ರಾಜ್ಯ

ಕೋವಿಡ್-19 ಪರಿಸ್ಥಿತಿ ಎದುರಿಸಲು ಪೂರ್ಣಪ್ರಮಾಣದಲ್ಲಿ ಸಿದ್ಧಗೊಳ್ಳಲು ಲಾಕ್'ಡೌನ್ ಸಹಾಯಕವಾಗಲಿದೆ: ಸಚಿವ ಆರ್. ಅಶೋಕ್

Manjula VN

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಟ್ಟಹಾಸ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ವೈರಸ್ ಹರಡುವಿಕೆಯನ್ನು ಮಟ್ಟಹಾಕಲು ಬೆಂಗಳೂರಿನಲ್ಲಿ ಮಂಗಳವಾರದಿಂದ 7 ದಿನಗಳ ಕಾಲ ಲಾಕ್'ಡೌನ್ ಘೋಷಣೆ ಮಾಡಲಾಗಿದ್ದು, ಪರಿಸ್ಥಿತಿ ಎದುರಿಸಲು ಪೂರ್ಣಪ್ರಮಾಣದಲ್ಲಿ ಸಿದ್ಧಗೊಳ್ಳಲು ಲಾಕ್'ಡೌನ್ ಸಹಾಯಕವಾಗಲಿದೆ ಎಂದು ಸಚಿವ ಆರ್.ಅಶೋಕ್ ಹೇಳಿದ್ದಾರೆ. 

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಉತ್ತಮವಾಗಿ ಸಿದ್ಧಗೊಳ್ಳಲು ಹಾಗೂ ಪರಿಸ್ಥಿತಿ ನಿಯಂತ್ರಿಸಲು ಲಾಕ್'ಡೌನ್ ನಮಗೆ ಸಮಯವನ್ನು ನೀಡಲಿದೆ. ಉಸಿರಾಡಲು ನಮಗೆ ಸಮಯವನ್ನು ನೀಡಿದಂತಾಗುತ್ತದೆ ಎಂದು ಹೇಳಿದ್ದಾರೆ. 

ಪರಿಸ್ಥಿತಿ ಆಧರಿಸಿ ಲಾಕ್'ಡೌನ್ ನಿರ್ಧಾರ ಕೈಗೊಳ್ಳಲಾಗಿದೆ. ಇದೀಗ ನಾವು ಬೆಂಗಳೂರು ನಗರದಲ್ಲಿ ವಾರಗಳ ಕಾಲ ಲಾಕ್'ಡೌನ್ ಮಾಡಲು ನಿರ್ಧಾರ ಕೈಗೊಂಡಿದ್ದೇವೆ. ಮುಂದಿನ ದಿನಗಳಲ್ಲೂ ಪರಿಸ್ಥಿತಿ ಆಧರಿಸಿ ನಿರ್ಧಾರ ಕೈಗೊಳ್ಳಲಿದ್ದೇವೆಂದು ತಿಳಿಸಿದ್ದಾರೆ. 

ಆಗಸ್ಟ್ ತಿಂಗಳಿನಲ್ಲಿ ಸೋಂಕಿತರ ಸಂಖ್ಯೆ 25,000ಕ್ಕೆ ಏರಿಕೆಯಾಗಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ, ಜುಲೈ ತಿಂಗಳಿನಲ್ಲಿಯೇ ಸೋಂಕಿತರ ಸಂಖ್ಯೆ 44,000ಕ್ಕೆ ಏರಿಕೆಯಾಗಿರುವುದು ಆತಂಕ ಮತ್ತಷ್ಟು ಹೆಚ್ಚಾಗುವಂತೆ ಮಾಡಿದೆ. 

SCROLL FOR NEXT