ಸಂಗ್ರಹ ಚಿತ್ರ 
ರಾಜ್ಯ

ಸೆಪ್ಟೆಂಬರ್ 7 ರಿಂದ ಡಿಪ್ಲೋಮಾ ಅಂತಿಮ ಸೆಮಿಸ್ಟರ್ ಪರೀಕ್ಷೆ

ಈಗಾಗಲೇ ಎಸ್ಎಸ್ಎಲ್'ಸಿ ಹಾಗೂ ಪಿಯುಸಿ ಪರೀಕ್ಷೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವ ರಾಜ್ಯ ಸರ್ಕಾರ ಇದೀಗ ಡಿಪ್ಲೋಮಾ ಅಂತಿಮ ಸೆಮಿಸ್ಟರ್ ಪರೀಕ್ಷೆ ನಡೆಸಲು ದಿನಾಂಕವನ್ನು ಘೋಷಣೆ ಮಾಡಿದೆ.

ಬೆಂಗಳೂರು: ಈಗಾಗಲೇ ಎಸ್ಎಸ್ಎಲ್'ಸಿ ಹಾಗೂ ಪಿಯುಸಿ ಪರೀಕ್ಷೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವ ರಾಜ್ಯ ಸರ್ಕಾರ ಇದೀಗ ಡಿಪ್ಲೋಮಾ ಅಂತಿಮ ಸೆಮಿಸ್ಟರ್ ಪರೀಕ್ಷೆ ನಡೆಸಲು ದಿನಾಂಕವನ್ನು ಘೋಷಣೆ ಮಾಡಿದೆ.

ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಕೆ ಡಿಪ್ಲೋಮಾ ಅಂತಿಮ ಸೆಮಿಸ್ಟರ್ ಪರೀಕ್ಷೆಯನ್ನು ಸೆಪ್ಟೆಂಬರ್ 7 ರಿಂದ 28ರವರೆಗೂ ನಡೆಸುವುದಾಗಿ ತಿಳಿಸಿದೆ. ಬ್ಯಾಕ್‌ಲಾಗ್ ಪರೀಕ್ಷೆಗಳನ್ನೂ ಕೂಡ ಅದೇ ದಿನವೇ ನಡೆಸುವುದಾಗಿಯೂ ಇಲಾಖೆ ತಿಳಿಸಿದೆ. ಪರೀಕ್ಷೆ ಕುರಿತ ಉಳಿತ ವಿವರಗಳನ್ನು ಇಲಾಖೆಯು ವೆಬ್ ಪೋರ್ಟಲ್ ಮತ್ತು www.dtek.karnataka.gov.in, ನಲ್ಲಿ ತಿಳಿಸಿದೆ. 

ಪರೀಕ್ಷೆಗಳನ್ನು ಈ ಹಿಂದೆ ಜು.15ರಿಂದ ಆಗಸ್ಟ್ 8ರವರೆಗೂ ನಡೆಸುವುದಾಗಿ ನಿರ್ಧರಿಸಲಾಗಿತ್ತು. ಲಾಕ್'ಡೌನ್ ಪರಿಣಾಮ ಪರೀಕ್ಷೆಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿತ್ತು. ಇದೀಗ ಪರೀಕ್ಷೆ ಬರೆಯಲು ಇಲಾಖೆ ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಟ್ಟಿದ್ದು, ಹತ್ತಿರ ಇರುವ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಗಳಲ್ಲಿ ಪರೀಕ್ಷೆ ಬರೆಯಲು ಅನುವು ಮಾಡಿಕೊಟ್ಟಿದೆ. 

ಈಗಾಗಲೇ ಪ್ರಾಕ್ಟಿಕಲ್ ಎಕ್ಸಾಮ್ ಗಳನ್ನು ರದ್ದುಗೊಳಿಸಲಾಗಿದ್ದು, ಒಂದು ವೇಳೆ ಅನಾರೋಗ್ಯದಿಂದಾಗಿ ಅಥವಾ ಕೊರೋನಾ ಲಕ್ಷಣಗಳಿಂದಾಗಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗದೇ ಹೋದಲ್ಲಿ ಮುಂದೆ ಬರೆಯುವ ಪರೀಕ್ಷೆಗಳಲ್ಲಿ ಅವಕಾಶ ಮಾಡಿಕೊಡಲಾಗುತ್ತದೆ. ಈ ವೇಳೆ ಮೊದಲ ಬಾರಿ ಬರೆದ ಪರೀಕ್ಷೆಯೆಂದೇ ಅದನ್ನು ಪರಿಗಣಿಸಲಾಗುತ್ತದೆ ಎಂದು ಸುತ್ತೋಲೆಯಲ್ಲಿ ಇಲಾಖೆ ತಿಳಿಸಿದೆ. 

ಈ ನಡುವೆ ಎರಡನೇ ಹಾಗೂ ನಾಲ್ಕನೆ ಸೆಮಿಸ್ಟರ್ ಪರೀಕ್ಷೆಗಳನ್ನು ರದ್ದುಪಡಿಸಲಾಗಿದ್ದು, ಹಿಂದಿನ ಸೆಮಿಸ್ಟರ್ ಗಳಲ್ಲಿ ಬರೆದ ಪರೀಕ್ಷೆಗಳ ಫಲಿತಾಂಶದ ಆಧಾರದ ಮೇಲೆ ವಿದ್ಯಾರ್ಥಿಗಳಿಗೆ ಅಂಕಗಳನ್ನು ನೀಡಲಾಗುತ್ತದೆ. 

ಇನ್ನು ಸಂಜೆ ಪಾಲಿಟೆಕ್ನಿಕ್ ಕಾಲೇಜುಗಳ ವಿದ್ಯಾರ್ಥಿಗಳಿಗೆ ಇಂಟರ್ನಲ್ ಮಾರ್ಕ್ಸ್ ಗಳ ಮೂಲಕ ಅಂಕಗಳನ್ನು ನೀಡಲಾಗುತ್ತದೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರತಿಪಕ್ಷಗಳು ಸಂಪುಟದಿಂದ ವಜಾಕ್ಕೆ ಆಗ್ರಹಿಸುತ್ತಿರುವ ಮಧ್ಯೆ ಸಚಿವ ಬಿ. ನಾಗೇಂದ್ರಗೆ ಹೈಕೋರ್ಟ್ ಬಿಗ್ ರಿಲೀಫ್!

ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ ಹೋಗಿದ್ದ ಟೆಕ್ಕಿ ನಾಪತ್ತೆ: ಲ್ಯಾಪ್‌ಟಾಪ್‌ನಲ್ಲಿ ಶಾಂತಲಾ ಡ್ರಾಪ್‌ ಪಾಯಿಂಟ್‌ ಸರ್ಚ್‌; ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ!

ರಾಂಚಿ ಪರೀಕ್ಷೆ ವಿವಾದ: ಬ್ಯಾರಿಕೇಡ್ ಮುರಿದು ವಿಧಾನಸೌಧದತ್ತ ನುಗ್ಗಿದ ವಿದ್ಯಾರ್ಥಿಗಳು! ಜಲಫಿರಂಗಿ ಬಳಸಿದ ಪೊಲೀಸರು, Video

'ಬಸವಣ್ಣನನ್ನೇ ಬಿಡಲಿಲ್ಲ.. ನಾನ್ಯಾರು..'; ‘ಅವರಿಗೆ ಸಚಿವ ಸ್ಥಾನ ಸಿಗದಿರಲು ನಾನು ಕಾರಣ ಅಲ್ಲ’ ಎಂದ ಎಂಬಿ ಪಾಟೀಲ್ ಸ್ಪಷ್ಟನೆ, Video

'JDS ಪಾದಯಾತ್ರೆಯ ಬಂಡವಾಳ ಬಯಲು ಮಾಡಿದ ವಿಜಯೇಂದ್ರ': ಕಾಂಗ್ರೆಸ್​​ನಿಂದ ವಿಡಿಯೋ ಬಿಡುಗಡೆ!