ಡಾ. ಅಜಯ್ ಸಿಂಗ್ 
ರಾಜ್ಯ

ಮಾಜಿ ಸಿಎಂ ಧರ್ಮಸಿಂಗ್ ಪುತ್ರ, ಶಾಸಕ ಡಾ. ಅಜಯ್ ಸಿಂಗ್ ಗೆ ಕೊರೋನಾ ದೃಢ 

 ಮಾಜಿ ಸಿಎಂ ಧರ್ಮಸಿಂಗ್ ಪುತ್ರ, ಕಾಂಗ್ರೆಸ್ ಶಾಸಕರಾದ ಡಾ. ಅಜಯ್ ಧರ್ಮಸಿಂಗ್ ಅವರಿಗೆ ಕೊರೋನಾ ಸೋಂಕು ದೃಢವಾಗಿದೆ.

ಜೇವರ್ಗಿ: ಮಾಜಿ ಸಿಎಂ ಧರ್ಮಸಿಂಗ್ ಪುತ್ರ, ಕಾಂಗ್ರೆಸ್ ಶಾಸಕರಾದ ಡಾ. ಅಜಯ್ ಧರ್ಮಸಿಂಗ್ ಅವರಿಗೆ ಕೊರೋನಾ ಸೋಂಕು ದೃಢವಾಗಿದೆ.

ಶಾಸಕ ಅಜಯ್ ಸಿಂಗ್ ಸ್ವತಃ ಈ ಬಗ್ಗೆ ಟ್ವೀಟ್ ಮೂಲಕ ದೃಢಪಡಿಸಿದ್ದಾರೆ. ನನಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಆದರೆ ಯಾವ ರೋಗಲಕ್ಷಣಗಳು ಕಂಡುಬಂದಿಲ್ಲ. ಎರಡು ವಾರಗಳ ಕಾಲ ನಾನು ಕ್ವಾರಂಟೈನ್ ಆಗಿರಲಿದ್ದು ನನ್ನ ಸಂಪರ್ಕಕ್ಕೆ ಬಂದವರು ಮುಂಜಾಗರೂಕತೆ ವಹಿಸಿರಿ. ಎಲ್ಲರೂ ಸುರಕ್ಷಿತವಾಗಿರಿ ಎಂದು ವಿಧಾನಸಭೆ ಕಾಂಗ್ರೆಸ್ ಮುಖ್ಯ ಸಚೇತಕರು ಸಹ ಆಗಿರುವ ಶಾಸಕ ಅಜಯ್ ಸಿಂಗ್ ಹೇಳಿದ್ದಾರೆ.

ಗುರುವಾರ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಬಾಗವಹಿಸಿದ್ದ ಅಜಯ್ ಸಿಂಗ್ ಬೆಂಗಳೂರಿನ ತಮ್ಮ ನಿವಾಸದಲ್ಲಿ ಕ್ವಾರಂಟೈನ್ ಆಗಿದ್ದಾರೆ.

ಅಜಯ್ ಸಿಂಗ್ ಅವರಿಗೂ ಮುನ್ನ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ, ಕುಣಿಗಲ್ ಶಾಸಕರು ಸೇರಿ ವಿಧಾನಸಭೆ ಹಾಗೂ ವಿಧಾನ ಪರಿಷತ್ ಸದಸ್ಯರು ಸಹ ಕೊರೋನಾ ಸೋಂಕಿಗೆ ತುತ್ತಾಗಿದ್ದರು.

ರಾಜ್ಯದಲ್ಲಿ ಗುರುವಾರ ಸಂಜೆ 2,228  ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ದೃಢವಾಗಿತ್ತು. ಇದರೊಂದಿಗೆ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ ಮೂವತ್ತು ಸಾವಿರ ಗಡಿ ದಾಟಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾವೇರಿ ನೀರು ಹಂಚಿಕೆ: ತಮಿಳುನಾಡು ಅರ್ಜಿಯನ್ನು ಸುಪ್ರೀಂನಲ್ಲಿ ಪ್ರಶ್ನಿಸಲು ಅಧಿಕಾರಿಗಳಿಗೆ ಸಚಿವ ರಾಮಲಿಂಗಾ ರೆಡ್ಡಿ ನಿರ್ದೇಶನ

ಹೈಕೋರ್ಟ್‌ನಿಂದ ಜೀವಾವಧಿ ಶಿಕ್ಷೆಗೆ ತಡೆ: ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅನರ್ಹತೆ ರದ್ದು!

ಸಂಪುಟ ವಿಸ್ತರಣೆಯಲ್ಲಿ ಬಿಗ್ ಟ್ವಿಸ್ಟ್: ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 19 ಶಾಸಕರು; ಕೊನೆ ಕ್ಷಣದಲ್ಲಿ ಒಬ್ಬರಿಗೆ ಕೊಕ್!

ಭಾವೋದ್ವೇಗಕ್ಕೆ ಒಳಗಾಗಿ ರಾಜೀನಾಮೆ ನೀಡಬೇಡಿ: ಪಕ್ಷ ನಿಮ್ಮ ಸೇವೆ ಮರೆಯಲ್ಲ; ಅಸಮಾಧಾನಿತ ಶಾಸಕರಿಗೆ ಬಿ.ಕೆ ಹರಿಪ್ರಸಾದ್ ಮನವಿ

ಕಾಂಗ್ರೆಸ್‌ ಲೆಟರ್‌ಹೆಡ್‌ನಲ್ಲಿ ಸ್ಪೀಕರ್‌ ಹೆಸರು; ಮತ್ತೊಂದು ಕೆಟ್ಟ ಸಂಪ್ರದಾಯಕ್ಕೆ ನಾಂದಿ: ಸುರೇಶ್‌ ಕುಮಾರ್‌ ಕಿಡಿ