ಕೋವಿಡ್ ಆಸ್ಪತ್ರೆ 
ರಾಜ್ಯ

ಲಕ್ಷಣಗಳಿಲ್ಲದ ಸೋಂಕಿತರ ಸಂಖ್ಯೆ ಏರಿಕೆಯಿಂದಲೇ ಗಂಭೀರ ಪರಿಸ್ಥಿತಿಯಲ್ಲಿರುವ ರೋಗಿಗಳಿಗೆ ಬೆಡ್ ಸಿಗುತ್ತಿಲ್ಲ!

ಕೊರೋನಾ ಸೋಂಕು ರೋಗ ಲಕ್ಷಣಗಳಿಲ್ಲದ ಸೋಂಕಿತರು ಆಸ್ಪತ್ರೆಗಳಿಗೆ ದಾಖಲಾಗುತ್ತಿರುವುದರಿಂದಲೇ ಗಂಭೀರ ಪರಿಸ್ಥಿತಿಯಲ್ಲಿರುವ ರೋಗಿಗಳಿಗೆ ಬೆಡ್ ಗಳು ಸಿಗುತ್ತಿಲ್ಲ ಎಂದು ಕೋವಿಡ್ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರೊಬ್ಬರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಕೊರೋನಾ ಸೋಂಕು ರೋಗ ಲಕ್ಷಣಗಳಿಲ್ಲದ ಸೋಂಕಿತರು ಆಸ್ಪತ್ರೆಗಳಿಗೆ ದಾಖಲಾಗುತ್ತಿರುವುದರಿಂದಲೇ ಗಂಭೀರ ಪರಿಸ್ಥಿತಿಯಲ್ಲಿರುವ ರೋಗಿಗಳಿಗೆ ಬೆಡ್ ಗಳು ಸಿಗುತ್ತಿಲ್ಲ ಎಂದು ಕೋವಿಡ್ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರೊಬ್ಬರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ನಗರದಲ್ಲಿ ದಿನೇದಿನೇ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಏತನ್ಮಧ್ಯೆ ಸರ್ಕಾರ ಸೋಂಕಿತರಿಗೆ ಬೆಡ್ ಗಳ ವ್ಯವಸ್ಥೆ ಕಲ್ಪಿಸುವ ಕುರಿತು ತಲೆಕೆಡಿಸಿಕೊಂಡಿದೆ. ಆದರೆ ಆಸ್ಪತ್ರೆಗಳಲ್ಲಿನ ನೈಜ ಚಿತ್ರಣವನ್ನು ಅಲ್ಲಿ ಕೆಲಸ ಮಾಡುವ ವೈದ್ಯರೇ ಬಹಿರಂಗ ಪಡಿಸಿದ್ದು, ಕೊವಿಡ್ ಆಸ್ಪತ್ರೆಗಳಲ್ಲಿ ಇತ್ತೀಚಿನ ದಿನಗಳಲ್ಲಿ ರೋಗ ಲಕ್ಷಣಗಳೇ ಇಲ್ಲದ ಸೋಂಕಿತರ ದಾಖಲಾತಿ ಗಣನೀಯವಾಗಿ ಏರಿಕೆಯಾಗುತ್ತಿದೆ. ಇದರಿಂದ ಗಂಭೀರ ಪರಿಸ್ಥಿತಿಯಲ್ಲಿರುವ ರೋಗಿಗಳಿಗೆ ಬೆಡ್ ಗಳು ಸಿಗದೇ ಹೋಗುವ ಅಪಾಯವಿದೆ ಎಂದು ಹೇಳಿದ್ದಾರೆ.

ಸ್ವತಃ ಆರೋಗ್ಯ ಇಲಾಖೆಯೇ ಸೋಂಕು ಲಕ್ಷಣಗಳಿಲ್ಲದ 50 ವರ್ಷಕ್ಕಿಂತ ಕಡಿಮೆ ವಯಸ್ಸಿನ, ಯಾವುದೇ ರೀತಿಯ ಇತರೆ ಆರೋಗ್ಯ ಸಮಸ್ಯೆಗಳಿಲ್ಲದ ರೋಗಿಗಳು ಮನೆಗಳಲ್ಲೇ ಪ್ರತ್ಯೇಕವಾಗಿದ್ದು ಚಿಕಿತ್ಸೆ ಪಡೆಯಬಹುದು ಅಥವಾ ಕೋವಿಡ್ ಕೇರ್ ಸೆಂಟರ್ ನಲ್ಲಿ ಚಿಕಿತ್ಸೆ ಪಡೆಯಬಹುದು ಎಂದು ಹೇಳಿದೆ. ಆದರೂ ಕೋವಿಡ್ ಆಸ್ಪತ್ರೆಗಳಲ್ಲಿ ಬಿಬಿಎಂಪಿ ಅಧಿಕಾರಿಗಳ ಶಿಫಾರಸ್ಸಿನ ಮೇರೆಗೆ ರೋಗಲಕ್ಷಣ ರಹಿತ ಸೋಂಕಿತರನ್ನು ತಂದು ದಾಖಲಿಸಲಾಗುತ್ತಿದೆ. ಇದನ್ನು ತಡೆದರೆ ಆಸ್ಪತ್ರೆಗಳಲ್ಲಿನ ಬೆಡ್ ಗಳ ಒತ್ತಡ ಖಂಡಿತಾ ಕಡಿಮೆಯಾಗಲಿದೆ. ಆಗ ಆಕ್ಸಿಜನ್ ಬೇಕಿರುವ ಗಂಭೀರ ಸ್ಥಿತಿಯಲ್ಲಿರುವ ರೋಗಿಗಳಿಗೆ ಸೂಕ್ತ ಸಮಯದಲ್ಲಿ ಬೆಡ್ ಸಿಕ್ಕಿ ಅವರ ಪ್ರಾಣ ಉಳಿಸಬಹುದಾಗಿದೆ ಎಂದು  ಹೇಳಿದ್ದಾರೆ. 

ಆಸ್ಪತ್ರೆಗಳಿಗೂ ಈ ರೋಗಲಕ್ಷಣಗಳಿಲ್ಲದ ರೋಗಿಗಳನ್ನು ಉಪಚರಿಸುವುದ ಅತ್ಯಂತ ಸುಲಭದ ಕಾರ್ಯವಾಗಿದ್ದು, ಅಲ್ಲದೆ ಇದರಿಂದ ಆಸ್ಪತ್ರೆಗಳ ಆದಾಯ ಕೂಡ ಹೆಚ್ಚುತ್ತದೆ. ಬಿಬಿಎಂಪಿ ಮಾತ್ರವಲ್ಲದೆ ಇನ್ನೂ ಕೆಲ ರೋಗಿಗಳು ಸಚಿವರು ಮತ್ತು ಶಾಸಕರ ಶಿಫಾರಸ್ಸಿನ ಮೇರೆಗೆ ಬಂದು ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ.  ಒಂದು ರೀತಿಯಲ್ಲಿ ಬಿಬಿಎಂಪಿಯೇ ಸೂಕ್ತ ತರಬೇತಿ ಇಲ್ಲದ ಸಿಬ್ಬಂದಿಗಳನ್ನಿಟ್ಟುಕೊಂಡು ಹೊಟೆಲ್ ನಡೆಸಿದಂತೆ. ಓರ್ವ ಸೋಂಕಿತ ವ್ಯಕ್ತಿಗೆ ಬಳಕೆ ಮಾಡಿದ ಬೆಡ್ ಅನ್ನು ಮುಂದಿನ 10 ದಿನಗಳ ಕಾಲ ಬಳಕೆ ಮಾಡುವಂತಿಲ್ಲ. ಇದೂ ಕೂಡ ಬೆಡ್ ಗಳ ಕೊರತೆಗೆ ಕಾರಣವಾಗಿದೆ. ನಾವು ನಮಗಿರುವ ಸಂಪನ್ಮೂಲಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಬಳಸಬೇಕು ಎಂದು ವೈದ್ಯರು ಕಿಡಿಕಾರಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಕ್ಷಣಾ, ಭದ್ರತಾ ಒಪ್ಪಂದ ಬಲವರ್ಧನೆ: ಭಾರತ- ಜರ್ಮನಿ ಮಹತ್ವದ ಕ್ರಮಗಳ ಘೋಷಣೆ!

ಸ್ವಾತಂತ್ರ್ಯ ಬಳಿಕ ಇದೇ ಮೊದಲು: ಮಕರ ಸಂಕ್ರಾಂತಿಗೆ ಮತ್ತೊಂದು ಹೊಸ 'ದಾಖಲೆ'ಗೆ ಸಜ್ಜಾದ ಪ್ರಧಾನಿ ಮೋದಿ!

'ಅಜ್ಮೀರ್' ದರ್ಗಾ ಶಿವ ದೇಗುಲವಾಗಿತ್ತು: ಕೋರ್ಟ್ ಮೆಟ್ಟಿಲೇರಿದ ವಿವಾದ!

'ವಿಬಿ-ಜಿ-ರಾಮ್' ಕಾಯ್ದೆ ವಿರುದ್ಧ ಕಾನೂನು ಸಮರ: ವಿಶೇಷ ಅಧಿವೇಶನ ಕರೆದು ಚರ್ಚೆ- ಸಿಎಂ ಸಿದ್ದರಾಮಯ್ಯ

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಇರಾನ್ ಸಂಸತ್ ಸ್ಪೀಕರ್ ಖಡಕ್ ವಾರ್ನಿಂಗ್!

SCROLL FOR NEXT