ರಾಜ್ಯ

ಲಾಕ್ ಡೌನ್ ಹಿನ್ನೆಲೆ: ತುರ್ತು ಸೇವೆಗಷ್ಟೇ ಬಿಎಂಟಿಸಿ ಸೌಲಭ್ಯ

Raghavendra Adiga

ಬೆಂಗಳೂರು: ಮಹಾಮಾರಿ ಕೋವಿಡ್-19 ಗೆ ನಗರದ ಮತ್ತೋರ್ವ ಕೊರೋನಾ ವಾರಿಯರ್ ಪಿಎಸ್ ಐ ಬಲಿಯಾಗಿದ್ದಾರೆ. 

ಈ ಮೂಲಕ ನಗರದಲ್ಲಿ ಕೊರೋನಾದಿಂದ ಮೃತಪಟ್ಟ ಪೊಲೀಸರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ.

 ನಗರದ ಕಂಟ್ರೋಲ್ ರೂಮ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ 59 ವರ್ಷದ ಪಿಎಸ್ಐ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. 

ಚಿಕಿತ್ಸೆಗೆಂದು ಅತ್ತಿಬೆಲೆಯ ಸಾಯಿ ಆಸ್ಪತ್ರೆಗೆ ದಾಖಲಾಗಿದ್ದ ಅವರು, ಚಿಕಿತ್ಸೆ ಫಲಿಸದೆ ಮಂಗಳವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

ಸದ್ಯ ನಗರದಲ್ಲಿ ಒಟ್ಟು 578 ಪೊಲೀಸರಿಗೆ ಸೋಂಕು ತಗಲಿದ್ದು, 732 ಪೊಲೀಸ್ ಸಿಬ್ಬಂದಿ ಕ್ವಾರಂಟೈನ್ ನಲ್ಲಿದ್ದಾರೆ.

ವಯಸ್ಸಾದವರಿಗೆ ಕೊರೊನಾ ಬಹುಬೇಗನೆ ಬಾಧಿಸುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಐವತ್ತು ವರ್ಷ ಮೇಲ್ಪಟ್ಟ ಪೊಲೀಸರಿಗೆ ಮನೆಯಿಂದ ಕರ್ತವ್ಯ ನಿರ್ವಹಿಸಲು ಅವಕಾಶ ಕಲ್ಪಿಸಲಾಗಿದೆ. ಹೀಗಾಗಿ ಮೃತ ಪಿಎಸ್ಐ ಅವರು ಕಳೆದ ಹಲವು ದಿನಗಳಿಂದ ಮನೆಯಲ್ಲಿದ್ದರು ಎನ್ನಲಾಗಿದೆ.

ದಿನಗಳು ಉರುಳಿದಂತೆ ಪೊಲೀಸರಿಗೆ ಸೋಂಕು ಹೆಚ್ಚಾಗುತ್ತಿದ್ದು, ಮರಣ ಹೊಂದುತ್ತಿರುವ ಪೊಲೀಸರ ಸಂಖ್ಯೆಯೂ ಏರಿಕೆಯಾಗುತ್ತಿದೆ. ಇದು ಇಲಾಖೆಯಲ್ಲಿ ಮತ್ತಷ್ಟು ಆತಂಕ ಸೃಷ್ಟಿಸಿದೆ.

SCROLL FOR NEXT