ಸಾಂದರ್ಭಿಕ ಚಿತ್ರ 
ರಾಜ್ಯ

ಕರ್ನಾಟಕದಲ್ಲಿ ಗೋಹತ್ಯೆ ನಿಷೇಧ ಮಸೂದೆ ಜಾರಿಗೆ ತರಲು ಸರ್ಕಾರ ಗಂಭೀರ ಚಿಂತನೆ: ಗುಜರಾತ್, ಉತ್ತರ ಪ್ರದೇಶ ಮಾದರಿ

ರಾಜ್ಯ ಸರ್ಕಾರ ಗೋ ಹತ್ಯೆ ಮತ್ತು ರಕ್ಷಣೆ ಮಸೂದೆ 2012ರನ್ನು ಮತ್ತೆ ಜಾರಿಗೆ ತರಲು ಮುಂದಾಗಿದೆ. ಈ ಮಸೂದೆ ಈಗಾಗಲೇ ಗುಜರಾತ್ ಮತ್ತು ಉತ್ತರ ಪ್ರದೇಶ ರಾಜ್ಯಗಳಲ್ಲಿ ಜಾರಿಯಲ್ಲಿದ್ದು ಅಲ್ಲಿ ಯಾವ ರೀತಿ ಜಾರಿಗೆ ಬರುತ್ತಿದೆ ಎಂದು ನೋಡಿ ಅಧ್ಯಯನ ಮಾಡಿಕೊಂಡು ಬರಲು ರಾಜ್ಯದಿಂದ ಅಧಿಕಾರಿಗಳ ತಂಡವೊಂದನ್ನು ಕಳುಹಿಸಿಕೊಡಲಾಗುತ್ತದೆ.

ಬೆಂಗಳೂರು: ರಾಜ್ಯ ಸರ್ಕಾರ ಗೋ ಹತ್ಯೆ ಮತ್ತು ರಕ್ಷಣೆ ಮಸೂದೆ 2012ರನ್ನು ಮತ್ತೆ ಜಾರಿಗೆ ತರಲು ಮುಂದಾಗಿದೆ. ಈ ಮಸೂದೆ ಈಗಾಗಲೇ ಗುಜರಾತ್ ಮತ್ತು ಉತ್ತರ ಪ್ರದೇಶ ರಾಜ್ಯಗಳಲ್ಲಿ ಜಾರಿಯಲ್ಲಿದ್ದು ಅಲ್ಲಿ ಯಾವ ರೀತಿ ಜಾರಿಗೆ ಬರುತ್ತಿದೆ ಎಂದು ನೋಡಿ ಅಧ್ಯಯನ ಮಾಡಿಕೊಂಡು ಬರಲು ರಾಜ್ಯದಿಂದ ಅಧಿಕಾರಿಗಳ ತಂಡವೊಂದನ್ನು ಕಳುಹಿಸಿಕೊಡಲಾಗುತ್ತದೆ ಎಂದು ಪಶು ಸಂಗೋಪನಾ ಸಚಿವ ಪ್ರಭು ಚೌಹಾನ್ ತಿಳಿಸಿದ್ದಾರೆ.

ನಿನ್ನೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ವೇಳೆ ಅವರು, ಈ ಮಸೂದೆ ಒಂದು ಬಾರಿ ಕಾನೂನಾಗಿ ಜಾರಿಗೆ ಬಂದ ನಂತರ ಗೋವುಗಳನ್ನು ಕೊಲ್ಲಲು ಮಾರಾಟ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗುತ್ತದೆ. ಬೇರೆ ರಾಜ್ಯಗಳಿಗೆ ಹಸುಗಳನ್ನು ಸಾಗಾಟ ಮಾಡುವುದನ್ನು ಕೂಡ ತಡೆಯಲಾಗುತ್ತದೆ. ಕಾಮಧೇನುವಾದ ಗೋವುಗಳನ್ನು ಕಾಪಾಡುವುದು ನಮ್ಮ ಆದ್ಯ ಕರ್ತವ್ಯ. ಈ ನಿಟ್ಟಿನಲ್ಲಿ ರಾಜ್ಯದ ಅಲ್ಲಲ್ಲಿ ಗೋಶಾಲೆಗಳನ್ನು ಬಲವರ್ಧಿಸಲು ನಾವು ಆರಂಭಿಸಿದ್ದೇವೆ. ಸ್ಥಳೀಯ ತಳಿಗಳ ಹಸುಗಳನ್ನು ರಕ್ಷಿಸಲು ಗೋ ಸೇವಾ ಆಯೋಗವನ್ನು ಸ್ಥಾಪಿಸುವುದಾಗಿ ಕಳೆದ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಘೋಷಿಸಿತ್ತು ಎಂದು ಹೇಳಿದರು.

ತೆಲಂಗಾಣ, ಅಸ್ಸಾಂ, ಬಿಹಾರ, ದೆಹಲಿ, ಗುಜರಾತ್, ಹರ್ಯಾಣ, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಜಾರ್ಖಂಡ್, ಮಧ್ಯ ಪ್ರದೇಶ, ಮಹಾರಾಷ್ಟ್ರ, ಒಡಿಶಾ, ಪಂಜಾಬ್, ತಮಿಳು ನಾಡು, ಉತ್ತರ ಪ್ರದೇಶ ಸೇರಿದಂತೆ ಇನ್ನೂ ಕೆಲವು ರಾಜ್ಯಗಳಲ್ಲಿ ಗೋ ಹತ್ಯೆ ಮಸೂದೆಯನ್ನು ಜಾರಿಗೆ ತರಲಾಗಿದ್ದು ಕರ್ನಾಟಕ ಸಹ ಕಟ್ಟುನಿಟ್ಟಾಗಿ ಸದ್ಯದಲ್ಲಿಯೇ ಜಾರಿಗೆ ತರಲಿದೆ ಎಂದು ಹೇಳಿದರು.

ಕೋವಿಡ್-19 ಸಮಸ್ಯೆ ಬಗೆಹರಿದ ನಂತರ ಅಧಿಕಾರಿಗಳನ್ನು ಗುಜರಾತ್ ಮತ್ತು ಉತ್ತರ ಪ್ರದೇಶಕ್ಕೆ ಕಳುಹಿಸಿ ಅಲ್ಲಿನ ಗೋಹತ್ಯೆ ನಿಷೇಧ ಕಾನೂನನ್ನು ಅಧ್ಯಯನ ಮಾಡಿ ಬರುವಂತೆ ಸೂಚಿಸುತ್ತೇವೆ. 2010ರಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ನಾವು ಕಾನೂನನ್ನು ಮಂಡಿಸಿದ್ದೆವು. ಆಗ ಗೃಹ ವ್ಯವಹಾರಗಳ ಸಚಿವಾಲಯ ಕೆಲವು ತಿದ್ದುಪಡಿಗಳನ್ನು ಮಾಡಿ ಎಂದು ಸೂಚಿಸಿದರು. ನಂತರ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಂದ ಮೇಲೆ ಅದು ಜಾರಿಗೆ ಬರಲಿಲ್ಲ ಎಂದು ಸಚಿವ ಚೌಹಾನ್ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ