ರಾಜ್ಯ

ಪ್ರವಾಸೋದ್ಯಮ ಸಚಿವ ಸಿಟಿ ರವಿಗೆ ಕೊರೋನಾ ಪಾಸಿಟಿವ್ 

Lingaraj Badiger

ಬೆಂಗಳೂರು: ಮಹಾಮಾರಿ ಕೊರೋನಾ ವೈರಸ್ ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿದ್ದು, ಶನಿವಾರ ಪ್ರವಾಸೋದ್ಯಮ ಸಚಿವ ಸಿಟಿ ರವಿ ಅವರಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದೆ.

ಈ ಕುರಿತು ಟ್ವೀಟ್ ಮಾಡಿರುವ ಸಿಟಿ ರವಿ ಅವರು, ''ನಾನು ಕ್ಷೇಮವಗಿದ್ದೇನೆ. ಕೊರೋನಾ ಲಕ್ಷಣಗಳಿಲ್ಲ. ಈಗ ಹೋಮ್ ಕ್ವಾರಂಟೈನ್-ನಲ್ಲಿ ಇದ್ದೇನೆ. ಸದ್ಯ ನನ್ನ ತೋಟದ ಮನೆಯಲ್ಲೇ ವಾಕ್ ಮಾಡುತ್ತಿದ್ದೇನೆ'' ಎಂದು ಮಾಹಿತಿ ನೀಡಿದ್ದಾರೆ.

ರಾಜ್ಯದ ಹಲವು ಶಾಸಕರು, ಸಂಸದರು ಹಾಗೂ ವಿಧಾನ ಪರಿಷತ್ ಸದಸ್ಯರಿಗೆ ವಕ್ಕರಿಸಿದ್ದ ಕೊರೋನಾ ಇದೀಗ ಸಚಿವರಿಗೂ ತಗುಲಿದೆ.

ಇತ್ತೀಚಿಗೆ ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ, ಮಾಜಿ ಉಪ ಸಭಾಪತಿ ಪುಟ್ಟಣ್ಣ, ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ, ಮಂಡ್ಯ ಸಂಸದೆ ಸುಮಲತಾ ಅಂಬರೀಶ್, ಕುಣಿಗಲ್ ಶಾಸಕ ಡಾ.ರಂಗನಾಥ್, ವಿಧಾನ ಪರಿಷತ್ ಸದಸ್ಯ, ಚಿಕ್ಕಮಗಳೂರಿನ ಪ್ರಾಣೇಶ್ ಎಂ.ಕೆ, ಹೊಸಕೋಟೆ ಕ್ಷೇತ್ರದ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ, ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡ, ಜೇವರ್ಗಿ ಶಾಸಕ ಅಜಯ್ ಸಿಂಗ್, ಹುಬ್ಬಳ್ಳಿ ಪೂರ್ವ ಕ್ಷೇತ್ರದ ಶಾಸಕ ಪ್ರಸಾದ ಅಬ್ಬಯ್ಯ ಅವರಿಗೆ ಕೋರೋನಾ ಸೋಂಕು ದೃಢಪಟ್ಟಿದೆ.

SCROLL FOR NEXT