ರಾಜ್ಯ

ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳ ಮೇಲೆ ಕೊರೋನಾ ಕರಿಛಾಯೆ: ಸಿಗುತ್ತಿಲ್ಲ ಪೌಷ್ಟಿಕ ಆಹಾರ

Shilpa D

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚಿನ ಪ್ರಮಾಣದಲ್ಲಿ ಅಪೌಷ್ಠಿಕತೆಯಿಂದ ಕೂಡಿರುವ ಮಕ್ಕಳಿದ್ದು, ಕೊರೋನಾ ಹಿನ್ನೆಲೆಯಲ್ಲಿ ಈ ಮಕ್ಕಳಿಗೆ ಪೌಷ್ಠಿಕ ಆಹಾರ ಪೂರೈಕೆಯಾಗುತ್ತಿಲ್ಲ.

ಅಂಗನವಾಡಿ ಕಾರ್ಯಕರ್ತೆಯರು ಕೊರೋನಾ ಕೆಲಸಲದಲ್ಲಿ ನಿರತರಾಗಿರುವುದರಿಂದ ಅಂಗನವಾಡಿ ಆಹಾರವನ್ನೇ ನಂಬಿಕೊಂಡಿದ್ದ ಮಕ್ಕಳ ಮೇಲೆ ಪರಿಣಾಮ ಬೀರುತ್ತಿದೆ, ದೀರ್ಘ ಕಾಲದ ವಿಳಂಬದ ನಂತರ ಕೆಲವು ಪ್ರದೇಶಗಳಲ್ಲಿ ಮಾತ್ರ ಆಹಾರ ಪೂರೈಕೆಯಾಗುತ್ತಿದೆ ಎಂದು ನಿವಾಸಿಗಳು ತಿಳಿಸಿದ್ದಾರೆ,

ಸರಿ ಸುಮಾರು 57 ಲಕ್ಷ ಫಲಾನುಭವಿಗಳು ಈ ಯೋಜನೆಯಡಿ ಇದ್ದಾರೆ,  ಅದರಲ್ಲಿ 5.5 ಲಕ್ಷ ಅಪೌಷ್ಠಿಕತೆಯಿಂದ ಕೂಡಿದ ಮಕ್ಕಳಿದ್ದಾರೆ. ಕಲಬುರಗಿಲ್ಲಿ 2.2 ಲಕ್ಷ ಮಕ್ಕಳಿದ್ದು, ಬೀದರ್, ರಾಯಚೂರು, ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿಯೂ ಅಪೌಷ್ಠಿಕತೆಯಿಂದ ಕೂಡಿದ ಮಕ್ಕಳು ಅತಿ ಕಡಿಮೆ ತೂಕ ವಿರುವ ಮಕ್ಕಳು ಅನಿಮಿಯಾದಿಂದ ಬಳಲುತ್ತಿದ್ದಾರೆ.

ಕೊರೋನಾ ಕರ್ತವ್ಯಕ್ಕಾಗಿ ಹೆಚ್ಚಿನ ಅಧಿಕಾರಿಗಳ ವೇಳಾಪಟ್ಟಿ ಬದಲಾಯಿಸಲಾಗಿದೆ ಮತ್ತು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಹೆಚ್ಚಿನ ಅಧಿಕಾರಿಗಳು ಆರೋಗ್ಯ ಕಾರ್ಯಗಳಲ್ಲಿ ನಿರತರಾಗಿದ್ದಾರೆ, ಪೌಷ್ಠಿಕ ಆಹಾರ ಪೂರೈಕೆಯಲ್ಲಿ ವಿಳಂಬವಾಗುತ್ತಿರುವುದು ನಿಜ, ಈ ಬಗ್ಗೆ ಗಮನ ಹರಿಸಿ ಸಮಸ್ಯೆ ಬಗೆ ಹರಿಸುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಲ್ಲಾರಿ ಜಿಲ್ಲೆಯಲ್ಲಿ 43,000 ಕ್ಕೂ ಹೆಚ್ಚು ಮಕ್ಕಳಿದ್ದು,  ಇವರು ಸರ್ಕಾರಿ ಅನುದಾನಿತ ಪೌಷ್ಠಿಕಾಂಶದ ಫಲಾನುಭವಿಗಳಾಗಿದ್ದಾರೆ. ಇತ್ತೀಚೆಗೆ ಹರಪನಹಳ್ಳಿ ತಾಲ್ಲೂಕಿನಲ್ಲಿ ವಿತರಣಾ ನಿಯಮಗಳನ್ನು ಉಲ್ಲಂಘಿಸಿದ ನಂತರ ಸರಬರಾಜಿನ ಜವಾಬ್ದಾರಿಯನ್ನು ಅಮಾನತುಗೊಳಿಸಲಾಗಿದೆ. ಇದೇ ವೇಳೆ ಅಂಗನವಾಡಿ ಕಾರ್ಯಕರ್ತೆರು ಕೊರೋನಾ ಕರ್ತವ್ಯದಲ್ಲಿ ನಿರತರಾಗಿರುವ ಕಾರಣ ಆಹಾರ ಪೂರೈಕೆಯಲ್ಲಿ ವಿಳಂಬವಾಗುತ್ತಿದೆ ಎಂದು ತಿಳಿಸಿದ್ದಾರೆ.

SCROLL FOR NEXT