ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯದಲ್ಲಿ ಉಲ್ಭಣವಾಗುತ್ತಿದೆ ಕೊರೋನಾ ಪ್ರಕರಣ, ಸಿಇಟಿ ಪರೀಕ್ಷೆ ಮುಂದೂಡಿ: ವಿದ್ಯಾರ್ಥಿಗಳಿಂದ ಹೆಚ್ಚುತ್ತಿದೆ ಬೇಡಿಕೆ

ಸಿಇಟಿ ಪರೀಕ್ಷೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿರುವಾಗ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಪರೀಕ್ಷೆಯನ್ನು ಮುಂದೂಡಬೇಕೆಂಬ ಒತ್ತಾಯ ವಿದ್ಯಾರ್ಥಿಗಳು ಮತ್ತು ಪೋಷಕರಿಂದ ಹೆಚ್ಚಾಗುತ್ತಿದೆ.

ಬೆಂಗಳೂರು/ಮೈಸೂರು: ಸಿಇಟಿ ಪರೀಕ್ಷೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿರುವಾಗ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಪರೀಕ್ಷೆಯನ್ನು ಮುಂದೂಡಬೇಕೆಂಬ ಒತ್ತಾಯ ವಿದ್ಯಾರ್ಥಿಗಳು ಮತ್ತು ಪೋಷಕರಿಂದ ಹೆಚ್ಚಾಗುತ್ತಿದೆ.

ವೃತ್ತಿಪರ ಎಂಜಿನಿಯರಿಂಗ್ ಮತ್ತು ಮೆಡಿಕಲ್ ಕೋರ್ಸ್ ಗಳ ಪ್ರವೇಶಕ್ಕೆ ಸಿಇಟಿ ಪರೀಕ್ಷೆ ಈ ತಿಂಗಳ 30 ಮತ್ತು 31ರಂದು ನಿಗದಿಯಾಗಿದೆ. ಸರ್ಕಾರದ ನಿರ್ಧಾರವನ್ನು ವಿರೋಧಿಸಿ 52 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳಲ್ಲಿ #postponeKcet2020 ಹ್ಯಾಶ್ ಟಾಗ್ ಮೂಲಕ ಪ್ರತಿಭಟನೆ ನಡೆಸುತ್ತಿದ್ದಾರೆ.

ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ(ಎಐಡಿಎಸ್ಒ) ನಡೆಸಿರುವ ಸಮೀಕ್ಷೆಯಲ್ಲಿ ಶೇಕಡಾ 96.9ರಷ್ಟು ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಮುಂದೂಡುವಂತೆ ಒತ್ತಾಯಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ರಾಜ್ಯಾದ್ಯಂತ ಕೋವಿಡ್-19 ಪ್ರಕರರಣಗಳು ಹೆಚ್ಚಾಗುತ್ತಿದ್ದು ಈ ಸಮಯದಲ್ಲಿ ಪರೀಕ್ಷೆ ನಡೆಸಿದರೆ ಅದು ಅವೈಜ್ಞಾನಿಕವಾಗುತ್ತದೆ. ಸಾವಿರಾರು ಮಂದಿ ವಿದ್ಯಾರ್ಥಿಗಳನ್ನು ಅಪಾಯದಲ್ಲಿರಿಸಿದಂತಾಗುತ್ತದೆ ಎಂದು ಪೋಷಕರು, ಜನಸಾಮಾನ್ಯರು ಹೇಳುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

ಮತ ಬೇಟೆ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ

ಕೋಟಿ ಕೋಟಿ ಲೂಟಿ: ಅರಣ್ಯ ಇಲಾಖೆ ಮಾಜಿ ಅಧಿಕಾರಿಗೆ ಕೋರ್ಟ್ ಶಾಕ್; ಬರೋಬ್ಬರಿ 1.38 ಕೋಟಿ ದಂಡ, 3 ವರ್ಷ ಜೈಲು ಶಿಕ್ಷೆ..!