ಸುಧಾಕರ್ 
ರಾಜ್ಯ

ರಾತ್ರೋರಾತ್ರಿ ಕೆಸಿ ಜನರಲ್ ಆಸ್ಪತ್ರೆಗೆ ಸುಧಾಕರ್ ಭೇಟಿ: ಅವ್ಯವಸ್ಥೆ ಕಂಡು ವೈದ್ಯರ ತರಾಟೆ

ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ಮಲ್ಲೇಶ್ವರಂನ ಕೆ.ಸಿ. ಜನರಲ್ ಆಸ್ಪತ್ರೆಗೆ  ಶುಕ್ರವಾರ ರಾತ್ರಿ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ಮಲ್ಲೇಶ್ವರಂನ ಕೆ.ಸಿ. ಜನರಲ್ ಆಸ್ಪತ್ರೆಗೆ  ಶುಕ್ರವಾರ ರಾತ್ರಿ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಳಿಕ ಆಸ್ಪತ್ರೆಯ ಅವ್ಯವಸ್ಥೆ ಕಂಡು ಅಲ್ಲಿ ಕರ್ತವ್ಯದಲ್ಲಿದ್ದ ವೈದ್ಯರನ್ನು ಸಚಿವರು ತರಾಟೆ ತೆಗೆದುಕೊಂಡಿದ್ದಾರೆ. ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಸಚಿವರು, ವೈದ್ಯರು, ಸಿಬ್ಬಂದಿಗಳ ಹಾಜರಾತಿ ಪರಿಶೀಲನೆ, ಚಿಕಿತ್ಸೆ, ಶುಚಿತ್ವ ಹಾಗೂ ಮಾರ್ಗಸೂಚಿ ಪಾಲನೆ ಕುರಿತು ಪರಿಶೀಲನೆ ನಡೆಸಿದರು. 

ಕೋವಿಡ್ ಕೆಲಸದಲ್ಲಿ ನಿರತರಾದವರಿಗೆ ನೀಡಿರುವ ಉಪಕರಣಗಳ ಪರಿಶೀಲನೆ ನಡೆಸಿದರು. ಪಿಪಿಇ ಕಿಟ್, ಆಸ್ಪತ್ರೆಯಲ್ಲಿ ಇರುವ ದಾಸ್ತಾನು ವಿವರಗಳನ್ನೂ ಸಹ ಸಚಿವ ಸುಧಾಕರ್ ಇದೇ ಸಂದರ್ಭದಲ್ಲಿ ಪರಿಶೀಲನೆ ನಡೆಸಿದರು. ಗುರುವಾರ ಆಸ್ಪತ್ರೆಯಲ್ಲಿ ಆತ್ಮಹತ್ಯೆ ಘಟನೆ ನಡೆದ ಕುರಿತು ಸಚಿವರು ಸಂಬಂಧಪಟ್ಟವರ ಬಳಿಯಿಂದ ಮಾಹಿತಿ ಪಡೆದರು.

35 ಮಂದಿ ಆಸ್ಪತ್ರೆ ಸಿಬ್ಬಂದಿಗೆ ಕೋವಿಡ್ 19 ಪಾಸಿಟಿವ್ ಆಗಿರುವುದಕ್ಕೆ ಅಧೀಕ್ಷಕರನ್ನು ಸಚಿವರು ತರಾಟೆಗೆ ತೆಗೆದುಕೊಂಡರು. ಸಿಬ್ಬಂದಿಗೆ ರಕ್ಷಣೆ ಕೊಡಲು ವಿಫಲರಾಗಿರುವ ನೀವು ರೋಗಿಗಳನ್ನು ಹೇಗೆ ನೋಡಿಕೊಳ್ಳುತ್ತಿದ್ದೀರಿ ಎಂದು ಸಚಿವರು ಪ್ರಶ್ನಿಸಿದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

ಬಿಜೆಪಿ ನಿಯೋಗದಿಂದ ರಾಜ್ಯಪಾಲರ ಭೇಟಿ: 'ದ್ವೇಷ ಭಾಷಣ ತಡೆ' ಮಸೂದೆಗೆ ಅಂಕಿತ ಹಾಕದಂತೆ ಮನವಿ!

ಮ್ಯೂಚುವಲ್ ಫಂಡ್‌ಗಳ ಈಕ್ವಿಟಿ ಖರೀದಿ ಶೇ. 13% ರಷ್ಟು ಏರಿಕೆ!

SCROLL FOR NEXT