ಅಶ್ವತ್ ನಾರಾಯಣ 
ರಾಜ್ಯ

ಕಂಟೈನರ್ ನಲ್ಲಿ ಕೋವಿಡ್ ಐಸಿಯು; ಬೆಂಗಳೂರಿನಲ್ಲಿ ಮೊದಲ ಪ್ರಯೋಗ: ಡಿಸಿಎಂ ಅಶ್ವಥ್ ನಾರಾಯಣ್

ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳಿಗೆ ಹಾಸಿಗೆಗಳ ಕೊರತೆ ಆಗದಂತೆ ಸರಕಾರ ಸಾಕಷ್ಟು ಮುನ್ನೆಚ್ಚರಿಕೆ ವಹಿಸಿರುವ ಬೆನ್ನಲ್ಲಿಯೇ, ಖಾಸಗಿ ಕಂಪನಿಯೊಂದು ಎಲ್ಲಿಗೆ ಬೇಕಾದರೂ ಸಾಗಿಸಿ ಬಳಸಬಹುದಾದ 'ಮಾಡ್ಯೂಲರ್ ಐಸಿಯು'ಗಳನ್ನು ಅಭಿವೃದ್ಧಿಪಡಿಸಿದೆ.ಇವಗಳ ನ್ನು 'ಮೊಬೈಲ್ ಐಸಿಯು' ಗಳೆಂದೂ ಕರೆಯಬಹುದಾಗಿದೆ.

ಬೆಂಗಳೂರು: ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳಿಗೆ ಹಾಸಿಗೆಗಳ ಕೊರತೆ ಆಗದಂತೆ ಸರಕಾರ ಸಾಕಷ್ಟು ಮುನ್ನೆಚ್ಚರಿಕೆ ವಹಿಸಿರುವ ಬೆನ್ನಲ್ಲಿಯೇ, ಖಾಸಗಿ ಕಂಪನಿಯೊಂದು ಎಲ್ಲಿಗೆ ಬೇಕಾದರೂ ಸಾಗಿಸಿ ಬಳಸಬಹುದಾದ 'ಮಾಡ್ಯೂಲರ್ ಐಸಿಯು'ಗಳನ್ನು ಅಭಿವೃದ್ಧಿಪಡಿಸಿದೆ.ಇವಗಳ ನ್ನು 'ಮೊಬೈಲ್ ಐಸಿಯು' ಗಳೆಂದೂ ಕರೆಯಬಹುದಾಗಿದೆ.

ಸಾಮಾನ್ಯವಾಗಿ ಹಡಗುಗಳಲ್ಲಿ ಸರಕು ಸಾಗಣೆಗೆ ಬಳಸಲಾಗುವ ಬೃಹತ್ ಗಾತ್ರದ ಕಂಟೈನೆರು ಗಳಲ್ಲಿ ಈ ಐಸಿಯುಗಳನ್ನು ಅಭಿವೃದ್ಧಿಪಡಿಸಿದ್ದು, ಬೆಂಗಳೂರಿನಲ್ಲಿಂದು ನಗರದ ಕೋವಿಡ್ ಕೇರ್ ಕೇಂದ್ರಗಳ ಉಸ್ತುವಾರಿಯೂ ಆಗಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥನಾರಾಯಣ ಇವುಗಳನ್ನು ಪರಿಶೀಲನೆ ಮಾಡಿದರು.

ಶಸ್ತ್ರಚಿಕಿತ್ಸಾ ಘಟಕ ಹಾಗೂ ಕ್ಲೀನ್ ರೂಮುಗಳನ್ನು ಅಭಿವೃದ್ಧಿಪಡಿಸುವಲ್ಲಿ ಹೆಸರಾಗಿರುವ ಬೆಂಗಳೂರು ಮೂಲದ ರಿನ್ಯಾಕ್ ಎಂಬ ಕಂಪನಿ ಇವುಗಳನ್ನು ಅಭಿವೃದ್ಧಿಪಡಿಸಿದ್ದು, ಈ ಬಗ್ಗೆ ಕಂಪನಿಯ ತಜ್ಞರಿಂದ ಉಪ ಮುಖ್ಯಮಂತ್ರಿ ಮಾಹಿತಿ ಪಡೆದರಲ್ಲದೆ, ಕಂಟೈನರುಗಳಲ್ಲಿನ ಐಸಿಯುಗಳನ್ನು ಕೂಲಂಕುಶವಾಗಿ ಪರಿಶೀಲನೆ ಮಾಡಿದರು.

ಸರಕು ಸಾಗಣೆ ಮಾಡುವ ಕಂಟೈನರುಗಳಲ್ಲಿ ಐಸಿಯು ಮಾಡಬಹುದು ಎಂಬ ಆಲೋಚನೆಯೇ ವಿನೂತನವಾಗಿದೆ. ದೇಶದಲ್ಲೇ ಮೊತ್ತಮೊದಲ ಬಾರಿಗೆ ಇಂಥ ತುರ್ತು ಚಿಕಿತ್ಸಾ ಘಟಕಗಳನ್ನು ನಮ್ಮ ರಾಜ್ಯದಲ್ಲಿ ಸಿದ್ಧಪಡಿಸಲಾಗಿದೆ. ನಮ್ಮ ಸಂಶೋಧಕರು, ತಜ್ಞರ ಸೃಜನಶೀಲತೆಗೆ ಇದೊಂದು ಉತ್ತಮ ಉದಾಹರಣೆ. ಪ್ರಸಕ್ತ ಕಾಲದ ಅಗತ್ಯಕ್ಕೆ ತಕ್ಕಂತೆ ಇವುಗಳನ್ನು ಅತ್ಯಾಧುನಿಕವಾಗಿ ರೂಪಿಸಲಾಗಿದೆ. ಗುಣಮಟ್ಟಕ್ಕೆ ಹೆಚ್ಚು ಒತ್ತು ನೀಡಲಾಗಿದೆ ಹಾಗೂ ಬಳಸಲಾಗಿರುವ ಎಲ್ಲ ಉಪಕರಣಗಳು ಉತ್ತಮವಾಗಿವೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು. 

ಪ್ರಾಯೋಗಿಕವಾಗಿ ಮೊದಲು ಮಲ್ಲೇಶ್ವರದ ಕೆ.ಸಿ. ಜನರಲ್ ಆಸ್ಪತ್ರೆಗೆ ಹತ್ತು ಕಂಟೈನರುಗಳನ್ನು ಒದಗಿಸಲಾಗುವುದು.ಅಲ್ಲಿನ ವೈದ್ಯರೇ ಇವುಗಳಲ್ಲಿ ದಾಖ ಲಾಗುವ ರೋಗಿಗಳಿಗೆ ಚಿಕಿತ್ಸೆ ನೀಡುವರು. ಪ್ರತಿ ಕಂಟೈನರಲ್ಕಿ 5 ಹಾಸಿಗೆಗಳು ಇರುತ್ತವೆ. ರಿನ್ಯಾಕ್ ಕಂಪನಿ ತಮ್ಮದೇ ವೆಚ್ಚದಲ್ಲಿ ಎಕ್ಲಕ್ಲೂಸೀವ್ ಆಗಿ ನಮ ಗಾಗಿಯೇ ಇವುಗಳನ್ನು ತಯಾರಿಸಿಕೊಟ್ಟಿದೆ. ಕೋವಿಡ್ ನಂತರವೂ ಇವುಗಳನ್ನು ನಮ್ಮ ಅಗತ್ಯಕ್ಕೆ ತಕ್ಕಂತೆ ಬಳಸಬಹುದು. ತುರ್ತು ಸಂದರ್ಭಗಳು,ಅದರಲ್ಲೂ ನೈಸರ್ಗಿಕ ವಿಕೋಪದಂಥ ದುರಂತಗಳು ಎದುರಾದಾಗ ಇಂಥ ಐಸಿಯುಗಳು ಹೆಚ್ಚು ಪರಿಣಾಮಕಾರಿ. ಕೇವಲ 10 ರಿಂದ 15 ದಿನಗಳಲ್ಲಿ ಇಷ್ಟು ಬೆಡ್ ಗಳನ್ನು ಸಿದ್ಧಪಡಿಸಲಾಗಿದೆ ಎಂದು ಅವರು ಹೇಳಿದರು.

ಜಾಗತಿಕ ಗುಣಮಟ್ಟವನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಸಿದ್ಧಪಡಿಸಲಾಗಿದೆ. ಆಮ್ಲಜನಕ ವ್ಯವಸ್ಥೆ ಇರುತ್ತದೆ. ಹವಾನಿಯಂತ್ರಿತ ವ್ಯವಸ್ಥೆ ಮಾಡಲಾಗಿದೆ. ಕ್ಯಾಮೆರಾ ಕೂಡ ಇದ್ದು, ಆನ್ಲೈನ್ ಚಿಕಿತ್ಸೆ ನೀಡಲು ಬೇಕಾದ ಎಲ್ಲ ಪರಿಕರಗಳನ್ನು ಅಳವಡಿಸಲಾಗಿದೆ. ಪ್ರತಿ ಕಂಟೈನರ್ಗೆ 5 ಬೆಡ್ ಇದ್ದು, ಅದಕ್ಕೆ ಇನ್ನೊಂದು ಕಂಟೈನರ್ ಸೇರಿದರೆ 10 ಬೆಡ್'ಗಳಾಗುತ್ತವೆ. ಆಗ ಅದನ್ನು ಪ್ರತ್ಯೇಕ ನರ್ಸಿಂಗ್ ಹಾಗೂ ಮಾನಿಟರಿಂಗ್ ಸ್ಟೇಷನ್ ಎಂದು ಪರಿಗಣಿಸಿ ಚಿಕಿತ್ಸೆ ನೀಡುವುದು ಸುಲಭವಾಗುತ್ತದೆ. ಅದು ಪ್ರತ್ಯೇಕವಾಗಿರುತ್ತದೆ. ಎಲ್ಲಿಗೆ ಬೇಕಾದರೂ ಈ ಐಸಿಯುಗಳನ್ನು ಸುಲಭವಾಗಿ ಸಾಗಿಸಿ ಇಡಬಹುದು. ಆಯಾ ಆಸ್ಪತ್ರೆ ಗಳ ವೈದ್ಯರೇ ಇವುಗಳಲ್ಲಿ ದಾಖಲಾಗಿರುವ ರೋಗಿಗಳಿಗೂ ಚಿಕಿತ್ಸೆ ನೀಡಬಹುದು ಎಂದು ರಿನ್ಯಾಕ್ ಕಂಪನಿ ಅಧಿಕಾರಿಗಳು ಮಾಹಿತಿ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

ಮಗು ಆಡಿಸುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ; ರಕ್ಷಣೆಗೆ ಧಾವಿಸಿದ ಮಹಿಳೆ, Video ವೈರಲ್

'ಭಾರತೀಯನ ಮದುವೆಯಾದಾಕ್ಷಣ Indian ಆಗಲ್ಲ, ಬಾಂಗ್ಲಾದೇಶಿ ಪತ್ನಿಗೆ ಭಾರತ ಪ್ರವೇಶ ನಿರಾಕರಣೆ ಸರಿ ಇದೆ': ಹೈಕೋರ್ಟ್

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!