ರೇವಾ ಏಷ್ಯಾದ ದೊಡ್ಡ ಸೋಲಾರ್ ಪಾರ್ಕ್: ಕೇಂದ್ರ ಸಚಿವರ ಹೇಳಿಕೆಗೆ ಡಿಕೆಶಿ ಆಕ್ಷೇಪ
ಮಧ್ಯಪ್ರದೇಶದ ರೇವಾ ಪ್ರದೇಶದಲ್ಲಿನ 750 ಮೆ.ವ್ಯಾ. ಸೋಲಾರ್ ಪಾರ್ಕ್ ಏಷ್ಯಾದ ದೊಡ್ಡ ಸೋಲಾರ್ ಪಾರ್ಕ್ ಎಂದು ಘೋಷಿಸಿರುವ ಕೇಂದ್ರ ವಿದ್ಯುತ್ ಸಚಿವರ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ಮಧ್ಯಪ್ರದೇಶದ ರೇವಾ ಪ್ರದೇಶದಲ್ಲಿನ 750 ಮೆ.ವ್ಯಾ. ಸೋಲಾರ್ ಪಾರ್ಕ್ ಏಷ್ಯಾದ ದೊಡ್ಡ ಸೋಲಾರ್ ಪಾರ್ಕ್ ಎಂದು ಘೋಷಿಸಿರುವ ಕೇಂದ್ರ ವಿದ್ಯುತ್ ಸಚಿವರ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ತಮ್ಮ ಅವಧಿಯಲ್ಲಿ ಕರ್ನಾಟಕದಲ್ಲಿ ಮೂರು ವರ್ಷಗಳ ಹಿಂದೆಯೇ ರಾಜ್ಯದ ತುಮಕೂರು ಜಿಲ್ಲೆಯ ಪಾವಗಡದಲ್ಲಿ 2 ಸಾವಿರ ಮೆ.ವ್ಯಾ. ಸಾಮರ್ಥ್ಯದ ಸೋಲಾರ್ ಪಾರ್ಕ್ ಮಾಡಿದ್ದು, ಈಗಾಗಲೇ ವಿದ್ಯುತ್ ಉತ್ಪಾದನೆ ಆರಂಭವಾಗಿದೆ. ಸುಮಾರು 13 ಸಾವಿರ ಎಕರೆ ಪ್ರದೇಶದಲ್ಲಿ ಈ ಪಾರ್ಕ್ ಮಾಡಲಾಗಿದ್ದು, ಯಾವುದೇ ರೈತರಿಂದ ಜಮೀನು ಖರೀದಿ ಮಾಡದೇ ಸೋಲಾರ್ ಪಾರ್ಕ್ ಮಾಡಲಾಗಿದೆ. ಇಡೀ ದೇಶವೇ ನವೀಕರಣ ಇಂಧನಕ್ಕೆ ಕರ್ನಾಟಕ ಮಾದರಿಯನ್ನು ಅನುಸರಿಸುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.
ಕೇಂದ್ರ ಸಚಿವರು ಯಾವ ಆಧಾರದಲ್ಲಿ ಮಧ್ಯಪ್ರದೇಶದ ರೇವಾದಲ್ಲಿ ಆರಂಭವಾಗುತ್ತಿರುವ 750 ಮೆ.ವ್ಯಾ. ನ ಸೋಲಾರ್ ಪಾರ್ಕ್ ಏಷ್ಯಾದಲ್ಲಿಯೇ ದೊಡ್ಡದು ಎಂದು ಹೇಗೆ ಹೇಳಿದ್ದಾರೆ.ಈ ಬಗ್ಗೆ ಸ್ಪಷ್ಟನೆ ನೀಡಬೇಕೆಂದು ಆಗ್ರಹಿಸಿ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.