ಬೆಂಗಳೂರು: ಜು.20 ರ ನಂತರವೂ ಬೆಂಗಳೂರಿನಲ್ಲಿ ಲಾಕ್ ಡೌನ್ ಮುಂದುವರೆಯಲಿದೆಯೇ ಎಂಬ ಪ್ರಶ್ನೆಗೆ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.
9 ದಿನಗಳ ಲಾಕ್ ಡೌನ್ ಜು.21 ರ ಬೆಳಿಗ್ಗೆ 5 ಗಂಟೆಗೆ ಮುಕ್ತಾಯಗೊಳ್ಳಲಿದೆ. ಅದೇ ದಿನದಂದು ಬೆಳಿಗ್ಗೆಯಿಂದ ಕಂಟೈನ್ಮೆಂಟ್ ಇಲ್ಲದ ಏರಿಯಾಗಳಲ್ಲಿ ಎಂದಿನಂತೆ ಕಾರ್ಯಾಚರಣೆಗೆ ಅನುವು ಮಾಡಿಕೊಡಲಾಗುವುದು ಲಾಕ್ ಡೌನ್ ಮುಂದುವರಿಕೆ ಮಾಡುವುದಿಲ್ಲ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ.
"ಕೊರೋನಾ ತಡೆಗೆ ಲಾಕ್ ಡೌನ್ ಪರಿಹಾರವಲ್ಲ, ಆದ್ದರಿಂದ ಜು.21 ರ ನಂತರ ಯಾವುದೇ ಕಾರಣಕ್ಕೂ ಲಾಕ್ ಡೌನ್ ಮುಂದುವರಿಕೆ ಇಲ್ಲ ಎಂದು ಸಿಎಂ ಯಡಿಯೂರಪ್ಪ ಸ್ಪಷ್ಟವಾಗಿ ತಿಳಿಸಿರುವುದಾಗಿ ಮಂಜುನಾಥ್ ಪ್ರಸಾದ್ ಮಾಹಿತಿ ನೀಡಿದ್ದಾರೆ.
ಕೊರೋನಾ ಪ್ರಕರಣಗಳು ಹೆಚ್ಚುತ್ತಿದ್ದ ಹಿನ್ನೆಲೆಯಲ್ಲಿ ಜುಲೈ 14 ರಂದು ರಾತ್ರಿ 8 ಗಂಟೆಯಿಂದ 9 ಗಂಟೆಯಿಂದ ಲಾಕ್ ಡೌನ್ ನ್ನು ಘೋಷಿಸಲಾಗಿತ್ತು.