ರಾಜ್ಯ

ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ, ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ: ಮುಖ್ಯಮಂತ್ರಿ, ಸಚಿವರಿಂದ ಗೌರವ ನಮನ

Srinivasamurthy VN

ಬೆಂಗಳೂರು: ಹಸಿರುಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನ ರಾಮ್ ಅವರ ಪುಣ್ಯಸ್ಮರಣೆಯಂದು ಅವರಿಗೆ ನಮನಗಳನ್ನು ಸಲ್ಲಿಸೋಣ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗೌರವ ಸಲ್ಲಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಯಡಿಯೂರಪ್ಪ ಅವರು, ಮಾಜಿ ಉಪ ಪ್ರಧಾನಿ ಬಾಬು ಜಗಜೀವನ ರಾಮ್‌ ಅವರ ಪುಣ್ಯಸ್ಮರಣೆ ಸ್ವಾತಂತ್ರ್ಯ ಹೋರಾಟಗಾರ, ಹಸಿರುಕ್ರಾಂತಿಯ ಹರಿಕಾರ ಬಾಬೂಜಿ ಅವರು ದೇಶಕ್ಕಾಗಿ ನೀಡಿದ ಕೊಡುಗೆಗಳು ಅಪಾರ. ಇಂತಹ ಮಹಾನ್ ನಾಯಕರ ಆದರ್ಶ, ಚಿಂತನೆಗಳು ಇಂದಿಗೂ ದಾರಿದೀಪವಾಗಿವೆ. ಶೋಷಿತರ ದಮನಿತರ ಪರವಾಗಿ ಹೋರಾಟ ನಡೆಸಿದ ಮಾಜಿ ಉಪ ಪ್ರಧಾನಮಂತ್ರಿ ಶ್ರೀ ಬಾಬು ಜಗಜೀವನ ರಾಮ್ ಅವರ ಪುಣ್ಯತಿಥಿಯಂದು ಅವರಿಗೆ ಅನಂತ ಪ್ರಣಾಮಗಳು. ಕೃಷಿ, ರಕ್ಷಣಾ ಸಚಿವರಾಗಿ ಅವರು ಸಲ್ಲಿಸಿದ ಸೇವೆ ಸ್ಮರಣೀಯವಾದದ್ದು ಎಂದು ಹೇಳಿದರು.

ಇನ್ನು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಹಸಿರು ಕ್ರಾಂತಿಯ ಹರಿಹಾರ, ರಾಷ್ಟ್ರನಾಯಕ ಹಾಗು ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ್‍ ರಾಮ್ ರವರ ಪುಣ್ಯತಿಥಿಯ ಅಂಗವಾಗಿ ಇಂದು ವಿಧಾನಸೌಧದ ಪಶ್ಚಿಮದ್ವಾರ ಬಳಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ‌‌ಪುಷ್ಪನಮನ‌ ಸಲ್ಲಿಸಲಾಯಿತು. ಹಿರಿಯ ಸಚಿವರು, ಅಧಿಕಾರಿಗಳು ಉಪಸ್ಥಿತರಿದ್ದರು.

ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ
ಇನ್ನು ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್ ಮುಖರ್ಜಿಯವರ ಜಯಂತಿಯಂದು ಅವರನ್ನು ಸ್ಮರಿಸೋಣ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನ್ಯಾಯವಾದಿ, ಶಿಕ್ಷಣ ತಜ್ಞ, ಕೇಂದ್ರದ ಮಾಜಿ ಸಚಿವ, ಭಾರತೀಯ ಜನಸಂಘದ ಸ್ಥಾಪಕ, ಭಾರತದ ಅಖಂಡತೆಗಾಗಿ ಶ್ರಮಿಸಿದ ದಿವಂಗತ ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಜಯಂತಿಯಂದು ದೇಶಸೇವೆಗಾಗಿ ಜೀವನ ಮುಡಿಪಾಗಿಟ್ಟಿದ್ದ ನಾಯಕನಿಗೆ ನಮಿಸೋಣ ಎಂದು ಗೌರವ ಸಲ್ಲಿಸಿದ್ದಾರೆ. 'ಭಾರತಮಾತೆಯ ಧೀರ ಪುತ್ರ, ಮಹಾನ್ ದೇಶಪ್ರೇಮಿ, ಭಾರತೀಯ ಜನಸಂಘದ ಸಂಸ್ಥಾಪಕರಾದ ಡಾ. ಶ್ಯಾಮಾ ಪ್ರಸಾದ್ ಮುಖರ್ಜಿಯವರ ಜಯಂತಿಯಂದು ಅವರನ್ನು ಸ್ಮರಿಸೋಣ. ಅಖಂಡ ಭಾರತದ ಏಕತೆಗಾಗಿ ಹೋರಾಡಿದ ಧೀಮಂತ ನಾಯಕ ಡಾ. ಶ್ಯಾಮಾ ಪ್ರಸಾದ್ ಮುಖರ್ಜಿ ಅವರ ಸಾಧನೆ ಮತ್ತು ದೇಶಸೇವೆಗಳನ್ನು ದೇಶ ಎಂದಿಗೂ ಮರೆಯುವುದಿಲ್ಲ ಎಂದು ಮತ್ತೊಂದು ಟ್ವೀಟ್‌ನಲ್ಲಿ ಮುಖ್ಯಮಂತ್ರಿ ಸ್ಮರಿಸಿದ್ದಾರೆ.

ದಲೈ ಲಾಮಾ ಜನ್ಮದಿನ
ಬೌದ್ಧ ಧರ್ಮ ಪ್ರತಿಪಾದಕ ಟಿಬೆಟಿಯನ್ ಧರ್ಮಗುರು ಪೂಜನೀಯ ಶ್ರೀ ದಲೈ ಲಾಮಾ ಅವರಿಗೆ ಜನ್ಮದಿನದ ಆದರಪೂರ್ವಕ ಶುಭಾಶಯಗಳು. ನಿಮ್ಮ ಉತ್ತಮ ಆರೋಗ್ಯ ಹಾಗು ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸುತ್ತೇನೆ.

SCROLL FOR NEXT