿಸುವ  ವೈದ್ಯಕೀಯ ಸಲಕರಣೆ ಖರೀದಿಯಲ್ಲಿ ಅವ್ಯವಹಾರವಾಗಿಲ್ಲ ಎನ್ನುವುದಾದರೆ ಸೂಕ್ತ ದಾಖಲೆ ಬಿಡುಗಡೆ ಮಾಡುವಂತೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಬೆಂಗಳೂರು: ಕೊರೋನಾ ಸೋಂಕು ನಿಯಂತ್ರಿಸುವ  ವೈದ್ಯಕೀಯ ಸಲಕರಣೆ ಖರೀದಿಯಲ್ಲಿ ಅವ್ಯವಹಾರವಾಗಿಲ್ಲ ಎನ್ನುವುದಾದರೆ ಸೂಕ್ತ ದಾಖಲೆ ಬಿಡುಗಡೆ ಮಾಡುವಂತೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಎಲ್ಲ ವಸ್ತುಗಳ ಖರೀದಿಗೆ ದಾಖಲೆಗಳಿವೆ ಎಂದು ಹೇಳಿಕೆ ನೀಡಿರುವುದಕ್ಕೆ ಪ್ರತಿಕ್ರಿಯಿಸಿರುವ ಅವರು, ನಿಮ್ಮ ಬಳಿ ದಾಖಲೆ ಇದ್ದರೆ ಬಿಡುಗಡೆ ಮಾಡಿ ಎಂದು ಸವಾಲು ಹಾಕಿದ್ದಾರೆ. ಸರ್ಕಾರದ ಬಳಿ ಎಲ್ಲ ದಾಖಲೆ ಇದ್ದರೆ ಅದನ್ನು ಮುಚ್ಚಿಡುತ್ತಿರುವುದು ಏಕೆ?. ತಾವು ಬರೆದ ಪತ್ರಕ್ಕೆ ತಕ್ಷಣ ಉತ್ತರ ನೀಡಿ ಎಂದಿದ್ದಾರೆ.

ಕೋವಿಡ್ ಪರಿಕರಗಳ ಖರೀದಿಯಲ್ಲಿ ಒಂದು ನಯಾಪೈಸೆಯ ಅವ್ಯಹಾರ ಆಗಿಲ್ಲ: ಬಿ.ಶ್ರೀರಾಮುಲು
ದಾವಣಗೆರೆ: ತಾಯಿ ಮತ್ತು ಮಕ್ಕಳ ಮರಣ ಪ್ರಮಾಣ ಕಡಿಮೆ ಮಾಡಬೇಕೆಂಬ ಉದ್ದೇಶದಿಂದ ಇಂದು  ದಾವಣಗೆರೆಯ ಚಿಗಟೇರಿ ಜಿಲ್ಲಾಸ್ಪತ್ರೆ ಆವರಣದಲ್ಲಿ ಸುಮಾರು ರೂ. 21 ಕೋಟಿ ವೆಚ್ಚದಲ್ಲಿ  100 ಹಾಸಿಗೆಗಳ ಸಾಮರ್ಥ್ಯದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಜೊತೆಗೆ  ವೈದ್ಯರು/ಶುಶ್ರೂಷಕರ ವಸತಿಗೃಹ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಲಾಗಿದೆ ಎಂದು  ಆರೋಗ್ಯ ಸಚಿವ ಬಿ. ಶ್ರೀರಾಮುಲು ತಿಳಿಸಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಕರ್ನಾಟಕ  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಂಜಿನಿಯರಿಂಗ್ ಘಟಕ ದಾವಣಗೆರೆ ಇವರ ವತಿಯಿಂದ ಜು.04  ರಂದು ಚಿಗಟೇರಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ 100 ಹಾಸಿಗೆಗಳ ತಾಯಿ ಮಕ್ಕಳ ಆಸ್ಪತ್ರೆ  ಕಟ್ಟಡದ ಶಂಕುಸ್ಥಾಪನಾ ಸಮಾರಂಭದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ತಾಯಿ ಮತ್ತು ಮಕ್ಕಳ ಮರಣ ಪ್ರಮಾಣವನ್ನು ತಗ್ಗಿಸಲು ರಾಜ್ಯದಲ್ಲಿ ಪ್ರಸ್ತುತ 17  ತಾಯಿ ಮತ್ತು ಮಕ್ಕಳ ಆಸ್ಪತ್ರೆಗಳು ಕಾರ್ಯ ನಿರ್ವಹಿಸುತ್ತಿವೆ. ದಾವಣಗೆರೆ  ಸುತ್ತಮುತ್ತಲಿನ ಜನತೆಗೆ ಅನುಕೂಲವಾಗುವ ಉದ್ದೇಶದಿಂದ ಸಂಸದ ಜಿ.ಎಂ.ಸಿದ್ದೇಶ್ವರ್ ಅವರು ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ದಾವಣಗೆರೆ ಜಿಲ್ಲೆಗೆ ಒಂದು ತಾಯಿ ಮತ್ತು  ಮಕ್ಕಳ ಆಸ್ಪತ್ರೆ ಬೇಕೆಂದು ಮಂಜೂರು ಮಾಡಿಸಿದ್ದಾರೆ. ಈ ಆಸ್ಪತ್ರೆಯ ಕಾಮಗಾರಿಯನ್ನು ನಿಗದಿತ ಅವಧಿ ಅಂದರೆ 15 ತಿಂಗಳ ಒಳಗೆ ಮುಗಿಸಿ ನಂತರ ಸಂಸದರು, ಉಸ್ತುವಾರಿ ಸಚಿವರು,  ಶಾಸಕರೆಲ್ಲ ಸೇರಿ ಉದ್ಘಾಟನೆಯನ್ನು ಸಹ ನೆರವೇರಿಸುವೆವು ಎಂದ ಅವರು ರಾಜ್ಯದಲ್ಲಿ ತಾಯಿ ಮತ್ತು ಮಕ್ಕಳ ಮರಣ ಪ್ರಮಾಣ ಇಳಿಮುಖವಾಗಿರುವುದಕ್ಕೆ ಕೇಂದ್ರ ಸರ್ಕಾರ ಪ್ರಶಂಸೆ  ವ್ಯಕ್ತಪಡಿಸಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ ಕೆ ಶಿವಕುಮಾರ್ ಸ್ಫೋಟಕ ಆರೋಪ; Video

'ವಿರಾಟ್ ಕೊಹ್ಲಿ ಬೇಗ ಔಟಾದರೆ ನನಗೆ ಊಟವೇ ಸೇರಲ್ಲ': ಸ್ಟಾರ್ ಬ್ಯಾಟರ್ ಬಗ್ಗೆ ನಾನಾ ಪಾಟೇಕರ್ ಹೇಳಿಕೆಯ ಹಳೆಯ ವಿಡಿಯೋ ವೈರಲ್

ಬೆಂಗಳೂರಿನಲ್ಲಿ CJP ಪ್ರತಿಭಟನೆ: ಪ್ರಕಾಶ್ ರಾಜ್, YouTuber ಧ್ರುವ್ ರಾಠಿ ಭಾಗಿ; CEC ರಾಜೀನಾಮೆಗೆ ಬಿಗಿಪಟ್ಟು..!

ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

'KSRTCಯಲ್ಲಿ ಡೀಸೆಲ್ ಕೊರತೆ ತಾತ್ಕಾಲಿಕ'; ಹಣದ ಕೊರತೆ ಇದ್ದಿದ್ದರೆ, ಗ್ಯಾರಂಟಿ ಯೋಜನೆಗಳು ಮುಂದುವರಿಯುತ್ತಿದ್ದವೇ?': ಜಿ ಪರಮೇಶ್ವರ