ರಾಜ್ಯ

ಮಕ್ಕಳ ಆರೋಗ್ಯ ಹಿತದೃಷ್ಟಿಯಿಂದ ಆನ್ ಲೈನ್ ಕ್ಲಾಸ್ ನಿಷೇಧ: ಹೈಕೋರ್ಟ್ ಗೆ ರಾಜ್ಯ ಸರ್ಕಾರ ಹೇಳಿಕೆ

Sumana Upadhyaya

ಬೆಂಗಳೂರು: ಮಕ್ಕಳ ಆರೋಗ್ಯ ಹಿತದೃಷ್ಟಿಯಿಂದ ಆನ್ ಲೈನ್ ಕ್ಲಾಸ್ ಗಳನ್ನು ರದ್ದುಪಡಿಸಲಾಗುವುದು ಎಂದು ರಾಜ್ಯ ಸರ್ಕಾರ ಮತ್ತೊಮ್ಮೆ ಸ್ಪಷ್ಟಪಡಿಸಿದೆ. ಆದರೆ ಇದು ತಾತ್ಕಾಲಿಕ ನಿರ್ಬಂಧವಷ್ಟೆ ಎಂದು ಕೂಡ ಹೇಳಿದೆ.

ರಾಜ್ಯಸರ್ಕಾರ ಮಕ್ಕಳಿಗೆ ಆನ್ ಲೈನ್ ಶಿಕ್ಷಣ ರದ್ದುಪಡಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ನಲ್ಲಿ ನಿನ್ನೆ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಒಕಾ ಮತ್ತು ನ್ಯಾಯಮೂರ್ತಿ ನಟರಾಜ್ ರಂಗಸ್ವಾಮಿ ಅವರನ್ನೊಳಗೊಂಡ ವಿಭಾಗೀಯ ಪೀಠ ಕೈಗೆತ್ತಿಕೊಂಡಿತ್ತು. ಅರ್ಜಿದಾರರ ಪರವಾಗಿ ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ ನಾವಡ್ಗಿ ವಾದ ಮಂಡಿಸಿ ಆನ್ ಲೈನ್ ಶಿಕ್ಷಣ ರದ್ದುಪಡಿಸಿದರೆ ಮಕ್ಕಳ ಶಿಕ್ಷಣ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ವಾದ ಮಂಡಿಸಿದ್ದರು.

SCROLL FOR NEXT