ಬೆಂಗಳೂರು: ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರ ಕೊರೋನಾ ವೈರಸ್ ತಪಾಸಣಾ ವರದಿ ನೆಗೆಟಿವ್ ಬಂದಿದ್ದು, ಈ ವಿಚಾರವನ್ನು ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರ ಕಾರು ಚಾಲಕನಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಮುಂಜಾಗರೂಕತಾ ಕ್ರಮವಾಗಿ ಭಾಸ್ಕರ್ ರಾವ್ ಕ್ವಾರಂಟೈನ್‌ನಲ್ಲಿದ್ದರು. ಬಳಿಕ ಕೊರೊನಾ ತಪಾಸಣೆಯನ್ನು ಮಾಡಿಕೊಂಡಿದ್ದರು. ಇದೀಗ ಅವರ ಕೊರೋನಾ ವೈರಸ್ ತಪಾಸಣಾ ವರದಿ ಬಂದಿದ್ದು, ವರದಿ ನೆಗೆಟಿವ್ ಬಂದಿದೆ.
ಈ ಬಗ್ಗೆ ಟ್ವಿಟರ್ ನಲ್ಲಿ ಮಾಹಿತಿ ನೀಡಿರುವ ಭಾಸ್ಕರ್ ರಾವ್ ಅವರು, ನಿಮ್ಮೆಲ್ಲರ ಹಾರೈಕೆಗಳಿಗಾಗಿ ಧನ್ಯವಾದ ತಿಳಿಸುತ್ತೇನೆ. ನನ್ನ ಕೊರೋನಾ ವರದಿ ನೆಗೆಟಿವ್ ಬಂದಿದ್ದು, ಮರಳಿ ಕರ್ತವ್ಯಕ್ಕೆ ಹಾಜರಾಗುತ್ತಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ.