ಮಂಡ್ಯ: ಕೊರೊನಾಗೆ ಹೆದರಿ ಆಸ್ಪತ್ರೆಯಲ್ಲೆ ಕೋವಿಡ್ ರೋಗಿ ಆತ್ಮಹತ್ಯೆ
ಕೊರೋನಾಗೆ ಹೆದರಿ ಕೋವಿಡ್ ಸೋಂಕಿತನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿಂದು ನಡೆದಿದೆ.
ಮಂಡ್ಯ: ಕೊರೋನಾಗೆ ಹೆದರಿ ಕೋವಿಡ್ ಸೋಂಕಿತನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿಂದು ನಡೆದಿದೆ.
ಕೋವಿಡ್-19 ಸೋಂಕಿಗೆ ಒಳಗಾಗಿದ್ದ 55 ವರ್ಷದ ವ್ಯಕ್ತಿ ಬುಧವಾರ ರಾತ್ರಿ ಕೋವಿಡ್ ಆಸ್ಪತ್ರೆಯಲ್ಲಿ ನೇಣು ಹಾಕಿಕೊಂಡಿದ್ದಾರೆ. ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಚ್.ಪಿ. ಮಂಚೇಗೌಡ ಈ ಕುರಿತು ಪ್ರತಿಕ್ರಿಯಿಸಿ, ಮಳವಳ್ಳಿ ತಾಲ್ಲೂಕಿನ ಕಂದೇಗಾಲ ಗ್ರಾಮದ ವ್ಯಕ್ತಿ ಕಿಡ್ನಿ ಸಮಸ್ಯೆಯಿಂದ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಇದರಿಂದ ತೀವ್ರ ನೊಂದಿದ್ದ ಅವರು ಬುಧವಾರ ಮಧ್ಯರಾತ್ರಿ ಶೌಚಾಲಯಕ್ಕೆ ತೆರಳಿ, ಕಿಟಕಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ
ಎಂದರು.
ಇತರ ರೋಗಿಗಳು ಶೌಚಾಲಯಕ್ಕೆ ತೆರಳಿದಾಗ ಘಟನೆ ಬೆಳಕಿಗೆ ಬಂದಿದೆ ಎಂದ ಅವರು, ಸರ್ಕಾರದ ಕೋವಿಡ್ ಕಾರ್ಯಸೂಚಿಯಂತೆ ಗುರುವಾರ ಬೆಳಿಗ್ಗೆ ಅಂತ್ಯಕ್ರಿಯೆ ನೆರವೇರಿಸಲಾಗಿದೆ ಎಂದು ತಿಳಿಸಿದ್ದಾರೆ.
ವರದಿ: ನಾಗಯ್ಯ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.