ರಾಜ್ಯ

ಕೋವಿಡ್‌-19: ಹಾಸನ, ಚಿಕ್ಕಮಗಳೂರಿನಲ್ಲಿ ತಲಾ ಒಂದು ಸಾವು

Shilpa D

ಹಾಸನ: ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೋವಿಡ್‌ ಸೋಂಕಿಗೆ ತಲಾ ಒಬ್ಬೊಬ್ಬರು ಮೃತಪಟ್ಟಿದ್ದಾರೆ.

ಹಾಸನ ತಾಲ್ಲೂಕಿನ ಮಹಿಳೆ ತೀವ್ರ ಉಸಿರಾಟದ ಸಮಸ್ಯೆಯಿಂದ ಜು. 4 ರಂದು ಕೋವಿಡ್‌ ಆಸ್ಪತ್ರೆಗೆ ದಾಖಲಾಗಿದ್ದರು. ಕೊರೋನಾ ಸೋಂಕು ಶಂಕೆಯಿಂದ ಐ‌.ಸಿ.ಯು ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚೇತರಿಕೆ ಕಾಣದ ಕಾರಣ ವೆಂಟಿಲೇಶನ್ ವ್ಯವಸ್ಥೆ ಕೂಡ ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಮಧ್ಯಾಹ್ನ ಕೊನೆ ಉಸಿರೆಳೆದಿದ್ದಾರೆ. ಇವರ ಗಂಟಲು ಮತ್ತು ಮೂಗಿನ ದ್ರವ ಮಾದರಿ ಪರೀಕ್ಷೆ ವರದಿ ಪಾಸಿಟಿವ್ ಎಂದು ಬಂದಿದೆ. 

ಇದಲ್ಲದ ಜಿಲ್ಲೆಯಲ್ಲಿ ಹೊಸದಾಗಿ 17 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಕೊರೊನಾ ಲಂಗು ಲಗಾಮು ಇಲ್ಲದೆ ಓಡುತ್ತಿದೆ.ದಿನ ನಿತ್ಯ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ ಕಾಣುತ್ತಿದೆ. ಈ ಹಿನ್ನೆಲೆ ಸರಕಾರ ರಾತ್ರಿ ಹಾಗೂ ಭಾನುವಾರ ಕರ್ಫ್ಯೂ ಜಾರಿಯಾಗಿದೆ. ಹಾಸನ ಜಿಲ್ಲೆಯಲ್ಲೂ ಕೊರೊನಾ ನಿಯಂತ್ರಣಕ್ಕೆ ಜಿಲ್ಲಾಡಳಿತ ಕ್ರಮಕೈಗೊಳ್ಳುತ್ತಿದೆ. ವಿವಿಧ ವೈದ್ಯಕೀಯ ಪರಿಣಿತರೊಂದಿಗೆಚರ್ಚೆ ನಡೆಸಿ ಕೆಲಸ ಮಾಡುತ್ತಿದೆ. ಆದರೆ ಸೋಂಕು ಹರಡುತ್ತಿದೆ.

SCROLL FOR NEXT