ರಾಜ್ಯ

ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ‌. ರೇಣುಕಾಚಾರ್ಯ ಕಚೇರಿ ಸಿಬ್ಬಂದಿಗೂ ಕೊರೋನಾ

Srinivasamurthy VN

ಬೆಂಗಳೂರು: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅವರ ವಿಕಾಸ ಸೌಧ ಕಚೇರಿ ಸಿಬ್ಬಂದಿಗೂ ಕೊರೋನಾ ಸೋಂಕು ದೃಢಪಟ್ಟಿದೆ.

ಈ ವಿಚಾರವನ್ನು ಸ್ವತಃ ರೇಣುಕಾಚಾರ್ಯ ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದಾರೆ. ವಿಕಾಸಸೌಧದ ನಾಲ್ಕನೇ ಮಹಡಿಯಲ್ಲಿರುವ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಈ ಸಿಬ್ಬಂದಿ ಕಾಲುನೋವಿನ ಹಿನ್ನೆಲೆಯಲ್ಲಿ ನಗರದ ಫೋರ್ಟಿಸ್ ಆಸ್ಪತ್ರೆಗೆ ದಾಖಲಾದ ಸಂದರ್ಭದಲ್ಲಿ ಪರೀಕ್ಷೆಗೊಳಪಟ್ಟಾಗ ಕೊರೋನಾ ಸೋಂಕು ತಗುಲಿರುವುದು ಪತ್ತೆಯಾಗಿದೆ.

ಬೆಂಗಳೂರಿನ ತಮ್ಮ ಸರ್ಕಾರಿ ಅಧಿಕೃತ ಕಚೇರಿಯ ಸಿಬ್ಬಂದಿಗೆ ಕೋವಿಡ್ 19 ಪಾಸಿಟಿವ್ ಪತ್ತೆಯಾಗಿದ್ದು, ಇಂದಿನಿಂದ ಶುಕ್ರವಾರ ಸಂಜೆವರೆಗೂ ಬೆಂಗಳೂರಿನ ನನ್ನ ಸರ್ಕಾರಿ ಗೃಹ ಕಚೇರಿಯಲ್ಲಿ ನಾನು ಕಾರ್ಯನಿರ್ವಹಿಸಲಿದ್ದು , ಸಾರ್ವಜನಿಕರು ಹಾಗು ನನ್ನ ಹಿತೈಷಿಗಳು ನೇರವಾಗಿ ದೂರವಾಣಿ ಮೂಲಕ ನನ್ನನ್ನು ಸಂಪರ್ಕಿಸಬೇಕು ಎಂದು ವಿನಂತಿಸಿಕೊಳ್ಳುತ್ತೇನೆ . ರಾಜ್ಯಾದ್ಯಂತ ಕೋವಿಡ್ 19 ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ರಾಜ್ಯದಲ್ಲಿ ಕೆಲವು ಶಾಸಕರು, ಸಂಸದರು ಹಾಗೂ ಎಂಎಲ್ಸಿಗಳಿಗೂ ಕೂಡ ಕೋವಿಡ್ 19 ಪತ್ತೆಯಾಗಿ ಆತಂಕ ಸೃಷ್ಟಿಸಿದೆ . ಸಾರ್ವಜನಿಕರು ಮಾಸ್ಕ್ ಧರಿಸಿ , ಸಾಮಾಜಿಕ ಅಂತರ ಕಾಪಾಡಿಕೊಂಡು , ಕೇಂದ್ರ ಹಾಗೂ ರಾಜ್ಯ ಸರಕಾರಗಳ ನಿಯಮಾವಳಿಗಳನ್ನು ಪಾಲಿಸುವಂತೆ ರೇಣುಕಾಚಾರ್ಯ ಮನವಿ ಮಾಡಿದ್ದಾರೆ.

ಸೋಂಕು ಪತ್ತೆಯಾದ ಹಿನ್ನಲೆಯಲ್ಲಿ ವಿಕಾಸಸೌಧ ರೇಣುಕಾಚಾರ್ಯ ಕಚೇರಿಯಲ್ಲಿ ಸ್ಯಾನಿಟೈಸ್ ಮಾಡಲಾಯಿತು.

SCROLL FOR NEXT