ರಾಜ್ಯ

ಮಂಗಳೂರು: ವೃದ್ಧ ತಾಯಿಯ ಮೇಲೆ ಅಮಾನುಷ ಹಲ್ಲೆ ನಡೆಸಿದ ಮಗ, ಮೊಮ್ಮಗನ ಬಂಧನ

Lingaraj Badiger

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಸವಣಾಲು ಗ್ರಾಮದ ಹಲಸಿನಕಟ್ಟೆ ಎಂಬಲ್ಲಿ ವೃದ್ಧ ತಾಯಿ ಮೇಲೆ ಮಗ ಹಾಗೂ ಮೊಮ್ಮಕ್ಕಳು ಅಮಾನುಷವಾಗಿ ಹಲ್ಲೆ ಮಾಡಿದ ಪ್ರಕರಣ ವರದಿಯಾಗಿದೆ.

ಈ ಅಮಾನವೀಯ ಘಟನೆಯ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಪೊಲೀಸರು, ಆರೋಪಿ ಮಗ ಮತ್ತು ಮೊಮ್ಮಕ್ಕಳನ್ನು ಬಂಧಿಸಿದ್ದಾರೆ.

ಮಗ ಶ್ರೀನಿವಾಸ ಶೆಟ್ಟಿ, ಮೊಮ್ಮಗ ಪ್ರದೀಪ್ ಶೆಟ್ಟಿ‌ ಹಾಗೂ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. 
ಆರೋಪಿಗಳ ವಿರುದ್ಧ ಹಿರಿಯ ನಾಗರಿಕರ ಮೇಲಿನ ದೌರ್ಜನ್ಯ‌ ಹಾಗೂ ಹಲ್ಲೆ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.  ಎಂಬಲ್ಲಿ ನಡೆದ ವರದಿಯಾಗಿದೆ.

ಅನಾರೋಗ್ಯ ಪೀಡಿತ 70 ವರ್ಷದ ವೃದ್ಧೆಯ ಮೇಲೆ ಆಕೆಯ ಮಗ ಹಾಗೂ ಮೊಮ್ಮಗ ಅಮಾನುಷವಾಗಿ ಹಲ್ಲೆ ನಡೆಸಿದ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. 

ಈ ಬಗ್ಗೆ ಸ್ವಯಂ ಪ್ರೇರಿತರಾಗಿ ದೂರು ದಾಖಲಿಸಿಕೊಂಡ ಬೆಳ್ತಂಗಡಿ ಠಾಣಾ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.

SCROLL FOR NEXT