ರಾಜ್ಯ

ರಾಜ್ಯದಲ್ಲಿ ಪಿಪಿಇ ಕಿಟ್ ಉತ್ಪಾದಿಸುವ ಕಾರ್ಖಾನೆ ತೆರೆಯಲು ಆದ್ಯತೆ: ಸಚಿವ ಆರ್. ಅಶೋಕ್

Lingaraj Badiger

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ನಿಯಂತ್ರಣ ಉದ್ದೇಶದಿಂದ ಪಿಪಿಇ ಕಿಟ್ ತಯಾರಿಸುವ ಕಾರ್ಖಾನೆಗಳನ್ನು ತೆರೆಯಲು ಸರ್ಕಾರ ಉದ್ದೇಶಿಸಿದೆ ಎಂದು ಕಂದಾಯ ಸಚಿವ, ಬೆಂಗಳೂರು ದಕ್ಷಿಣ ವಲಯ ಕೋವಿಡ್ ಉಸ್ತುವಾರಿ ಆರ್. ಅಶೋಕ್ ಅವರು ಭಾನುವಾರ ಹೇಳಿದ್ದಾರೆ.

ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧಿಕೃತ ನಿವಾಸ ಕಾವೇರಿಯಲ್ಲಿ ನಡೆದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈದ್ಯಕೀಯ ಪರಿಕರಗಳಿಗೆ ಸಂಬಂಧಿತ ಕಾರ್ಖಾನೆಗಳನ್ನು ತೆರೆಯಲು ಅವಕಾಶ ನೀಡುವಂತೆ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದೇವೆ. ಅವರು ಈ ನಿಟ್ಟಿನಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದರು.

ಲಾಕ್‌ಡೌನ್ ಕುರಿತಾಗಿ ಸೋಮವಾರ ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು. ಸದ್ಯ 7 ದಿನ ಮಾತ್ರ ಲಾಕ್‌ಡೌನ್ ಜಾರಿಯಲ್ಲಿರುತ್ತದೆ. ಆದರೆ ಈ ಸಂದರ್ಭದಲ್ಲಿ ಜನರು ಅನಗತ್ಯವಾಗಿ ಮನೆಯಿಂದ ಹೊರಬಾರದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸದ್ಯ 12 ಜಿಲ್ಲೆಗಳಲ್ಲಿ ಗಂಭೀರ ಪರಿಸ್ಥಿತಿ ಇದೆ. ಕೊರೋನಾ ಹೆಚ್ಚಿರುವ ಜಿಲ್ಲೆಗಳಲ್ಲೂ ಲಾಕ್‌ಡೌನ್ ಜಾರಿಯೊಳಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುವುದು. ಈ ಕುರಿತು ಚರ್ಚೆ ನಡೆಸಲು ಸೋಮವಾರ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಲಾಗುವುದು ಎಂದರು.

SCROLL FOR NEXT