ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಜನನ ಮರಣ ಪ್ರಮಾಣ ಪತ್ರ ವಿತರಣೆ ಅಧಿಕಾರ ಇನ್ನು ಮುಂದೆ ಪಿಡಿಒಗೆ

ಜನನ ಮರಣ ಪ್ರಮಾಣ ಪತ್ರ ನೀಡುವ ಅಧಿಕಾರವನ್ನು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ(ಪಿಡಿಒ)ಗಳಿಗೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ವಿಧಾನಸೌಧ
Lingaraj Badiger
Updated On : 18 Jul 2020, 3:21 pm

ಬೆಂಗಳೂರು: ಜನನ ಮರಣ ಪ್ರಮಾಣ ಪತ್ರ ನೀಡುವ ಅಧಿಕಾರವನ್ನು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ(ಪಿಡಿಒ)ಗಳಿಗೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಮೊದಲು ಜನನ ಮರಣ ಪ್ರಮಾಣ ಪತ್ರ ವಿತರಣಾ ಹಕ್ಕು ಕಂದಾಯ ಇಲಾಖೆ ವ್ಯಾಪ್ತಿಯಲ್ಲಿತ್ತು. ಇದೀಗ ಗ್ರಾಮಪಂಚಾಯತ್ ಗಳಿಗೆ ಸರ್ಕಾರ ನೀಡಿ ಆದೇಶಿಸಿದೆ.

ಯೋಜನಾ ಮತ್ತು ಸಾಂಖ್ಯಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು ಜನನ ಮರಣ ಪ್ರಮಾಣ ಪತ್ರ ವಿತರಣೆಯನ್ನು ಗ್ರಾಮಪಂಚಾಯತ್ ಗಳಿಗೆ ನೀಡಬಹುದು ಎಂದು ಸೂಚಿಸಿದ್ದರು.

Advertisement

Advertisement

ಪಂಚಾಯುತ್ ಅಭಿವೃದ್ಧಿ ಅಧಿಕಾರಿಗಳನ್ನು ಜನನ ಮರಣ ಪ್ರಮಾಣ ಪತ್ರಗಳ ವಿತರಣಾಧಿಕಾರಿಗಳನ್ನಾಗಿ ನೇಮಿಸಲು ಅನುಮತಿ ನೀಡಿರುವುದರಿಂದ, ರಾಷ್ಟ್ರೀಯ ಜನನ ಮರಣ ಕಾಯ್ದೆ 1969ರ ಆಧ್ಯಾಯ 5 ರ ಪ್ರಕರಣ 27 ರಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು ಇ - ತಂತ್ರಾಂಶದಲ್ಲಿ ತಮ್ಮ ಡಿಜಿಟಲ್ ಸಹಿಯ ಮುಖಾಂತರ ವ್ಯಕ್ತಿಗಳ ಜನನ ಮತ್ತು ಮರಣ ಪ್ರಮಾಣ ಪತ್ರ ವಿತರಣಾಧಿಕಾರಿಗಳನ್ನಾಗಿ ತಕ್ಷಣದಿಂದಜಾರಿಗೆ ಬರುವಂತೆ ಸರ್ಕಾರ ನೇಮಿಸಿದೆ. 

ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಬಾಪೂಜಿ ಸೇವಾ ಕೇಂದ್ರಗಳ ಮುಖಾಂತರ ಈ ಸೇವೆಯನ್ನು ನೀಡಬೇಕು. ಸರ್ಕಾರ ಆಗಿಂದಾಗ್ಗೆ ನಿಗದಿಪಡಿಸುವ ದರಗಳನ್ವಯ ಸೇವಾ ಶುಲ್ಕವನ್ನು ಸಂಗ್ರಹಿಸಿ ನೀಡುವಂತೆ ಆದೇಶದಲ್ಲಿ ಹೇಳಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments