ರಾಜ್ಯ

ಯಶಸ್ವಿಯಾಗಿ ನಡೆದ ಎಸ್ ಎಸ್ ಎಲ್ ಸಿ ಪರೀಕ್ಷೆ: 33 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು

Shilpa D

ಬೆಂಗಳೂರು: ಜೂನ್ 25ರಿಂದ ಜುಲೈ 3ರವರೆಗೆ ನಡೆದ 2019-20ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ವಿದ್ಯಾರ್ಥಿಗಳು, ಪೋಷಕರು, ವಿವಿಧ ಇಲಾಖೆಗಳು ಮತ್ತು ಜಿಲ್ಲಾಡಳಿತಗಳ ಸಹಕಾರದೊಂದಿಗೆ ಅತ್ಯಂತ ಯಶಸ್ವಿಯಾಗಿ ನಡೆದಿವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಆರನೇ ದಿನದ ಪರೀಕ್ಷೆಯ ನಂತರ ಶುಕ್ರವಾರ ಸಂಜೆ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಆರು ದಿನಗಳ ಅವಧಿಯ ಪರೀಕ್ಷೆಗಳಲ್ಲಿ ಪ್ರತಿದಿನ ಸರಾಸರಿ 7.5 ಲಕ್ಷ ವಿದ್ಯಾಥಿಗಳು ಯಾವುದೇ ಸಮಸ್ಯೆಯಿಲ್ಲದ ರೀತಿಯಲ್ಲಿ ಪರೀಕ್ಷೆಗಳನ್ನು ಧೈರ್ಯವಾಗಿ ಅತ್ಯಂತ ಸುರಕ್ಷಿತ ವಾತಾವರಣದಲ್ಲಿ ಎದುರಿಸಿದ್ದಾರೆ ಎಂದು ಹೇಳಿದರು.

ಈಗಾಗಲೇ ಹೇಳಿದಂತೆ ನಮಗೆ ಇಂತಹ ಸಂಕಷ್ಟದ ಸಂದರ್ಭದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳನ್ನು ನಡೆಸುವುದು ಬಹುದೊಡ್ಡ ಸವಾಲಾಗಿತ್ತು. ಅದು ನಮ್ಮ ಪ್ರತಿಷ್ಠೆಯಪ್ರಶ್ನೆಯಾಗದೇ ವಿದ್ಯಾರ್ಥಿಗಳ ಹಿತ ಹಾಗೂ ಸುರಕ್ಷತೆಯೇ ಮುಖ್ಯವಾಗಿತ್ತು. ಆ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ನಾವು ಸರ್ಕಾರದ ಪ್ರಯತ್ನವಾಗಿ ಬಹು ಯಶಸ್ವಿಯಾಗಿ ನಿರ್ವಹಿಸಿದ್ದೇವೆ. ಇದು ನನಗೆ ನಿಜಕ್ಕೂ ಹೆಮ್ಮೆ ಹಾಗೂ ಅಭಿಮಾನದ ಸಂಗತಿಯಾಗಿದೆ ಎಂದು ಅವರು ಹೇಳಿದರು.

ಇನ್ನೂ 33 ವಿದ್ಯಾರ್ಥಿಳಿಗೆ ಕೊರೋನಾ ಸೋಂಕು ತಗುಲಿದ್ದು ಅವರನ್ನು ಕ್ವಾರಂಟೈನ್ ಮಾಡಲಾಗಿದೆ, ಆಗಸ್ಟ್ ನಲ್ಲಿ ನಡೆುವ ಪೂರಕ ಪರೀಕ್ಷೆಯಲ್ಲಿ ಅವರಿಗೆ ಪರೀಕ್ಷೆ ಬರೆಯಲು ಅಕಾಶವಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

SCROLL FOR NEXT