ಸಾಂದರ್ಭಿಕ ಚಿತ್ರ 
ರಾಜ್ಯ

ಬೈಕ್‌ಗಳ ನಡುವೆ ಡಿಕ್ಕಿ: ಪೇದೆ ಸಾವು, ಎಎಸ್ ಐ ಸ್ಥಿತಿ ಗಂಭೀರ

ಬೈಕ್‌ಗಳ ನಡುವೆ ಡಿಕ್ಕಿ ಸಂಭವಿಸಿ ಪೊಲೀಸ್ ಪೇದೆ ಸಾವಿಗೀಡಾಗಿ,ಎಎಸೈ  ಗಂಭೀರವಾಗಿ ಗಾಯಗೊಂಡಿರುವ ಘಟನೆ ಮದ್ದೂರು ತಾಲೂಕಿನ ತೊರೆಶೆಟ್ಟಹಳ್ಳಿ ಗ್ರಾಮದ ಬಳಿ ನಡೆದಿದೆ.

ಮಂಡ್ಯ: ಬೈಕ್‌ಗಳ ನಡುವೆ ಡಿಕ್ಕಿ ಸಂಭವಿಸಿ ಪೊಲೀಸ್ ಪೇದೆ ಸಾವಿಗೀಡಾಗಿ,ಎಎಸೈ  ಗಂಭೀರವಾಗಿ ಗಾಯಗೊಂಡಿರುವ ಘಟನೆ ಮದ್ದೂರು ತಾಲೂಕಿನ ತೊರೆಶೆಟ್ಟಹಳ್ಳಿ ಗ್ರಾಮದ ಬಳಿ ನಡೆದಿದೆ.

ಅರುಣ್(೩೦ ವರ್ಷ) ಮೃತ ಡಿಎಆರ್ ಪೇದೆಯಾಗಿದ್ದು ಎಎಸೈ ಬಾಳಯ್ಯ ತೀವ್ರವಾಗಿ ಗಾಯಗೊಂಡಿದ್ದಾರೆ. ತೊಪ್ಪನಹಳ್ಳಿಯ ವ್ಯಕ್ತಿಯೊಬ್ಬರ ಅಂಗರಕ್ಷಕರಾಗಿ ಕೆಲಸ ಮಾಡುತ್ತಿದ್ದ ಡಿಎಆರ್ ಪೇದೆ ಅರುಣ್ ಅವರು ಎಎಸೈ ಬಾಳಯ್ಯ ಅವರೊಟ್ಟಿಗೆ ತಮ್ಮ ಬೈಕ್‌ನಲ್ಲಿ ಇಂದು ಬೆಳಿಗ್ಗೆ ಮದ್ದೂರಿನಿಂದ ಕೆಸ್ತೂರು ಕಡೆಗೆ ಹೋಗುತ್ತಿದ್ದರು.

ಈ ವೇಳೆ ರಸ್ತೆಗೆ ಅಡ್ಡ ಬಂದ ಮತ್ತೊಂದು ಬೈಕ್ ಡಿಕ್ಕಿ ಹೊಡೆದಿದೆ,ಪರಿಣಾಮವಾಗಿ ಸ್ಥಳದಲ್ಲೇ ಗನ್ ಮ್ಯಾನ್ ಅರುಣ್ ಸಾವಿಗೀಡಾದರೆ, ಗಾಯಗೊಂಡ ಎಎಸೈ ಬಾಳಯ್ಯ ಅವರನ್ನು ಮದ್ದೂರು ಪಟ್ಟಣದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕೆಸ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ: ನಾಗಯ್ಯ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

5 ರಾಜ್ಯಗಳಿಗೆ ರಾಜ್ಯಪಾಲರ ನೇಮಕ; ಇವರೇ ಕರ್ನಾಟಕದ ನೂತನ ರಾಜ್ಯಪಾಲರು...

ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಕೋರ್ಟ್ ಮೆಟ್ಟಿಲೇರಿದ ಮಾಜಿ ಮುಖ್ಯಮಂತ್ರಿ!

ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಂದು ವಿಚ್ಛೇದನ: 7 ವರ್ಷದ ದಾಂಪತ್ಯಕ್ಕೆ ಅಂತ್ಯವಾಡಿದ ಕನ್ನಡದ ಕಿರುತೆರೆ ನಟಿ!

CM ಡಿಕೆಶಿ​​ ಕುರ್ತಾ ಹಿಡಿದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ವಿಡಿಯೋ ವೈರಲ್; ಬಂಡೆಗೆ ಸಿಕ್ಕ ಮರ್ಯಾದೆ! ಫುಲ್‌ ಅನ್‌ ರೆಸ್ಪೆಕ್ಟು!

ಕರ್ನಾಟಕ ಸೇರಿ 5 ರಾಜ್ಯಗಳಿಗೆ 2 ದಿನಗಳಲ್ಲಿ ಭಾರೀ ಮಳೆ: IMD ಎಚ್ಚರಿಕೆ