ರಾಜ್ಯ

ತಳ ಸಮುದಾಯದವರಿಗೆ ವಿವಿ ಕುಲಪತಿ ಸ್ಥಾನ ನೀಡುವಂತೆ ಸಿದ್ದರಾಮಯ್ಯ ಮನವಿ

Nagaraja AB

ಬೆಂಗಳೂರು: ರಾಜ್ಯದ ವಿಶ್ವ ವಿದ್ಯಾಲಯಗಳ ಕುಲಪತಿ ಹಾಗೂ ಸಾಂವಿಧಾನಿಕ ಸಂಸ್ಥೆಗಳ ಅಧ್ಯಕ್ಷ, ಸದಸ್ಯರ ಹುದ್ದೆಗಳಿಗೆ
ತಳ ಸಮುದಾಯದ ವಿದ್ವಾಂಸರನ್ನು ನೇಮಿಸಬೇಕೆಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಯಡಿಯೂರಪ್ಪ, ರಾಜ್ಯಪಾಲ ವಜುಭಾಯಿ ವಾಲಾ ಹಾಗೂ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ್ ನಾರಾಯಣ್‍ಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ 25 ವಿಶ್ವ ವಿದ್ಯಾಲಯಗಳಿದ್ದರೂ, ಜಾನಪದ ವಿಶ್ವ ವಿದ್ಯಾಲಯದ ಕುಲಪತಿಯನ್ನು ಹೊರತು ಪಡಿಸಿ ಉಳಿದ ಯಾವುದೇ
ವಿಶ್ವ ವಿದ್ಯಾಲಯಗಳಿಗೂ ಪರಿಶಿಷ್ಟ ಜಾತಿಗೆ ಸೇರಿದ ಕುಲಪತಿಗಳಿಲ್ಲ.ಇದು ಕರ್ನಾಟಕ ರಾಜ್ಯ ವಿಶ್ವ ವಿದ್ಯಾಲಯಗಳ ಕಾಯ್ದೆಯ ಪ್ರಕಾರ ಸಾಮಾಜಿಕ ನ್ಯಾಯದ ವಿರುದ್ಧವಾಗಿದೆ. ಆದ್ದರಿಂದ ಖಾಲಿ ಇರುವ ಹಾಗೂ ಮುಂದೆ ಖಾಲಿಯಾಗುವ ವಿಶ್ವ ವಿದ್ಯಾಲಯಗಳ ಕುಲಪತಿಗಳ ಹುದ್ದೆಗೆ ಪರಿಶಿಷ್ಟ ಜಾತಿ ಅಥವ ತಳವರ್ಗಗಳಿಗೆ ಸಾಮಾಜಿಕ ನ್ಯಾಯದ ಆಧಾರದ ಮೇಲೆ ಸ್ಥಾನ ನೀಡಿ ನೇಮಕ ಮಾಡುವಂತೆ ಮನವಿ ಮಾಡಿದ್ದಾರೆ.

ಈ ಬಗ್ಗೆ  ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಹಾಗೂ ವೀರಭದ್ರ ಚನ್ನಮಲ್ಲ ಸ್ವಾಮೀಜಿ ನನನ್ನು ಭೇಟಿಯಾಗಿ ಗಮನ ಸೆಳೆದಿದ್ದರು ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಕೆಪಿಎಸ್‍ಸಿ ಸೇರಿದಂತೆ ಸಂವಿಧಾನಿಕ ಹುದ್ದೆಗಳ ನೇಮಕದ ಸಂದರ್ಭದಲ್ಲಿ ಸಾಮಾಜಿಕ ನ್ಯಾಯ ತತ್ವವನ್ನು ಗೌರವಿಸಿ ನೇಮಕ ಮಾಡುವಂತೆಯೂ ಕೂಡ ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

SCROLL FOR NEXT