ಯಡಿಯೂರಪ್ಪ 
ರಾಜ್ಯ

ಲಾಕ್‌ಡೌನ್ ನಿಯಮ ಪಾಲಿಸಿ: ಸಿಎಂ ಯಡಿಯೂರಪ್ಪ, ಡಿಸಿಎಂ ಮತ್ತು ಸಚಿವರ ಮನವಿ

ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳು ನಿನ್ನೆ ರಾತ್ರಿ 8 ಗಂಟೆಯಿಂದ ಮುಂದಿನ ಬುಧವಾರ ಬೆಳಗ್ಗೆ 5 ಗಂಟೆವರೆಗೆ ಸಂಪೂರ್ಣ ಲಾಕ್ ಡೌನ್ ಆಗಿರಲಿದೆ. ಅಗತ್ಯಸೇವೆಗಳು ಲಭ್ಯವಿರಲಿದ್ದು ನಾಗರಿಕರು ಆತಂಕಕ್ಕೆ ಒಳಗಾಗದೆ ನಿಯಮಗಳನ್ನು ಪಾಲಿಸಬೇಕು, ಮುನ್ನೆಚ್ಚರಿಕೆ ವಹಿಸಬೇಕು.

ಬೆಂಗಳೂರು: ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳು ನಿನ್ನೆ ರಾತ್ರಿ 8 ಗಂಟೆಯಿಂದ ಮುಂದಿನ ಬುಧವಾರ ಬೆಳಗ್ಗೆ 5 ಗಂಟೆವರೆಗೆ ಸಂಪೂರ್ಣ ಲಾಕ್ ಡೌನ್ ಆಗಿರಲಿದೆ. ಅಗತ್ಯಸೇವೆಗಳು ಲಭ್ಯವಿರಲಿದ್ದು ನಾಗರಿಕರು ಆತಂಕಕ್ಕೆ ಒಳಗಾಗದೆ ನಿಯಮಗಳನ್ನು ಪಾಲಿಸಬೇಕು, ಮುನ್ನೆಚ್ಚರಿಕೆ ವಹಿಸಬೇಕು, ಸರ್ಕಾರದೊಂದಿಗೆ ಸಹಕರಿಸಬೇಕು ಎಂದು ಈ
ಮೂಲಕ ಮನವಿ ಮಾಡುತ್ತಿದ್ದೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ವೈದ್ಯಕೀಯ ಶಿಕ್ಷ ಣ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿ, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳ ನನ್ನ ಆತ್ಮೀಯ ನಾಗರಿಕ ಬಂಧುಗಳೇ, ನಿಮ್ಮ ಹಾಗೂ ನಿಮ್ಮ ಕುಟುಂಬದ ಸುರಕ್ಷತೆಗಾಗಿ ಲಾಕ್‌ಡೌನ್ ನಿಯಮ ಪಾಲಿಸಿ, ಮನೆಯಲ್ಲೇ ಇರಿ, ಸುರಕ್ಷಿತವಾಗಿರಿ, ಕೊರೊನಾ ವಿರುದ್ಧ ನಾವೆಲ್ಲರೂ ಒಂದಾಗಿ ಹೋರಾಡೋಣ, ಸಾಂಕ್ರಾಮಿಕ ಹರಡುವುದನ್ನು ತಡೆಯೋಣ ಎಂದು ಮನವಿ ಮಾಡಿದ್ದಾರೆ. 

ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಟ್ವೀಟ್ ಮಾಡಿ, ಲಾಕ್ ಡೌನ್ ಸಂದರ್ಭದಲ್ಲಿ ಮನೆಯಲ್ಲಿಯೇ ಇರಿ. ಅಗತ್ಯ ಸಾಮಗ್ರಿಗಳು ಲಭಿಸಲು ಯಾವುದೇ ತೊಂದರೆಯಿಲ್ಲ. ಹಾಗಾಗಿ ಅನಗತ್ಯವಾಗಿ ಗುಂಪು ಸೇರುವುದು ಬೇಡ. ನೈರ್ಮಲ್ಯದ ಕ್ರಮಗಳನ್ನು ಅನುಸರಿಸಿ. ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಎಂದು ನಾಗರಿಕರಲ್ಲಿ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT