ಬೆಂಗಳೂರಿನಲ್ಲಿ ಮತ್ತೆ ಲಾಕ್ ಡೌನ್ ಇಲ್ಲ: ನೂತನ ಆಯುಕ್ತ ಮಂಜುನಾಥ್ ಪ್ರಸಾದ್ ಸ್ಪಷ್ಟನೆ
ಬೆಂಗಳೂರಿನಲ್ಲಿ ಮತ್ತೆ ಲಾಕ್ಡೌನ್ ಮುಂದುವರಿಯುವುದಿಲ್ಲ ಎಂದು ಬಿಬಿಎಂಪಿ ನೂತನ ಆಯುಕ್ತ ಮಂಜುನಾಥ್ ಪ್ರಸಾದ್ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೆ ಲಾಕ್ಡೌನ್ ಮುಂದುವರಿಯುವುದಿಲ್ಲ ಎಂದು ಬಿಬಿಎಂಪಿ ನೂತನ ಆಯುಕ್ತ ಮಂಜುನಾಥ್ ಪ್ರಸಾದ್ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಂಗಳೂರಿನಲ್ಲಿ ಲಾಕ್ಡೌನ್ ಮುಂದುವರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆದ್ದರಿಂದ ಈಗ ಜಾರಿಯಲ್ಲಿರುವ ಲಾಕ್ಡೌನ್ ಮುಗಿದ ಬಳಿಕ ನಗರದಲ್ಲಿ ಲಾಕ್ಡೌನ್ ಇರುವುದಿಲ್ಲ. ಲಾಕ್ಡೌನ್ ಜಾರಿ ಮಾಡುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದರು.
ಈ ಹಿಂದಿನ ಆಯುಕ್ತರಾಗಿದ್ದ ಅನಿಲ್ ಕುಮಾರ್ ಅವರು ಕೊರೋನಾ ಸೋಂಕು ಹರಡುವುದನ್ನು ತಡೆಯಲು ಲಾಕ್ಡೌನ್ ಅನಿವಾರ್ಯ ಎಂದು ಹೇಳಿದ್ದರು. ಅವರನ್ನು ನಿನ್ನೆಯಷ್ಟೇ ಸರ್ಕಾರ ವರ್ಗಾವಣೆ ಮಾಡಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.