ಸಂಗ್ರಹ ಚಿತ್ರ 
ರಾಜ್ಯ

ಕೊರೋನಾ ವೈರಸ್ ಎಫೆಕ್ಟ್: ಲಾಲ್ ಬಾಗ್ `ಫಲಪುಷ್ಪ' ಪ್ರದರ್ಶನ ರದ್ದು!

ಮಾರಕ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿರುವಂತೆಯೇ ಇತ್ತ ರಾಜ್ಯ ಸರ್ಕಾರ ಸ್ವಾತಂತ್ರ್ಯೋತ್ಸವ ನಿಮಿತ್ತ ನಡೆಯಬೇಕಿದ್ದ ಫಲಪುಷ್ಪ ಪ್ರದರ್ಶನವನ್ನು ರದ್ದುಪಡಿಸಲು ಮುಂದಾಗಿದೆ.

ಬೆಂಗಳೂರು: ಮಾರಕ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿರುವಂತೆಯೇ ಇತ್ತ ರಾಜ್ಯ ಸರ್ಕಾರ ಸ್ವಾತಂತ್ರ್ಯೋತ್ಸವ ನಿಮಿತ್ತ ನಡೆಯಬೇಕಿದ್ದ ಫಲಪುಷ್ಪ ಪ್ರದರ್ಶನವನ್ನು ರದ್ದುಪಡಿಸಲು ಮುಂದಾಗಿದೆ.

ಹೌದು.. ದಿನೇ ದಿನೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ಇದೇ ಕಾರಣಕ್ಕೆ ತೋಟಗಾರಿಕೆ ಇಲಾಖೆ ಲಾಲ್ ಭಾಗ್ ನಲ್ಲಿ ನಡೆಯಬೇಕಿದ್ದ ಫಲಪುಷ್ಪ ಪ್ರದರ್ಶನವನ್ನು ರದ್ದು ಮಾಡಲು ನಿರ್ಧರಿಸಿದೆ ಎನ್ನಲಾಗಿದೆ. 

ಲಾಲ್ ಭಾಗ್ ನ ಫಲಪುಷ್ಪ ಪ್ರದರ್ಶನ ವ್ಯಾಪಕ ಖ್ಯಾತಿ ಗಳಿಸಿದ್ದು, ಬೆಂಗಳೂರು ಮಾತ್ರವಲ್ಲದೇ ದೇಶದ ವಿವಿಧ ಮೂಲೆ ಮೂಲೆಗಳಿಂದ ಸಾವಿರಾರು ಜನರು ಇಲ್ಲಿಗೆ ಆಗಮಿಸಿ ಫಲಪುಷ್ಪ ಪ್ರದರ್ಶನ ವೀಕ್ಷಿಸುತ್ತಾರೆ. ಆದರೆ ಪ್ರಸ್ತುತ ಬೆಂಗಳೂರಿನಲ್ಲಿ ಮಾರಕ ಕೊರೋನಾ ವೈರಸ್ ಸೋಂಕು ಗಣನೀಯವಾಗಿ  ಏರಿಕೆಯಾಗುತ್ತಿದ್ದು, ಪ್ರದರ್ಶನ ಏರ್ಪಡಿಸಿದರೆ ಮತ್ತೆ ಸೋಂಕಿತರ ಸಂಖ್ಯೆ ಹೆಚ್ಚಳವಾಗುವ ಭೀತಿ ಹಿನ್ನಲೆಯಲ್ಲಿ ಮತ್ತು ಜನ ದಟ್ಟಣೆ ನಿಯಂತ್ರಿಸುವ ನಿಟ್ಟಿನಲ್ಲಿ ಪ್ರದರ್ಶನವನ್ನು ರದ್ದು ಪಡಿಸುವ ಕುರಿತು ಇಲಾಖೆ ಗಂಭೀರ ಚಿಂತನೆಯಲ್ಲಿದೆ.

ಮೈಸೂರು ಉದ್ಯಾನ ಕಲಾ ಸಂಘ ಹಾಗೂ ತೋಟಗಾರಿಕೆ ಇಲಾಖೆ ಸಹಯೋಗದಲ್ಲಿ ಪ್ರತಿ ಬಾರಿಯ ಪ್ರದರ್ಶನದಲ್ಲೂ ಒಂದು ವಿಷಯದ ಆಧಾರದಲ್ಲಿ ಕಲಾಕೃತಿಗಳನ್ನು ಹೂವುಗಳಲ್ಲಿ ರಚಿಸಲಾಗುತ್ತದೆ. ಆದರೆ ಈ ಬಾರಿ ಸೋಂಕಿನ ನಡುವೆ ಫಲಪುಷ್ಪ ಪ್ರದರ್ಶನ ನಡೆಸಿದರೆ ಪ್ರದರ್ಶನ ವೀಕ್ಷಿಸಲು ಲಕ್ಷಾಂತರ ಜನರು  ಉದ್ಯಾನಕ್ಕೆ ಆಗಮಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ತೋಟಗಾರಿಕೆ ಇಲಾಖೆ ಈ ತೀರ್ಮಾನ ಕೈಗೊಂಡಿದೆ ಎನ್ನಲಾಗಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT