ಶರತ್ ಬಚ್ಚೇಗೌಡ 
ರಾಜ್ಯ

ಕೋವಿಡ್ 19: ಶಾಸಕ ಶರತ್ ಬಚ್ಚೇಗೌಡ ದಂಪತಿ ಗುಣಮುಖ 

ಶಾಸಕ ಶರತ್ ಬಚ್ಚೇಗೌಡ ಹಾಗೂ ಅವರ ಪತ್ನಿ ಕೊರೋನಾವೈರಸ್ ಸೋಂಕಿನಿಂದ ಗುಣಮುಖರಾಗಿದ್ದಾರೆ. ಈ ಸಂಬಂಧ ಹೊಸಕೋಟೆ ಶಾಸಕ ತಮ್ಮ ಅಧಿಕೃತ ಟ್ವಿಟರ್ ಖಾತೆಯ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

ಬೆಂಗಳೂರು: ಶಾಸಕ ಶರತ್ ಬಚ್ಚೇಗೌಡ ಹಾಗೂ ಅವರ ಪತ್ನಿ ಕೊರೋನಾವೈರಸ್ ಸೋಂಕಿನಿಂದ ಗುಣಮುಖರಾಗಿದ್ದಾರೆ. ಈ ಸಂಬಂಧ ಹೊಸಕೋಟೆ ಶಾಸಕ ತಮ್ಮ ಅಧಿಕೃತ ಟ್ವಿಟರ್ ಖಾತೆಯ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

"ನಾನು ಹಾಗೂ ನನ್ನ ಧರ್ಮಪತ್ನಿ ಕೊರೋನಾದಿಂದ ಸಂಪೂರ್ಣವಾಗಿ ಗುಣಮುಖ ಆಗಿದ್ದೇವೆ. ಇಂದು ಕೊರೋನಾ ಪರೀಕ್ಷೆಯ ಫಲಿತಾಂಶದಲ್ಲಿ #ನೆಗಟಿವ್ ಎಂದು ಬಂದಿದೆ.

"ನಾವು ಬೇಗ ಗುಣಮುಖರಾಗಲೆಂದು ನೀವೆಲ್ಲರೂ ಮಾಡಿದ ಆಶೀರ್ವಾದಕ್ಕೆ ನಾವು ಮತ್ತು ನಮ್ಮ ಕುಟುಂಬ ಸದಾ ಚಿರಋಣಿಯಾಗಿರುತ್ತೇವೆ." ಶಾಸಕ ಶರತ್ ಬಚ್ಚೇಗೌಡ ಟ್ವೀಟ್ ಮಾಡಿದ್ದಾರೆ.

ಒಂದು ವಾರದ ಹಿಂದೆ ಶರತ್ ಬಚ್ಚೇಗೌಡ ಹಾಗೂ ಅವರ ಪತ್ನಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿತ್ತು, ಆದರೆ ಈಗ ಎರಡನೇ ಬಾರಿ ನಡೆಸಲಾಗಿರುವ ಪರೀಕ್ಷೆಗಳಲ್ಲಿ ದಂಪತಿಗಳ ಕೊರೋನಾ ವರದಿ ನೆಗೆಟಿವ್ ಬಂದಿದೆ. 

ಇಷ್ಟೇ ಅಲ್ಲದೆ ಕೋವಿಡ್ ಪೀಡಿತರನ್ನು ಅಪರಾಧಿಗಳಂತೆ ಕಾಣಬೇಡಿ, ಅವರ ಸಾಮಾಜಿಕ ನಿಂದನೆ ಮಾಡವೇಡಿ, ಇದೊಂದು ಯುದ್ಧವಾಗಿದ್ದು ಇದರ ವಿರುದ್ಧ ಎಲ್ಲರೂ ಒಗ್ಗಟ್ಟಿನಿಂದ ಹೋರಾಡೋಣ ಎಂದು ಶಾಸಕ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel