ರಾಜ್ಯ

ಬೆಂಗಳೂರಿನ 20 ಪೊಲೀಸ್ ಠಾಣೆ ಸೀಲ್ ಡೌನ್:  400 ಪೊಲೀಸರಿಗೆ ಸೋಂಕು

Nagaraja AB

ಬೆಂಗಳೂರು: ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಪೊಲೀಸರಿಗೆ ಪ್ರತ್ಯೇಕ ಕೋವಿಡ್ ಸೆಂಟರ್ ತೆರೆಯುವಂತೆ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ ಹಾಗೂ ಐಜಿಪಿ) ಪ್ರವೀಣ್ ಸೂದ್ ಅವರಿಗೆ ಬಳಿ ಮನವಿ ಮಾಡಿಕೊಂಡಿದ್ದಾರೆ.

ನಗರದಲ್ಲಿ ಈ ವರೆಗೂ 400 ಪೊಲೀಸರಲ್ಲಿ ವೈರಸ್ ಪತ್ತೆಯಾಗಿದ್ದು, ಇದರಲ್ಲಿ 192 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಗೊಂಡಿದ್ದಾರೆ. ಅಲ್ಲದೆ, ಮಹಾಮಾರಿ ವೈರಸ್'ಗೆ ಐವರು ಪೊಲೀಸರು ಬಲಿಯಾಗಿದ್ದಾರೆಂದು ತಿಳಿಸಿದ್ದಾರೆ.

ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.50 ವರ್ಷಕ್ಕಿಂತ ಮೇಲ್ಪಟ್ಟ ಪೊಲೀಸರು ಹಾಗೂ ದೀರ್ಘಕಾಲಿಕ ರೋಗಗಳಿಂದ ಬಳಲುತ್ತಿರುವವರನ್ನು ಕರ್ತವ್ಯಕ್ಕೆ ನಿಯೋಜಿಸಲಾಗುತ್ತಿಲ್ಲ.ಮನೆಯಿಂದಲೇ ಕೆಲಸ ಮಾಡುವಂತೆ ಸೂಚಿಸಲಾಗಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

SCROLL FOR NEXT