ರಾಜ್ಯದಲ್ಲಿ ಕೊರೋನಾ ಆರ್ಭಟ: ಇಂದು ಬೆಂಗಳೂರಿನಲ್ಲಿ 1,452, ಒಟ್ಟು 3,648 ಮಂದಿಗೆ ಸೋಂಕು, 72 ಬಲಿ!
ಮಹಾಮಾರಿ ಕೊರೋನಾ ಇಂದು ಸಹ ರಾಜ್ಯದಲ್ಲಿ ಅಬ್ಬರಿಸಿದ್ದು ಬರೋಬ್ಬರಿ 3,648 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 67,420ಕ್ಕೆ ಏರಿಕೆಯಾಗಿದೆ.
ಬೆಂಗಳೂರು: ಮಹಾಮಾರಿ ಕೊರೋನಾ ಇಂದು ಸಹ ರಾಜ್ಯದಲ್ಲಿ ಅಬ್ಬರಿಸಿದ್ದು ಬರೋಬ್ಬರಿ 3,648 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 67,420ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಭಾನುವಾರ ಒಂದೇ ದಿನ ಬರೋಬ್ಬರಿ 72 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1,404ಕ್ಕೆ ಏರಿಕೆಯಾಗಿದೆ.
ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 31 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 72 ಮಂದಿ ಸಾವನ್ನಪ್ಪಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಅವರು
ತಿಳಿಸಿದ್ದಾರೆ.
ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 1,452 ಪ್ರಕರಣಗಳು ವರದಿಯಾಗಿದ್ದು, ರಾಜ್ಯದಲ್ಲಿ ಒಟ್ಟು 3,648 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 67,420ಕ್ಕೇರಿಕೆಯಾಗಿದೆ.
ಸೋಮವಾರ 730 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇಲ್ಲಿಯವರೆಗೆ 23795 ಚೇತರಿಸಿಕೊಂಡಿದ್ದಾರೆ. ಸದ್ಯ ರಾಜ್ಯದಲ್ಲಿ 42,216 ಸಕ್ರಿಯ ಪ್ರಕರಣಗಳಿವೆ.