ಮಲ್ಲಿಕಾರ್ಜುನ ಖರ್ಗೆ 
ರಾಜ್ಯ

ನಾನು ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿಲ್ಲ: ಸೋಂಕಿತರಿಗೆ ಸಹಾಯ ಮಾಡಿ- ಡಾ.ಮಲ್ಲಿಕಾರ್ಜುನ್ ಖರ್ಗೆ

ಕೊರೊನಾ ಹಾವಳಿಯಿಂದಾದ ಎರಡು ಪ್ರಮುಖ ಕಾರಣಗಳಿಂದ ಈ ಬಾರಿ ತಾವು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ರಾಜ್ಯಸಭೆ ಸದಸ್ಯ ಡಾ. ಮಲ್ಲಿಕಾರ್ಜುನ್ ಖರ್ಗೆ ತಿಳಿಸಿದ್ದಾರೆ.

ಕಲಬುರಗಿ: ಕೊರೊನಾ ಹಾವಳಿಯಿಂದಾದ ಎರಡು ಪ್ರಮುಖ ಕಾರಣಗಳಿಂದ ಈ ಬಾರಿ ತಾವು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ರಾಜ್ಯಸಭೆ ಸದಸ್ಯ ಡಾ. ಮಲ್ಲಿಕಾರ್ಜುನ್ ಖರ್ಗೆ ತಿಳಿಸಿದ್ದಾರೆ.

ಕೊವೀಡ್ -19 ದೇಶ ಸೇರಿದಂತ ರಾಜ್ಯದಲ್ಲಿ ವ್ಯಾಪಿಸಿದ್ದರಿಂದ ಒಂದು ಕಡೆ ಸಾರ್ವಜನಿಕರು ಕೂಲಿ ಕಾರ್ಮಿಕರು ಸೇರಿ ಹಲವರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ಮತ್ತೊಂದೆಡೆ ಸಾವಿರಾರು ಸಂಖ್ಯೆಯ ಸೋಂಕಿತರು ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ಹೀಗಾಗಿ ಈ ಬಾರಿ ತಾವು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ ಎಂದು ಅವರು ತಿಳಿಸಿದ್ದಾರೆ. 

ಪ್ರತಿವರ್ಷ ನನ್ನ ಜನ್ಮದಿನಕ್ಕೆ ಸಮಯದಲ್ಲಿ ಬಂದು ನೀವೆಲ್ಲ ಆಶೀರ್ವಾದ ನೀಡಿದ್ದೀರಿ. ಆದರೆ, ಈ‌ ಸಲ ಕೋವಿಡ್‌ನಿಂದಾಗಿ ಪರಿಸ್ಥಿತಿ ಆತಂಕಕಾರಿಯಾಗಿದೆ. ಬೆಂಗಳೂರು ನಗರದಲ್ಲಿ‌ ಜುಲೈ 22ರ ವರೆಗೆ ಲಾಕ್‌ಡೌನ್ ಜಾರಿಯಾಗಿರುವ ಕಾರಣ ಇದೇ ಜುಲೈ 21ರಂದು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ.‌ ಅಭಿಮಾನಿಗಳು ಹಾಗೂ ಪಕ್ಷದ‌ ಕಾರ್ಯಕರ್ತರು ಈ‌ ಸಲ ನನ್ನ ಹುಟ್ಟುಹಬ್ಬ ಆಚರಿಸುವ ಬದಲು ಸೋಂಕಿತರ ಕುಟುಂಬದವರಿಗೆ ನೆರವಾಗಬೇಕೆಂದು  ಖರ್ಗೆ ಅವರು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಏ.10 ಕ್ಕೆ ರಾಜ್ಯಸಭಾ ಸದಸ್ಯರಾಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕಾರ! ಸಿಎಂ ಸ್ಥಾನಕ್ಕೆ ರಾಜೀನಾಮೆ?

ಅಕ್ರಮ ಬಾಂಗ್ಲಾ ವಲಸಿಗರಿಗೆ ಹೊಸ ತಲೆನೋವು; ಗಡಿಗಳಲ್ಲಿ ಹಾವು. ಮೊಸಳೆಗಳ ನಿಯೋಜನೆ: BSF ಗಂಭೀರ ಚಿಂತನೆ!

ಇರಾನ್ ವಿರುದ್ಧದ ಯುದ್ಧ ಅಮೆರಿಕಾಗೆ ತಿರುಗುಬಾಣ!: ಇಂಧನ, ಸಾರಿಗೆ ದರ ದುಪ್ಪಟ್ಟು, ಜನಸಾಮಾನ್ಯರು ಹೈರಾಣ; ಟ್ರಂಪ್ ಗೆ ಹಿಡಿಶಾಪ!

IPL 2026: B***s Of Steel" ರವಿಶಾಸ್ತ್ರಿ ಹೇಳಿಕೆ ಕುರಿತು ನೆಟ್ಟಿಗರಿಂದ ತೀವ್ರ ಚರ್ಚೆ!

ಇರಾನ್ ನಲ್ಲಿ ಬೃಹತ್ ಸೇನಾ ಕಾರ್ಯಾಚರಣೆ: ಹಲವು ಮಿಲಿಟರಿ ನಾಯಕರ ಹತ್ಯೆ- ಡೊನಾಲ್ಡ್ ಟ್ರಂಪ್! Video

SCROLL FOR NEXT