ಸಂಗ್ರಹ ಚಿತ್ರ 
ರಾಜ್ಯ

ರಾಜ್ಯದಲ್ಲಿ ಜುಲೈ 31ರವರೆಗೆ ಕಂಟೇನ್ಮೆಂಟ್ ಝೋನ್‍ಗಳಲ್ಲಿ ಲಾಕ್‍ಡೌನ್ ವಿಸ್ತರಣೆ

ಕೋವಿಡ್-19 ಅನ್‍ಲಾಕ್ ಹಂತ 2ಕ್ಕೆ ಸಂಬಂಧಿಸಿದಂತೆ ಕೇಂದ್ರ ಸರಕಾರದ ಗೃಹ ಸಚಿವಾಲಯವು ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಈ ಬಗ್ಗೆ ರಾಜ್ಯ ಸರಕಾರದ ಮುಖ್ಯಕಾರ್ಯದರ್ಶಿ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮುಖ್ಯಸ್ಥ ಟಿ.ಎಂ.ವಿಜಯಭಾಸ್ಕರ್ ಆದೇಶ ಹೊರಡಿಸಿದ್ದು, ಕಂಟೈನ್ಮೆಂಟ್ ಝೋನ್‍ಗಳಲ್ಲಿ ಜು.31 ರವರೆಗೆ ಲಾಕ್‍ಡೌನ್ ವಿಸ್ತರಣೆ ಮಾಡಲಾಗಿದೆ.

ಬೆಂಗಳೂರು: ಕಂಟೈನ್ಮೆಂಟ್ ಝೋನ್‍ಗಳಲ್ಲಿ ಜು.31 ರವರೆಗೆ ಲಾಕ್‍ಡೌನ್ ವಿಸ್ತರಣೆ ಮಾಡಲಾಗಿದೆ.

ಕೋವಿಡ್-19 ಅನ್‍ಲಾಕ್ ಹಂತ 2ಕ್ಕೆ ಸಂಬಂಧಿಸಿದಂತೆ ಕೇಂದ್ರ ಸರಕಾರದ ಗೃಹ ಸಚಿವಾಲಯವು ಮಾರ್ಗಸೂಚಿಗಳನ್ನು ಪ್ರಕಟಿಸಿದೆ.  ಈ ಬಗ್ಗೆ ರಾಜ್ಯ ಸರಕಾರದ ಮುಖ್ಯಕಾರ್ಯದರ್ಶಿ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮುಖ್ಯಸ್ಥ ಟಿ.ಎಂ.ವಿಜಯಭಾಸ್ಕರ್ ಆದೇಶ ಹೊರಡಿಸಿದ್ದು, ಕಂಟೈನ್ಮೆಂಟ್ ಝೋನ್‍ಗಳಲ್ಲಿ ಜು.31 ರವರೆಗೆ ಲಾಕ್‍ಡೌನ್ ವಿಸ್ತರಣೆ ಮಾಡಲಾಗಿದೆ.

ನೂತನ ಮಾರ್ಗಸೂಚಿಗಳು ತಕ್ಷಣದಿಂದ ಜಾರಿಗೆ ಬಂದಿದ್ದು, ಜು.31ರವರೆಗೆ ಚಾಲ್ತಿಯಲ್ಲಿ ಇರಲಿವೆ. ಬಿಬಿಎಂಪಿ ಆಯುಕ್ತರು, ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು, ನಗರ ಪೊಲೀಸ್ ಆಯುಕ್ತರು ಹಾಗೂ ಇತರ ಇಲಾಖಾ ಮುಖ್ಯಸ್ಥರು ಇವುಗಳ ಅನುಷ್ಠಾನಕ್ಕೆ ಶ್ರಮಿಸುವಂತೆ ಅವರು ಸೂಚಿಸಿದ್ದಾರೆ.

ಅನ್‍ಲಾಕ್-2 ಕಂಟೈನ್ಮೆಂಟ್ ಝೋನ್‍ಗಳ ಹೊರಗೆ ಎಲ್ಲ ಬಗೆಯ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸಲಾಗಿದೆ. ಜು.31ರವರೆಗೆ ಶಾಲೆಗಳು, ಕಾಲೇಜುಗಳು, ಶೈಕ್ಷಣಿಕ ಸಂಸ್ಥೆಗಳು, ತರಬೇತಿ ಕೇಂದ್ರಗಳು ಮುಚ್ಚಲ್ಪಟ್ಟಿರುತ್ತವೆ. ಆನ್‍ಲೈನ್ ಹಾಗೂ ದೂರಶಿಕ್ಷಣ ಮುಂದುವರೆಯಲಿದೆ. ರಾಜ್ಯ ಹಾಗೂ ಕೇಂದ್ರ ಸರಕಾರದ ತರಬೇತಿ ಸಂಸ್ಥೆಗಳು ಡಿಓಪಿಟಿ ಹಾಗೂ ಡಿಪಿಎಆರ್ ಸೂಚನೆಗಳನ್ವಯ ಜು.15ರಿಂದ ಕಾರ್ಯಾರಂಭ ಮಾಡಬಹುದಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

ಮಿಸ್ಟರ್ 'ನಂಗ್ ಗೊತ್ತಿಲ್ಲಾ' ಗೃಹ ಸಚಿವರೇ.. ಇಲ್ನೋಡಿ, ಪುಡಿ ರೌಡಿಗಳ ಹಾವಳಿ: ಪರಮೇಶ್ವರ್ ವಿರುದ್ಧ ಜೆಡಿಎಸ್ ಕಿಡಿ

SCROLL FOR NEXT