ನೇರ ನೇಮಕಾತಿ ಹುದ್ದೆ ಭರ್ತಿಗೆ ತಾತ್ಕಾಲಿಕ ತಡೆ ನೀಡಿದ ರಾಜ್ಯ ಸರ್ಕಾರ
ಬೆಂಗಳೂರು: ನೇರನೇಮಕಾತಿ ಹುದ್ದೆ ಭರ್ತಿಗೆ ಸರ್ಕಾರ ತಾತ್ಕಾಲಿಕ ತಡೆ ನೀಡಿದೆ.2020-21ನೇ ಸಾಲಿನ ಆರ್ಥಿಕ ವರ್ಷದಲ್ಲಿ ಕಲ್ಯಾಣ ಕರ್ನಾಟಕ ವೃಂದದ ಹುದ್ದೆ ಮತ್ತು ಬ್ಯಾಕ್ಲಾಗ್ ಹುದ್ದೆಗಳೂ ಸೇರಿದಂತೆ ಎಲ್ಲಾ ನೇರ ನೇಮಕಾತಿ ಹುದ್ದೆಗಳನ್ನು ಭರ್ತಿ ಮಾಡುವುದನ್ನು ಮುಂದಿನ ಆದೇಶದವರೆಗೂ ತಾತ್ಕಾಲಿಕ ತಡೆ ನೀಡಿದೆ.
ಕೋವಿಡ್-19 ಪರಿಸ್ಥಿತಿ ನಿಭಾಯಿಸಲು ಸಂಪನ್ಮೂಲವನ್ನು ಕೋಢೀಕರಿಸುವುದು ಅಗತ್ಯವಾಗಿದ್ದು, ಸರ್ಕಾರ ವೆಚ್ಚದಲ್ಲಿ ಮಿತವ್ಯಯ ಪಾಲಿಸುವ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಎಲ್ಲಾ ನೇರ ನೇಮಕಾತಿ ಹುದ್ದೆಗಳನ್ನು ಭರ್ತಿ ಮಾಡುವುದಕ್ಕೆ ತಾತ್ಕಾಲಿಕವಾಗಿ ತಡೆ ನೀಡಿದೆ.
ಈಗಾಗಲೇ ಆರ್ಥಿಕ ಇಲಾಖೆಯ ಅನುಮತಿ ಪಡೆದು ನೇಮಕಾತಿಯ ವಿವಿಧ ಹಂತಗಳಲ್ಲಿರುವ ಹುದ್ದೆಗಳಿಗೂ ಸಹ ಈ ಆದೇಶ ಅನ್ವಯವಾಗುತ್ತದೆ ಎಂದು ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐಎಸ್ಎನ್ ಪ್ರಸಾದ್ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.