ರಾಜ್ಯ

ಬೆಂಗಳೂರು ಲಾಕ್​ಡೌನ್; ಮೆಡಿಕಲ್ಸ್ ಹೊರತುಪಡಿಸಿ ಎಲ್ಲ ಅಗತ್ಯವಸ್ತುಗಳ ಅಂಗಡಿಗಳನ್ನು ಮಧ್ಯಾಹ್ನ 12ಗಂಟೆಯೊಳಗೆ ಮುಚ್ಚಬೇಕು

Srinivasamurthy VN

ಬೆಂಗಳೂರು: ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಇಂದು ರಾತ್ರಿ 8 ಗಂಟೆಯಿಂದ ಜಾರಿಯಾಗಿರುವ ಲಾಕ್ಡೌನ್ ಮುಂದಿನ ಒಂದು ವಾರಗಳ ಕಾಲ ಲಾಕ್ಡೌನ್ ಜಾರಿಯಲ್ಲಿರಲಿದ್ದು, ಈ ಸಂಬಂಧ ನಗರ ಪೊಲೀಸ್ ಆಯುಕ್ತ ಸಾರ್ವಜನಿಕರಿಗೆ ಕೆಲ ಮಾರ್ಗದರ್ಶಿ ಸೂಚನೆಗಳನ್ನು ನೀಡಿದ್ದಾರೆ.

ಈ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೆಂಗಳೂರು ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಅವರು, ಬೆಳಿಗ್ಗೆ 5ರಿಂದ ಮಧ್ಯಾಹ್ನ 12 ಗಂಟೆವರೆಗೆ ದಿನಸಿ ಅಂಗಡಿ ತೆರೆಯಲು ಅನುಮತಿ ನೀಡಲಾಗಿದ್ದು, ಸಾರ್ವಜನಿಕರು ದಿನಸಿ, ತರಕಾರಿ ಖರೀದಿಸಬಹುದು‌. ಮಧ್ಯಾಹ್ನ 12ರ ನಂತರ ಎಲ್ಲಾ ದಿನಸಿ ಅಂಗಡಿಗಳನ್ನು ಮುಚ್ಚುವ ಮೂಲಕ ಕಠಿಣ ಲಾಕ್ ಡೌನ್ ಜಾರಿಗೊಳಿಸಲಾಗುವುದು ಎಂದರು.

ಯಾವುದೇ ಪಾಸ್ ವಿತರಣೆ ಇಲ್ಲ
ಇನ್ನು ಇದು ಅಲ್ಪ ಅವಧಿಯ ಲಾಕ್ ಡೌನ್ ಆಗಿರುವುದರಿಂದ ಯಾರೊಬ್ಬರಿಗೂ ಇಲಾಖೆಯಿಂದ ಯಾವುದೇ ತರಹದ ಪಾಸ್ ವಿತರಣೆ ಮಾಡುವುದಿಲ್ಲ ಎಂದು ಆಯುಕ್ತರು ಸ್ಪಷ್ಟಪಡಿಸಿದರು. ಅಲ್ಲದೆ ಮೆಡಿಕಲ್ ಅಂಗಡಿಗಳ ಸೇವೆ ಲಭ್ಯವಿದೆ. ಫುಡ್ ಟೆಲಿವರಿ ವಾಹನಗಳಿಗೆ ಮಾತ್ರ 8 ಗಂಟೆವರೆಗೆ ಅವಕಾಶ ಕಲ್ಪಿಸಲಾಗಿದ್ದು, ಹೋಟೆಲ್ ಗಳು ಕೂಡ ರಾತ್ರಿ 8 ಗಂಟೆ ವರೆಗೆ ಕಾರ್ಯ ನಿರ್ವಹಿಸಲಿವೆ. ಆದರೆ, ಸಿಬ್ಬಂದಿ ಕಡ್ಡಾಯವಾಗಿ ಸಮವಸ್ತ್ರದಲ್ಲಿರಬೇಕು ಎಂಬ ನಿಯಮ ಜಾರಿ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲ್ಸೇತುವೆ ಹೊರತು ಪಡಿಸಿ ಎಲ್ಲಾ ಮೇಲ್ಸೇತುವೆಗಳನ್ನು ಸಂಪೂರ್ಣವಾಗಿ ಮುಚ್ಚಲಾಗುವುದು. ಸದ್ಯ ನಗರದಲ್ಲಿ 2 ಸಾವಿರಕ್ಕಿಂತ ಅಧಿಕ ಕಂಟೈನ್ಮೆಂಟ್ ಜೋನ್ ಗಳಿದ್ದು, ಈ ಪ್ರದೇಶದಲ್ಲಿ ಕಟ್ಟುನಿಟ್ಟಿನ ಲಾಕ್ ಡೌನ್ ಜಾರಿ‌ ಇರಲಿದೆ ಎಂದರು. ಜನರಲ್ಲಿ ಬಹಳ ಹುಷಾರಾಗಿ ನಡೆದುಕೊಳ್ಳಬೇಕು. ಲಾಕ್ಡೌನ್ ಸಮಯದಲ್ಲಿ ನಿಯಮ ಉಲ್ಲಂಘಿಸಿದರೆ ದಂಡ ಹಾಕಲಾಗುವುದು. ಜುಲೈ 22 ಬೆಳಗ್ಗೆ 5 ಗಂಟೆಗೆ ಲಾಕ್ ಡೌನ್ ಮುಕ್ತಾಯಗೊಳ್ಳಲಿದೆ ಎಂದು ಮಾಹಿತಿ ನೀಡಿದರು.

SCROLL FOR NEXT