ಸಂಗ್ರಹ ಚಿತ್ರ 
ರಾಜ್ಯ

ಲೋಕಾಯುಕ್ತ ಕಾಯ್ದೆಗೆ ತಿದ್ದುಪಡಿ: ಸಚಿವ ಸಂಪುಟ ಒಪ್ಪಿಗೆ

ಲೋಕಾಯುಕ್ತ ಕಾಯ್ದೆಯ ಸೆಕ್ಷನ್ 9ಕ್ಕೆ ತಿದ್ದುಪಡಿ ತರಲು ಕರ್ನಾಟಕ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದ್ದು, ಪ್ರಾಥಮಿಕ ವಿಚಾರಣೆಯನ್ನು 90 ದಿನಗಳಲ್ಲಿ ಪೂರ್ಣಗೊಳಿಸಬೇಕು.

ಬೆಂಗಳೂರು: ಲೋಕಾಯುಕ್ತ ಕಾಯ್ದೆಯ ಸೆಕ್ಷನ್ 9ಕ್ಕೆ ತಿದ್ದುಪಡಿ ತರಲು ಕರ್ನಾಟಕ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದ್ದು, ಪ್ರಾಥಮಿಕ ವಿಚಾರಣೆಯನ್ನು 90 ದಿನಗಳಲ್ಲಿ ಪೂರ್ಣಗೊಳಿಸಬೇಕು. "ಈ ತಿದ್ದುಪಡಿಯ ಪ್ರಕಾರ ಆರು ತಿಂಗಳೊಳಗೆ ಚಾರ್ಜ್‌ಶೀಟ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ ಸಿ ಮಧುಸ್ವಾಮಿ ಅವರು ಗುರುವಾರ ಹೇಳಿದ್ದಾರೆ. 

ನಿನ್ನೆ ನಡೆದ ಸಚಿವ ಸಂಪುಟದಲ್ಲಿ ಸಂಪುಟವು ವಿಜಯಪುರದಲ್ಲಿ ವಿಮಾನ ನಿಲ್ದಾಣಕ್ಕೆ ರೂ. 220 ಕೋಟಿ ಅನುದಾನ ಮೀಸಲಿಡಲಾಗಿದೆ. ಎರಡು ಹಂತದಲ್ಲಿ ಹಣ ಬಿಡುಗಡೆಗೆ ಸಂಪುಟ ಒಪ್ಪಿಗೆ ನೀಡಿದ್ದು, ಮೊದಲ ಹಂತದಲ್ಲಿ ರೂ. 95 ಕೋಟಿ ಹಣ ಬಿಡುಗಡೆ ಮಾಡಲಾಗುವುದು. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ (ಎಪಿಎಂಸಿ) ನಡೆಯುವ ವಹಿವಾಟಿನ ಮೇಲೆ ವಿಧಿಸುತ್ತಿರುವ ಸೆಸ್ ಅನ್ನು ಶೇ.1.5ರಿಂದ ಶೇ.1ಕ್ಕೆ ಕಡಿತಗೊಳಿಸಿ ಸಚಿವ ಸಂಪುಟ ಸಭೆ ತೀರ್ಮಾನ ಕೈಗೊಂಡಿದೆ ಎಂದು ಹೇಳಿದ್ದಾರೆ. 

ಉಡಾನ್ ಯೋಜನೆಯಡಿ ರೂ.220 ಕೋಟಿ ವೆಚ್ಚದಲ್ಲಿ ನೂತನ ವಿಮಾನ ನಿಲ್ದಾಣ ಅಭಿವೃದ್ಧಿಪಡಿಸಲಾಗುವುದು. ಲೆವೆಲಿಂಗ್ ಗ್ರಾಂಟ್ ಫಾರ್ ರನ್ ವೇ, ಟ್ಯಾಕ್ಸಿ ವೇ, ಪಾರ್ಕಿಂಗ್, ಟರ್ಮಿನಲ್ ಕಟ್ಟಡ, ರನ್ ವೇ ಸೇರಿದಂತೆ ಇತರೆ ಕಾಮಗಾರಿಗಳಿಗಾಗಿ ಮೊದಲ ವರ್ಷಕ್ಕೆ ರೂ.95 ಕೋಟಿ ನೀಡಲು ಒಪ್ಪಿಗೆ ನೀಡಲಾಗಿದೆ. 

ರಾಜ್ಯದ 4 ವಿದ್ಯುತ್ ಕಂಪನಿಘಳು ಬೇರೆ ಬೇರೆ ಕಡೆಯಿಂದ ವಿದ್ಯುತ್ ಖರೀದಿಸಿದ್ದರಿಂದ ನಷ್ಟ ಅನುಭವಿಸಿ ಆರ್ಥಿಕ ಸಮಸ್ಯೆ ಎದುರಿಸವವಂತಾಯಿತು. ಅದನ್ನು ಸರಿದೂಗಿಸುವ ದೃಷ್ಟಿಯಿಂದ ರಾಜ್ಯ ಸರ್ಕಾರವು ಆರ್ಥಿಕ ನೆರವು ನೀಡಲು ತೀರ್ಮಾನಿಸಿದೆ. ಬೆಗಳೂರು ವಿದ್ಯುತ್ ಕಂಪನಿಗೆ ರೂ.500 ಕೋಟಿ, ಹುಬ್ಬಳ್ಳಿ ವಿದ್ಯುತ್ ಕಂಪನಿಗೆ ರೂ.400, ಗುಲ್ಪರ್ಗ ವಿದ್ಯುತ್ ಕಂಪನಿಗೆ 1,000 ಕೋಟಿ ಮತ್ತು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ರೂ.600 ಕೋಟಿ ಮಂಜೂರು ಮಾಡಿದೆ. ಬೇರೆ ಬೇರೆ ಭಾಗಗಳಿಂದ ವಿದ್ಯುತ್ ಖರೀದಿಸಿರುವುದರ ಮೊತ್ತ ಪಾವತಿಸದಿದ್ದರೆ ಎನ್'ಪಿಎ ಮಾಡುವ ಸಾಧ್ಯತೆ ಇದೆ. ಹೀಗಾಗಿ ವಿದ್ಯುತ್ ಕಂಪನಿಗಳಿಗೆ ರೂ.2500 ಕೋಟಿ ಆರ್ಥಿಕ ನೆರವು ನೀಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು. 

ರಾಜ್ಯದಲ್ಲಿ ಹೆಚ್ಚಿನ ಹೂಡಿಕೆ ಮಾಡಲು ಹೂಡಿಕೆದಾರರನ್ನು ಸೆಳೆಯಲು ಬೋಸ್ಟನ್ ಕನ್ಸಲ್ಟೆಂಟ್ ಗ್ರೂಪ್ ಆಫ್ ಇಂಡಿಯೂ ಪ್ರೈ.ಲಿ ಜೊತೆ ಒಡಂಬಡಿಕೆ ಮಾಡಿಕೊಳ್ಳಲು ನಿರ್ಧರಿಸಲಾಗಿದೆ. ಒಂದು ವರ್ಷ ಅವಧಿಗಾಗಿ ಕಂಪನಿಗೆ ರೂ.12 ಕೋಟಿ ಪಾವತಿಸಲಾಗುವುದು. ಅಂತರಾಷ್ಟ್ರೀಯ ಮಟ್ಟದ ಕಂಪನಿಗಳು ಬೋಸ್ಟನ್ ಕಂಪನಿಗೆ ಪರಿಚಯ ಇವೆ. ಹೀಗಾಗಿ ಈ ಕಂಪನಿ ಜೊತೆಗೆ ಒಡಂಬಡಿಕೆ ಮಾಡಿಕೊಳ್ಳಲಾಗುತ್ತಿದೆ ಎಂದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದಳಪತಿ ವಿಜಯ್ ಅಭಿನಯದ 'ಜನ ನಾಯಗನ್'

SCROLL FOR NEXT