ವಿಧಾನಸೌಧ 
ರಾಜ್ಯ

ಗುತ್ತಿಗೆ ಆಧಾರದ ಮೇಲೆ ನೀಡಿದ ಸರ್ಕಾರಿ ಜಮೀನು ಖಾಯಂ ಆಗಿ ಮಂಜೂರು ಮಾಡಲು ಆದೇಶ

ಖಾಸಗಿ ಸಂಘ ಸಂಸ್ಥೆಗಳಿಗೆ ವಿವಿಧ ಉದ್ದೇಶಗಳಿಗೆ ಗುತ್ತಿಗೆ ಆಧಾರದ ಮೇಲೆ ನೀಡಲಾಗಿರುವ ಸರ್ಕಾರಿ ಜಮೀನುಗಳನ್ನು ಗುತ್ತಿಗೆ ಪಡೆದ ಸಂಸ್ಥೆಗೆ ಖಾಯಂ ಆಗಿ ಮಂಜೂರು ಮಾಡುವ ಬಗ್ಗೆ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು: ಖಾಸಗಿ ಸಂಘ ಸಂಸ್ಥೆಗಳಿಗೆ ವಿವಿಧ ಉದ್ದೇಶಗಳಿಗೆ ಗುತ್ತಿಗೆ ಆಧಾರದ ಮೇಲೆ ನೀಡಲಾಗಿರುವ ಸರ್ಕಾರಿ ಜಮೀನುಗಳನ್ನು ಗುತ್ತಿಗೆ ಪಡೆದ ಸಂಸ್ಥೆಗೆ ಖಾಯಂ ಆಗಿ ಮಂಜೂರು ಮಾಡುವ ಬಗ್ಗೆ ಸರ್ಕಾರ ಆದೇಶ ಹೊರಡಿಸಿದೆ.

ಕರ್ನಾಟಕ ಭೂ ಮಂಜೂರಾತಿ ನಿಯಮಗಳು, 1969ರ ನಿಯಮ 19ರಡಿಯಲ್ಲಿ ಸರ್ಕಾರಿ ಜಮೀನುಗಳನ್ನು ವಿವಿಧ ಉದ್ದೇಶಗಳಿಗೆ ಗರಿಷ್ಠ 30 ವರ್ಷಗಳ ಗುತ್ತಿಗೆ ಅವಧಿಗೆ ನೀಡಲು ಕಳೆದ ಸಚಿವ ಸಂಪುಟದಲ್ಲಿ ಅವಕಾಶ ಕಲ್ಪಿಸಲಾಗಿತ್ತು. ಈ ಅವಧಿಯು ಮುಕ್ತಾಯವಾದ ನಂತರ ಗುತ್ತಿಗೆ ಅವಧಿಯನ್ನು ಸಂಸ್ಥೆಯ ಪರಿಸ್ಥಿತಿಗೆ ಅನುಗುಣವಾಗಿ ಕೋರಿಕೆಯ ಮೇರೆಗೆ ಇನ್ನೂ 5 ವರ್ಷಗಳ ಕಾಲ ನವೀಕರಿಸಲು ಜಿಲ್ಲಾಧಿಕಾರಿಯವರಿಗೆ ಅಧಿಕಾರವಿದೆ. ಹಿಂದಿನಿಂದಲೂ ಕಂದಾಯ ಇಲಾಖೆಯ ಒಡೆತನದ ಸರ್ಕಾರಿ ಜಮೀನುಗಳನ್ನು ಖಾಸಗಿ ಸಂಘ ಸಂಸ್ಥೆಗಳಿಗೆ ಕೋರಿಕೆ ಮೇರೆಗೆ ವಿವಿಧ ಉದ್ದೇಶಗಳಿಗೆ ಗುತ್ತಿಗೆ ಆಧಾರದ ಮೇಲೆ ನಿಯಮಾನುಸಾರ ನೀಡಲಾಗುತ್ತಿದೆ.
ಪ್ರಸ್ತುತ ರಾಜ್ಯದಲ್ಲಿ ಕೋವಿಡ್‌-19 ಸಾಂಕ್ರಾಮಿಕ ರೋಗವನ್ನು ಪರಿಣಾಮಕಾರಿಯಾಗಿ ತಡೆಯುವ ದೃಷ್ಟಿಯಿಂದ ಜಾರಿಯಲ್ಲಿರುವ ಲಾಕ್‌ಡೌನ್‌ನಿಂದಾಗಿ ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಸುಸ್ಥಿತಿಯಲ್ಲಿರಿಸಬೇಕಾಗಿರುವುದರಿಂದ ಖಾಸಗಿ ಸಂಘ ಸಂಸ್ಥೆಗಳಿಗೆ ವಿವಿಧೋದ್ದೇಶಗಳಿಗೆ ಗುತ್ತಿಗೆ ನೀಡಲಾಗಿರುವ ಜಮೀನುಗಳನ್ನು, ಅದೇ ಉದ್ದೇಶಕ್ಕೆ ಖಾಯಂ ಮಂಜೂರಾತಿ ಕೋರಿದ್ದರೆ, ಪ್ರಸ್ತುತ ಮಾರ್ಗಸೂಚಿ ಮೌಲ್ಯವನ್ನು ವಿಧಿಸಲು, ಅನ್ಯ ಉದ್ದೇಶಕ್ಕೆ ಖಾಯಂ ಮಂಜೂರಾತಿ ಕೋರಿದ್ದಲ್ಲಿ, ಮಾರ್ಗಸೂಚಿ ಮೌಲ್ಯದ ಎರಡು ಪಟ್ಟು ಮೊತ್ತವನ್ನು ವಿಧಿಸಿ ಒಂದು ಬಾರಿಗೆ ಮಾತ್ರ ಅನ್ವಯಿಸುವಂತೆ ಖಾಯಂ ಮಂಜೂರು ಮಾಡುವ ಮೂಲಕ ಸಂಪನ್ಮೂಲ ಕ್ರೊಡೀಕರಿಸಲು ಉದ್ದೇಶಿಸಲಾಗಿದೆ.

ಗುತ್ತಿಗೆ ನೀಡಲಾಗಿರುವ ಜಮೀನುಗಳನ್ನು ಖಾಯಂ ಮಂಜೂರಾತಿ ಪಡೆಯಲು ಇಚ್ಛಿಸದಿದ್ದಲ್ಲಿ, ಅಂತಹ ಗುತ್ತಿಗೆ ಜಮೀನುಗಳನ್ನು ಸ್ಥಳ ಪರಿವೀಕ್ಷಣೆ ನಡೆಸಿ, ಉಪಯೋಗಿಸೇ ಖುಲ್ಲಾ ಉಳಿಸಲಾಗಿರುವ ವಿಸ್ತೀರ್ಣದ ಜಮೀನುಗಳನ್ನು ಪುನಃ ಸರ್ಕಾರದ ವಶಕ್ಕೆ ಪಡೆಯಲು ಜಿಲ್ಲಾಧಿಕಾರಿ ಕ್ರಮ ವಹಿಸಬೇಕು ಎಂದು ಕಂದಾಯ ಇಲಾಖೆಯ (ಭೂ ಮಂಜೂರಾತಿ-1) ಅಧೀನ ಕಾರ್ಯದರ್ಶಿ ಸಿ.ಬಲರಾಮ್ ಆದೇಶದಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ