ಸಾಂದರ್ಭಿಕ ಚಿತ್ರ 
ರಾಜ್ಯ

ಮಹದೇಶ್ವರ ಬೆಟ್ಟ ನೌಕರನ ಕೊಲೆ ಪ್ರಕರಣ: ಪತ್ನಿಯ ಹಳೇ ಪ್ರೇಮ ಪುರಾಣವೇ ಕಾರಣ!

ಜೂ.25 ರಂದು ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿ ಕೊಲೆಯಾಗಿದ್ದ ಪ್ರಾಧಿಕಾರದ ನೌಕರನ ಕೊಲೆ ಪ್ರಕರಣಕ್ಕೆ ಪತ್ನಿಯ ಹಳೇ ಪ್ರೇಮಕಥೆಯೇ ಕಾರಣ ಎಂದು ತಿಳಿದುಬಂದಿದೆ.

ಚಾಮರಾಜನಗರ: ಜೂ.25 ರಂದು ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿ ಕೊಲೆಯಾಗಿದ್ದ ಪ್ರಾಧಿಕಾರದ ನೌಕರನ ಕೊಲೆ ಪ್ರಕರಣಕ್ಕೆ ಪತ್ನಿಯ ಹಳೇ ಪ್ರೇಮಕಥೆಯೇ ಕಾರಣ ಎಂದು ತಿಳಿದುಬಂದಿದೆ.

ಈ ಕುರಿತು ಪತ್ರಿಕೆಗೆ ಪೊಲೀಸ್ ಮೂಲಗಳು ಮಾಹಿತಿ ನೀಡಿದ್ದು, ಮೃತ ಮಹಾದೇವ ಪ್ರಸಾದ್​ನ ಪತ್ನಿ ಅನಿತಾ ಎಂಬಾಕೆ ಮದುವೆಗೆ ಮುನ್ನ ಗುಂಡ್ಲುಪೇಟೆ ತಾಲೂಕಿನ ಬೇಗೂರಿನ ಯುವಕನೋರ್ವನೊಂದಿಗೆ ಇರಿಸಿಕೊಂಡಿದ್ದ ಪ್ರೇಮವನ್ನು ಮುಂದುವರೆಸಿದ್ದು ಪತಿಯ ಸಾವಿಗೆ ಕಾರಣವಾಗಿದೆ.

ಏನಿದು ಪ್ರಕರಣ:
ಶ್ರೀಕ್ಷೇತ್ರ ಮಲೆಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾವೇರಿ ಪಂಪ್ ಹೌಸ್​ನಲ್ಲಿ ಆಪರೇಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಮಹಾದೇವಪ್ರಸಾದ್ ನಂಜನಗೂಡು ತಾಲೂಕಿನ ತೆಳ್ಳೂರು ಗ್ರಾಮದ ಅನಿತಾ ಎಂಬಾಕೆಯನ್ನು ವಿವಾಹ ಮಾಡಿಕೊಂಡಿದ್ದರು. ಆದರೆ, ಅನಿತಾ ಅದಾಗಲೇ ಗುಂಡ್ಲುಪೇಟೆ ತಾಲೂಕಿನ ಬೇಗೂರಿನ ಬಸವಣ್ಣ ಎಂಬಾತನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ.

ವಿವಾಹದ ಬಳಿಕವೂ ಮುಂದುವರೆದಿದ್ದ ಇವರ ಪ್ರೇಮಪುರಾಣ ಪತಿ ಮಹಾದೇವಪ್ರಸಾದ್​ಗೆ ತಿಳಿದಿದ್ದರಿಂದ ಕಸಿವಿಸಿಗೊಂಡ ಅನಿತಾ ಪತಿಯನ್ನು ಹತ್ಯೆ ಮಾಡಿ ಬಸವಣ್ಣನೊಂದಿಗೆ ಜೀವನ ಸಾಗಿಸಲು ನಿಶ್ಚಯಿಸಿದ್ದಳು. ಪತಿಯನ್ನು ತನ್ನೂರಿಗೆ ಬರುವಂತೆ ಹೇಳಿ ಮಹದೇಶ್ವರ ಬೆಟ್ಟದ ತಾಳಬೆಟ್ಟದಲ್ಲಿ ಪ್ರಿಯಕರನಿಂದ ಕೊಲೆ ಮಾಡಿಸಿದ್ದಾಳೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಕೊಲೆ ಮಾಡಿದ ಪ್ರಿಯಕರ ಬಸವಣ್ಣನಿಗೆ ಶರತ್ ಎಂಬಾತನೂ, ಸಾಥ್ ನೀಡಿರುವುದಾಗಿ ತಿಳಿದುಬಂದಿದೆ.  ಅನಿತಾಳನ್ನು ಮಹದೇಶ್ವರ ಬೆಟ್ಟ ಪೊಲೀಸರು ಬಂಧಿಸಿದ್ದು ತನಿಖೆ ಕೈಗೊಂಡಿದ್ದಾರೆ. ಉಳಿದ ಆರೋಪಿಗಳಿಗೆ ಬಲೆ ಬೀಸಿದ್ದಾರೆ.

ವರದಿ: ಗುಳಿಪುರ ನಂದೀಶ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

"ನಾವು ಕೈ ಜೋಡಿಸೋಣ": ಗಲ್ವಾನ್ ಸಂಘರ್ಷದ ಬಳಿಕ ಮೊದಲ ಮಾತುಕತೆ ವೇಳೆ Narendra Modi ಗೆ Xi Jinping ಸಂದೇಶ; ಭಾರತದೆದುರು ಮಂಡಿಯೂರಿದ ಚೀನಾ?

ಪ್ರಶ್ನೆ ಪತ್ರಿಕೆ ಸೋರಿಕೆ ಸಹಿಸಲ್ಲ: KPSC ವಿರುದ್ಧ ಹೋರಾಟಕ್ಕೆ CJP ಎಂಟ್ರಿ: ನೊಂದ ಅಭ್ಯರ್ಥಿಗಳಿಗೆ ನ್ಯಾಯದ ಭರವಸೆ

ಮೈಸೂರಿನ 'ಪೇಟೆ ರೌಡಿ' ಪೊಲೀಸ್ ಠಾಣೆಗೆ ನುಗ್ಗಿದ್ರೆ ನಾನು ಸೀದಾ ಪರಪ್ಪನ ಅಗ್ರಹಾರಕ್ಕೆ ನುಗ್ಗಿಸುತ್ತೇನೆ: ಪ್ರತಾಪ್ ಸಿಂಹಗೆ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನ್

ಚೀನಾ ಇದ್ದರೂ ಬ್ರಿಕ್ಸ್‌ ಸದಸ್ಯತ್ವಕ್ಕಾಗಿ 3 ವರ್ಷಗಳ ಹಿಂದೆಯೇ ಅರ್ಜಿ ಸಲ್ಲಿಸಿದ್ರೂ ಅವಕಾಶ ಸಿಕ್ಕಿಲ್ಲ: ಪಾಕ್ ಗೋಳಾಟ!

ಬಳ್ಳಾರಿ ನಂತರ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮತ್ತೊಂದು ಪಾದಯಾತ್ರೆ; ಸೆಪ್ಟೆಂಬರ್ 15 ರಿಂದ ರಾಜ್ಯಾದ್ಯಂತ ಹೋರಾಟ