ಡಾ. ಕೆ. ಸುಧಾಕರ್ 
ರಾಜ್ಯ

ರಾಜ್ಯದಲ್ಲಿ ಈವರೆಗೂ 9.25 ಲಕ್ಷಕ್ಕೂ ಹೆಚ್ಚು ಪರೀಕ್ಷೆ; ವಿಕ್ಟೋರಿಯಾ ಆಸ್ಪತ್ರೆ ಇನ್ನೊಂದು ವಿಶೇಷ ಮೈಲಿಗಲ್ಲು: ಸುಧಾಕರ್

ವಿಶ್ವಸಂಸ್ಥೆ  ಪ್ರತಿ ದಿನ ಪ್ರತಿ ದಶಲಕ್ಷ ಜನಸಂಖ್ಯೆಗೆ ಕನಿಷ್ಠ 140 ಟೆಸ್ಟ್ ಮಾಡಬೇಕೆಂದು ಶಿಫಾರಸ್ಸು ಮಾಡಿದೆ. ಕರ್ನಾಟಕ 297 ಟೆಸ್ಟ್ ಮಾಡುವ ಮೂಲಕ ಈ ಗುರಿ ತಲುಪಿರುವ ಭಾರತದ ಟಾಪ್ 10 ರಾಜ್ಯಗಳ ಪೈಕಿ ಸ್ಥಾನ  ಪಡೆದಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ಬೆಂಗಳೂರು: ವಿಶ್ವಸಂಸ್ಥೆ  ಪ್ರತಿ ದಿನ ಪ್ರತಿ ದಶಲಕ್ಷ ಜನಸಂಖ್ಯೆಗೆ ಕನಿಷ್ಠ 140 ಟೆಸ್ಟ್ ಮಾಡಬೇಕೆಂದು ಶಿಫಾರಸ್ಸು ಮಾಡಿದೆ. ಕರ್ನಾಟಕ 297 ಟೆಸ್ಟ್ ಮಾಡುವ ಮೂಲಕ ಈ ಗುರಿ ತಲುಪಿರುವ ಭಾರತದ ಟಾಪ್ 10 ರಾಜ್ಯಗಳ ಪೈಕಿ ಸ್ಥಾನ  ಪಡೆದಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಈವರೆಗೂ 9.25 ಲಕ್ಷಕ್ಕೂ ಹೆಚ್ಚು ಪರೀಕ್ಷೆ ನಡೆಸಲಾಗಿದ್ದು, ಅವೆಲ್ಲವೂ ನಿಖರ ವರದಿ ನೀಡುವ ಆರ್ ಟಿ- ಪಿಸಿಆರ್ ಟೆಸ್ಟ್ ಆಗಿವೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಮಕ್ಕಳಿಗೆ ಸೋಂಕು ತಗುಲದಂತೆ ಎಚ್ಚರ ವಹಿಸಿ ಈವರೆಗೂ ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ಬಂದಿರುವ ಸುಮಾರು 350 ಕೋವಿಡ್ ಸೋಂಕಿತ ಗರ್ಭಿಣಿ ಮಹಿಳೆಯರಿಗೆ ವಿಕ್ಟೊರಿಯಾದಲ್ಲಿ  ಚಿಕಿತ್ಸೆ ನೀಡಲಾಗುತ್ತಿದೆ. ಕೆಲ ಪ್ರಕರಣಗಳನ್ನು ಹೊರತುಪಡಿಸಿ ಎಲ್ಲಾ ನವಜಾತ ಶಿಶುಗಳಿಗೂ ಕೋವಿಡ್ ನೆಗಟಿವ್ ಬಂದಿದ್ದು ತಾಯಂದಿರು- ಶಿಶುಗಳು ಆರೋಗ್ಯವಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಕೋವಿಡ್ ಸೋಂಕಿತರ ಚಿಕಿತ್ಸೆಯಲ್ಲಿ ತೊಡಗಿರುವ ವಿಕ್ಟೊರಿಯಾ ಆಸ್ಪತ್ರೆ ಈ ಸಂದರ್ಭದಲ್ಲಿ 100ನೇ ಕೋವಿಡ್ ಸೋಂಕಿತ ಗರ್ಭಿಣಿ ಮಹಿಳೆಗೆ ಯಶಸ್ವಿಯಾಗಿ ಹೆರಿಗೆ ಪೂರೈಸುವ ಮೂಲಕ ಇನ್ನೊಂದು ವಿಶೇಷ ಮೈಲಿಗಲ್ಲು ಸಾಧಿಸಿದೆ. ಇದಕ್ಕೆ ಶ್ರಮಿಸಿದ ವಿಕ್ಟೊರಿಯಾ ಮತ್ತು ವಾಣಿ ವಿಲಾಸ ಆಸ್ಪತ್ರೆಯ ಎಲ್ಲಾ ವೈದ್ಯರು ಮತ್ತು ಸಿಬ್ಬಂದಿಗೆ ಅಭಿನಂದಿಸುವುದಾಗಿ ಡಾ. ಸುಧಾಕರ್ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

SIR ಅಕ್ರಮಗಳ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರಾಹುಲ್ ಗಾಂಧಿ; TMC, RJD, ಮಿತ್ರಪಕ್ಷಗಳಿಂದಲೂ ಅರ್ಜಿ

Chalo Supreme Court: ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯಕಾಂತ್; ಸುಪ್ರೀಂ ಕೋರ್ಟ್‌ನತ್ತ ಇಂಡಿಯಾ ಬ್ಲಾಕ್ ಮೆರವಣಿಗೆ!

ಅತಿಯಾಗಿ ಭಯ ಹುಟ್ಟಿಸಬೇಡಿ, ನಿಮ್ಮ ಹೆದರಿಕೆಗೆ ಬಗ್ಗಲ್ಲ: ಗಾಯದ Video ಶೇರ್​ ಮಾಡಿ ಪೊಲೀಸರಿಗೆ ಆಮೀರ್ ಖಾನ್ ಸೊಸೆ ತಿರುಗೇಟು!

CJP ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನಟ ಇಮ್ರಾನ್ ಖಾನ್​ಗೆ ಬಿಗ್ ಶಾಕ್; ಗಡಿಪಾರು ಸಾಧ್ಯತೆ

ಯುವತಿ ಮೇಲೆ ಅತ್ಯಾಚಾರ ಆರೋಪ: ಹುಣಸಮಾರನಹಳ್ಳಿ ಮಠದ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ