ಮೈಸೂರು: ಕೊರೊನಾ ಸೋಂಕಿತ ಮನೆಯಲ್ಲೇ ಆತ್ಮಹತ್ಯೆ
ಕೊರೊನಾ ಸೋಂಕಿತ ವ್ಯಕ್ತಿ ಓರ್ವರು ತಮ್ಮ ನಿವಾಸದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೈಸೂರು: ಕೊರೊನಾ ಸೋಂಕಿತ ವ್ಯಕ್ತಿ ಓರ್ವರು ತಮ್ಮ ನಿವಾಸದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಜೆ.ಕೆ.ಟೈರ್ಸ್ ಕಾರ್ಖಾನೆಯಲ್ಲಿ ಉದ್ಯೋಗಿಯಾಗಿದ್ದ 57 ವರ್ಷದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡವರು. ಜು. 19ರಂದು ಇವರಿಗೆ ಕೊರೊನಾ ದೃಢಪಟ್ಟಿದ್ದರಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದರು. ಬಳಿಕ ಜು. 23ರಂದು ಹೋಂ ಐಸೊಲೇಷನ್ ಚಿಕಿತ್ಸೆ ಪಡೆಯುವಂತೆ ವೈದ್ಯರು ಅವರಿಗೆ ಸೂಚಿಸಿದ್ದರು.
ಗುರುವಾರ ರಾತ್ರಿ ಅವರು ಗೋಕುಲಂನಲ್ಲಿರುವ ತಮ್ಮ ನಿವಾಸಕ್ಕೆ ಬಂದಿದ್ದು, ಮಹಡಿಯ ಕೋಣೆಯೊಂದರಲ್ಲಿ ಪ್ರತ್ಯೇಕವಾಗಿ ಊಟ ಮಾಡಿ ಮಲಗಿದ್ದರು. ಶುಕ್ರವಾರ ಬೆಳಿಗ್ಗೆ ಕುಟುಂಬಸ್ಥರು ಉಪಾಹಾರ ನೀಡಲು ಹೋದಾಗ ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ಬೆಳಕಿಗೆ ಬಂದಿದೆ. ಕೊರೋನಾ ಸೋಂಕು ಇರುವುದು ಖಾತರಿಯಾದ ಬಳಿಕ ಅವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ವಿ.ವಿ ಪುರಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.