ರಾಜ್ಯ

ಕೊರೊನಾ: ನೆರೆಮನೆಯವರ ಅವಮಾನಕ್ಕೆ ನೊಂದು ವ್ಯಕ್ತಿ ಆತ್ಮಹತ್ಯೆ

ಕೊರೊನಾ ಸೋಂಕು ತಗುಲಿದ ಕಾರಣಕ್ಕೆ ಅಕ್ಕಪಕ್ಕದ ಮನೆಯವರು ಅವಮಾನಿಸಿದರು ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡು ದಾರುಣ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.

ಬೆಂಗಳೂರು: ಕೊರೊನಾ ಭೀತಿ ಹಾಗೂ ಅವಮಾನದಿಂದಾಗಿ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. 

ಕೊರೊನಾ ಸೋಂಕು ತಗುಲಿದ ಕಾರಣಕ್ಕೆ ಅಕ್ಕಪಕ್ಕದ ಮನೆಯವರು ಅವಮಾನಿಸಿದರು ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡು ದಾರುಣ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.

ಹೆಂಡತಿ ಹಾಗೂ ಮಗನಿಗೆ ಕೊರೊನಾ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಅಕ್ಕಪಕ್ಕದ ಮನೆಯವರು ಅವಮಾನಿಸಿದ್ದರಿಂದ ನೊಂದ ದೊಡ್ಡಬಳ್ಳಾಪುರದ ನಾಗರಾಜು (56) ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹೆಸರುಘಟ್ಟ ಕೆರೆಯ ಬಳಿ ಮರವೊಂದಕ್ಕೆ ನಾಗರಾಜು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮೃತ ನಾಗರಾಜು ಪುತ್ರನಿಗೆ ಮೊದಲು ಸೋಂಕು ತಗುಲಿತ್ತು. ನಂತರ ಪತ್ನಿ ಕೊರೊನಾ ಪರೀಕ್ಷೆ ಮಾಡಿಸಿದಾಗ, ಆಕೆಗೂ ಸೋಂಕು ಇರುವುದು ಪತ್ತೆಯಾಗಿದ್ದರಿಂದ ಅವರು ವಾಸವಿದ್ದ ಪ್ರದೇಶವನ್ನು ಸೀಲ್‍ಡೌನ್ ಮಾಡಲಾಗಿತ್ತು. ಸೀಲ್‍ಡೌನ್ ವೇಳೆ ಅಕ್ಕಪಕ್ಕದ ಮನೆಯವರು ಮೃತ ನಾಗರಾಜ್ ಕುಟುಂಬಸ್ಥರನ್ನು ಅವಮಾನಿಸಿದ್ದರು. ನಿಮ್ಮಿಂದ ನಮಗೆಲ್ಲ ಸಮಸ್ಯೆ ಆಗುತ್ತಿದೆ. ಎಲ್ಲಾದರೂ ದೂರ ಹೋಗಿ ಎಂದು ಜಗಳವಾಡಿದ್ದರು ಎನ್ನಲಾಗಿದೆ.

ಇದರಿಂದ ತೀವ್ರ ಬೇಸತ್ತ ನಾಗರಾಜ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. ಸೋಲದೇವನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಷರತ್ತುಬದ್ಧ ಅನುಮತಿ

ಇದೇ ಮೊದಲು, ಬಿಜೆಪಿಯಿಂದ ಗೆದ್ದು TMC ಸೇರಿದ್ದ ಮುಕುಲ್ ರಾಯ್ ಶಾಸಕ ಸ್ಥಾನ ರದ್ದುಗೊಳಿಸಿದ ಹೈಕೋರ್ಟ್!

ಮೇಕೆದಾಟು ಯೋಜನೆ: ಕರ್ನಾಟಕಕ್ಕೆ ಗೆಲುವು; ತಮಿಳು ನಾಡು ಅರ್ಜಿ ಸುಪ್ರೀಂ ಕೋರ್ಟ್ ವಜಾ

Delhi Blast: ರೂ. 7.5 ಕೋಟಿ ವಂಚನೆ ಪ್ರಕರಣ, 3 ವರ್ಷ ಜೈಲು ಸೇರಿದ್ದ ಅಲ್ ಫಲಾಹ್ ವಿಶ್ವವಿದ್ಯಾನಿಲಯದ ಸಂಸ್ಥಾಪಕ!

ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ!

SCROLL FOR NEXT